AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೇಮ್ ಚೇಂಜರ್’ ಒಟಿಟಿ ರಿಲೀಸ್: ಫೆಬ್ರವರಿ 7ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

ರಾಮ್ ಚರಣ್, ಕಿಯಾರಾ ಅಡ್ವಾಣಿ, ಎಸ್​.ಜೆ. ಸೂರ್ಯ ಮುಂತಾದವರು ನಟಿಸಿದ ‘ಗೇಮ್ ಚೇಂಜರ್’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಬಹಿರಂಗ ಆಗಿದೆ. ಫೆ.7ರಿಂದ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಹಿಂದಿ ವರ್ಷನ್ ಬಿಡುಗಡೆ ಇನ್ನೂ ತಡವಾಗಲಿದೆ.

‘ಗೇಮ್ ಚೇಂಜರ್’ ಒಟಿಟಿ ರಿಲೀಸ್: ಫೆಬ್ರವರಿ 7ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ
Ram Charan
ಮದನ್​ ಕುಮಾರ್​
|

Updated on: Feb 04, 2025 | 3:14 PM

Share

ಶಂಕರ್​ ನಿರ್ದೇಶನದ ‘ಗೇಮ್ ಚೇಂಜರ್’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಚಿತ್ರಮಂದಿರದಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸೋತ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ. ಒಟಿಟಿಯಲ್ಲಾದರೂ ಜನರು ಈ ಸಿನಿಮಾವನ್ನು ನೋಡಿ ಮೆಚ್ಚಿಕೊಳ್ಳಬಹುದು ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಗೇಮ್ ಚೇಂಜರ್’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ರಾಮ್ ಚರಣ್​, ಕಿಯಾರಾ ಅಡ್ವಾಣಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಜನವರಿ 10ರಂದು ಚಿತ್ರಮಂದಿರದಲ್ಲಿ ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಿತ್ತು. ಅದ್ದೂರಿ ಬಜೆಟ್​ನಲ್ಲಿ ದಿಲ್ ರಾಜು ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆದರೆ ಹಾಕಿದ ಬಂಡವಾಳ ವಾಪಸ್ ಬಂದಿಲ್ಲ. ಸ್ಟಾರ್ ಸಿನಿಮಾ ಆದ್ದರಿಂದ ಒಟಿಟಿಯಲ್ಲಿ ಈ ಚಿತ್ರಕ್ಕೆ ಬೇಡಿಕೆ ಇದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರದ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ ಖರೀದಿ ಮಾಡಿತ್ತು. ರಾಜಕೀಯದ ಕಥಾಹಂದರ ಈ ಸಿನಿಮಾದಲ್ಲಿದೆ.

ಚಿತ್ರಮಂದಿರದಲ್ಲಿ ರಿಲೀಸ್​ ಆಗಿ ಒಂದು ತಿಂಗಳು ಕಳೆಯುವುದರೊಳಗೆ ‘ಗೇಮ್ ಚೇಂಜರ್’ ಸಿನಿಮಾ ಒಟಿಟಿಗೆ ಬರುವಂತಾಗಿದೆ. ಫೆಬ್ರವರಿ 7ರಿಂದ ಈ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಒಟಿಟಿ ಪ್ರೇಕ್ಷಕರು ಈ ಚಿತ್ರಕ್ಕೆ ಯಾವ ರೀತಿಯ ವಿಮರ್ಶೆ ನೀಡುತ್ತಾರೆ ಎಂಬುದನ್ನು ತಿಳಿಯಬೇಕಿದೆ. ತೆಲುಗಿನ ಈ ಸಿನಿಮಾ ಕನ್ನಡ, ತಮಿಳು ಮುಂತಾದ ಭಾಷೆಗಳಿಗೆ ಡಬ್ ಆಗಿದೆ. ಈ ಸಿನಿಮಾ ಹಿಂದಿ ಭಾಷೆಗೂ ಡಬ್ ಆಗಿದೆ. ಆದರೆ ಹಿಂದಿ ವರ್ಷನ್ ಒಟಿಟಿ ರಿಲೀಸ್ ಬಗ್ಗೆ ಇನ್ನೂ ಮಾಹಿತಿ ಬಹಿರಂಗ ಆಗಿಲ್ಲ.

ಇದನ್ನೂ ಓದಿ: ಸಾಲು ಸಾಲು ಸರಣಿ, ಸಿನಿಮಾಗಳನ್ನು ರಿಲೀಸ್ ಮಾಡಲು ನೆಟ್​ಫ್ಲಿಕ್ಸ್ ರೆಡಿ; ಸಿನಿ ಪ್ರಿಯರಿಗೆ ಹಬ್ಬ

‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ಅವರು ಜಿಲ್ಲಾಧಿಕಾರಿ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಅವರು ನಟಿಸಿದ್ದಾರೆ. ಎಸ್​.ಜೆ. ಸೂರ್ಯ, ಸುನಿಲ್, ಜಯರಾಮ್, ಶ್ರೀಕಾಂತ್, ಅಂಜಲಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಹಾಡುಗಳನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಚಿತ್ರದ ಬಾಕ್ಸ್ ಆಫೀಸ್​ ಲೆಕ್ಕದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನಿರ್ಮಾಪಕರನ್ನು ಟ್ರೋಲ್ ಮಾಡಲಾಗಿತ್ತು. ಆ ಬಗ್ಗೆ ರಾಮ್ ಗೋಪಾಲ್ ವರ್ಮಾ ಕೂಡ ಟೀಕೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ