AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರುತ್ತಿದೆ ‘ಹನುಮಾನ್ ಅಂಶ್’: ಯಾವಾಗ? ಎಲ್ಲಿ ನೋಡಬಹುದು?

ಭಕ್ತಿಪ್ರಧಾನ ಚಿತ್ರ ‘ಹನುಮಾನ್ ಅಂಶ್’ ಒಟಿಟಿಗೆ ಬರಲು ಸಜ್ಜಾಗಿದೆ. ನವೆಂಬರ್ 27ರಿಂದ ಈ ಚಿತ್ರ ಸೋನಿ ಲೈವ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಸಿನಿಮಾದ ನಿರ್ದೇಶಕ ವಿಶಾಲ್ ಚತುರ್ವೇದಿ ಮತ್ತು ಸೋನಿ ಲೈವ್ ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿಯಾಗಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಮ್ಯಾಜಿಕ್ ಮಾಡಿದ ಈ ಸಿನಿಮಾ ಒಟಿಟಿಯಲ್ಲೂ ಮ್ಯಾಜಿಕ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಒಟಿಟಿಗೆ ಬರುತ್ತಿದೆ ‘ಹನುಮಾನ್ ಅಂಶ್’: ಯಾವಾಗ? ಎಲ್ಲಿ ನೋಡಬಹುದು?
Hanuman Ansh
ಮಂಜುನಾಥ ಸಿ.
|

Updated on:Nov 08, 2026 | 9:18 AM

Share

ಮುಖ್ಯಾಂಶಗಳು

  • ಒಟಿಟಿಗೆ ಬರುತ್ತಿದೆ ‘ಹನುಮಾನ್ ಅಂಶ್’ ಸಿನಿಮಾ
  • ‘ಹನುಮಾನ್ ಅಂಶ್’ ಒಟಿಟಿ ರಿಲೀಸ್ ದಿನಾಂಕ
  • ನವೆಂಬರ್ 27ಕ್ಕೆ ಈ ಸಿನಿಮಾ ಒಟಿಟಿಗೆ ಬರಲಿದೆ

‘ಹನುಮಾನ್ ಅಂಶ್’ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡಿದ ಸಿನಿಮಾ. ಕೇವಲ ಎರಡು ಕೋಟಿ ಬಜೆಟ್ ಹಾಕಿ ನಿರ್ಮಾಣ ಮಾಡಿದ ಈ ಸಿನಿಮಾ ಸುಮಾರು 500 ಕೋಟಿ ಹಣವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿತು. ಆಗಸ್ಟ್ 7ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆದ ಈ ಸಿನಿಮಾ, ಈಗಲೂ ಹಲವು ಚಿತ್ರಮಂದಿರಗಳಲ್ಲಿ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ಆದರೆ ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ. ರಿಲೀಸ್ ಆದ ತಿಂಗಳುಗಳ ಬಳಿಕ ಕೊನೆಗೂ ಸಿನಿಮಾ ಒಟಿಟಿಗೆ ಕಾಲಿಡುತ್ತಿದ್ದು, ಅಧಿಕೃತ ದಿನಾಂಕದ ಘೋಷಣೆ ಮಾಡಲಾಗಿದೆ.

ಭಕ್ತಿಪ್ರಧಾನ ಚಿತ್ರ ‘ಹನುಮಾನ್ ಅಂಶ್’ ಒಟಿಟಿಗೆ ಬರಲು ಸಜ್ಜಾಗಿದೆ. ನವೆಂಬರ್ 27ರಿಂದ ಈ ಚಿತ್ರ ಸೋನಿ ಲೈವ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಸಿನಿಮಾದ ನಿರ್ದೇಶಕ ವಿಶಾಲ್ ಚತುರ್ವೇದಿ ಮತ್ತು ಸೋನಿ ಲೈವ್ ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿಯಾಗಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಮ್ಯಾಜಿಕ್ ಮಾಡಿದ ಈ ಸಿನಿಮಾ ಒಟಿಟಿಯಲ್ಲೂ ಮ್ಯಾಜಿಕ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಬೋಧನೆಗಳಿಂದ ಪ್ರೇರಿತವಾದ ಈ ಚಿತ್ರದಲ್ಲಿ ಶೋಭಿನಾವ್ ಸತ್ಯ ಅವರು ಬಾಬಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಾಯಿಯನ್ನು ಕಳೆದುಕೊಂಡು ದೇವರನ್ನು ಹುಡುಕುತ್ತಾ ಮನೆ ಬಿಟ್ಟು ಹೊರಡುವ ಲಕ್ಷ್ಮಣ್ ದಾಸ್ ಎಂಬ ಬಾಲಕ ಆ ನಂತರ ನೀಮ್ ಕರೋಲಿ ಬಾಬಾ ಆಗಿ ಪರಿವರ್ತನೆಗೊಂಡು ಭಕ್ತರ ಆರಾಧ್ಯ ದೈವ ಆಗುವುದೇ ಸಿನಿಮಾದ ಕತೆ.

ಇದನ್ನೂ ಓದಿ:ಶ್ರೀ ಶ್ರೀ ರವಿ ಶಂಕರ್ ಗುರೂಜಿ ಭೇಟಿಯಾದ ‘ಹನುಮಾನ್ ಅಂಶ್’ ನಟ ಶೋಭಿನವ್ ಸತ್ಯ

ಕೇವಲ ₹2 ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ ಆಗಸ್ಟ್ 7ರಂದು ತೆರೆಕಂಡಿತ್ತು. ಆರಂಭದಲ್ಲಿ ಜುಲೈ 31ಕ್ಕೆ ನಿಗದಿಯಾಗಿದ್ದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಬಿಡುಗಡೆಗೂ ಮುನ್ನ ಒಟಿಟಿ ವೇದಿಕೆಗಳು ಖರೀದಿಗೆ ಆಸಕ್ತಿ ತೋರಿರಲಿಲ್ಲ ಎನ್ನಲಾಗಿದೆ. ಮೊದಲ ದಿನ ಕೇವಲ ₹10 ಲಕ್ಷ ಗಳಿಸಿದ್ದ ಚಿತ್ರ, ಪ್ರೇಕ್ಷಕರ ಬಾಯಿಮಾತಿನ ಪ್ರಚಾರದಿಂದ ಕ್ರಮೇಣ ಜನಪ್ರಿಯವಾಯಿತು. ಹೊಂಬಾಳೆ ಫಿಲ್ಮ್ಸ್ ಸೆಪ್ಟೆಂಬರ್ 11ರಂದು ಇದನ್ನು ವಿಶ್ವಾದ್ಯಂತ ಬಿಡುಗಡೆ ಮಾಡಿತ್ತು. ವರದಿಗಳ ಪ್ರಕಾರ ಒಟ್ಟು ಜಾಗತಿಕ ಗಳಿಕೆ 500 ಕೋಟಿ ದಾಟಿದೆ ಎನ್ನಲಾಗಿದೆ.

ಚಿತ್ರ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಸ್ಟ್ರೀಮ್ ಆಗಲಿದೆ ಎಂದು ವರದಿಯಾಗಿದೆ. ಕನ್ನಡ ಆವೃತ್ತಿಯ ಕುರಿತು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಟಿಟಿ ಬಳಿಕ ಸೋನಿ ಮ್ಯಾಕ್ಸ್ ವಾಹಿನಿಯಲ್ಲಿ ಟಿವಿ ಪ್ರಸಾರ ನಡೆಯುವ ನಿರೀಕ್ಷೆಯಿದ್ದು, ದಿನಾಂಕ ಇನ್ನೂ ಪ್ರಕಟವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 am, Sun, 8 November 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ