ಒಟಿಟಿಯಲ್ಲಿ ಪ್ರಸಾರವಾಗಲಿದೆ ಹನ್ಸಿಕಾ ಮದುವೆ ಝಲಕ್; ಫಸ್ಟ್ ಪೋಸ್ಟರ್ ರಿಲೀಸ್
ಕಳೆದ ವರ್ಷ ಡಿಸೆಂಬರ್ 4ರಂದು ಹನ್ಸಿಕಾ ಹಾಗೂ ಸೊಹೈಲ್ ಮದುವೆ ಆಗಿದ್ದರು. ಅದ್ದೂರಿಯಾಗಿ ಈ ಮದುವೆ ಶಾಸ್ತ್ರಗಳು ನಡೆದಿದ್ದವು ಎಂಬುದಕ್ಕೆ ಇವರು ಹಂಚಿಕೊಂಡ ಫೋಟೋಗಳು ಸಾಕ್ಷ್ಯ ನೀಡಿದ್ದವು.
ಒಟಿಟಿ ಪ್ಲಾಟ್ಫಾರ್ಮ್ಗಳು ಪ್ರೇಕ್ಷಕರನ್ನು ಸೆಳೆಯಲು ಹೊಸಹೊಸ ಪ್ರಯೋಗಗಳನ್ನು ಮಾಡುತ್ತಿವೆ. ಆ ಪೈಕಿ ಸೆಲೆಬ್ರಿಟಿಗಳ ಮದುವೆ ವಿಡಿಯೋ ಪ್ರಸಾರ ಕೂಡ ಒಂದು. ಈ ಮೊದಲು ಕತ್ರಿನಾ ಕೈಫ್ (Katrina Kaif) ಹಾಗೂ ವಿಕ್ಕಿ ಕೌಶಲ್ ಮದುವೆ ವಿಡಿಯೋ ಒಟಿಟಿಯಲ್ಲಿ ಪ್ರಸಾರವಾಗಲಿದೆ ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ನಯನತಾರಾ-ವಿಘ್ನೇಶ್ ಶಿವನ್ ಮದುವೆ ವಿಡಿಯೋ ಕೂಡ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಈಗ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಹಾಗೂ ಸೊಹೈಲ್ ಕತುರಿಯಾ ಮದುವೆ ಕಾರ್ಯಕ್ರಮದ ಝಲಕ್ಅನ್ನು ಪ್ರಸಾರ ಮಾಡಲು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ರೆಡಿ ಆಗಿದೆ. ಈ ಪ್ರೋಮೋ ಅನ್ನು ಹಾಟ್ಸ್ಟಾರ್ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ.
ಕಳೆದ ವರ್ಷ ಡಿಸೆಂಬರ್ 4ರಂದು ಹನ್ಸಿಕಾ ಹಾಗೂ ಸೊಹೈಲ್ ಮದುವೆ ಆಗಿದ್ದರು. ಅದ್ದೂರಿಯಾಗಿ ಈ ಮದುವೆ ಶಾಸ್ತ್ರಗಳು ನಡೆದಿದ್ದವು ಎಂಬುದಕ್ಕೆ ಇವರು ಹಂಚಿಕೊಂಡ ಫೋಟೋಗಳು ಸಾಕ್ಷ್ಯ ನೀಡಿದ್ದವು. ಈಗ ಹನ್ಸಿಕಾ ಮದುವೆ ವಿಡಿಯೋ ಹಾಟ್ಸ್ಟಾರ್ನಲ್ಲಿ ಪ್ರಸಾರವಾಗುವ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇದಕ್ಕೆ ‘ಲವ್ ಶಾದಿ ಡ್ರಾಮಾ’ ಎಂದು ಹೆಸರು ಇಡಲಾಗಿದೆ. ಇದರ ಫಸ್ಟ್ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮದ ಪ್ರಸಾರ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ.
31ನೇ ವಯಸ್ಸಿಗೆ ಹನ್ಸಿಕಾ ಮೋಟ್ವಾನಿ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಬಾಲನಟಿಯಾಗಿಯೇ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹೃತಿಕ್ ರೋಷನ್ ನಟನೆಯ ‘ಕೋಯಿ ಮಿಲ್ ಗಯಾ’ ಸಿನಿಮಾದಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಬಳಿಕ ಹೀರೋಯಿನ್ ಆಗಿ ಬಡ್ತಿ ಪಡೆದುಕೊಂಡರು. ತಮಿಳು, ತೆಲುಗು, ಮಲಯಾಳಂ, ಕನ್ನಡದಲ್ಲಿ ಅಭಿನಯಿಸಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಒಟ್ಟು 50 ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಇದೆ.
ಇದನ್ನೂ ಓದಿ: Hansika Motwani: ಈಜಿಪ್ಟ್ ಪಿರಮಿಡ್ಗಳ ಮುಂದೆ ನಿಂತು ಪೋಸ್ ನೀಡಿದ ನಟಿ ಹನ್ಸಿಕಾ
ಹನ್ಸಿಕಾ ಹಾಗೂ ಸೊಹೈಲ್ ಉತ್ತಮ ಸ್ನೇಹಿತರಾಗಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರಿತು. ಕಳೆದ ವರ್ಷ ಮದುವೆ ಆಗುವ ಮೂಲಕ ಸಂತಸ ಹಂಚಿಕೊಂಡಿದ್ದರು. ತಮ್ಮಿಬ್ಬರ ಲವ್ ಸ್ಟೋರಿ ಆರಂಭ ಆಗಿದ್ದು ಹೇಗೆ ಎಂಬ ಬಗ್ಗೆ ಈ ವಿಡಿಯೋದಲ್ಲಿ ಮಾಹಿತಿ ಸಿಗಲಿದೆಯೇ ಎನ್ನುವ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ