AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತದಿನೋತ್ಸವ ಆಚರಿಸಿದ ಬಳಿಕವೇ ‘ಹನುಮಾನ್ ಅಂಶ್’ ಒಟಿಟಿಗೆ; 100 ಕೋಟಿ ರೂ ಡೀಲ್?

ನೀಮ್ ಕರೋಲಿ ಬಾಬಾ ಅವರ ಜೀವನ ಆಧಾರಿತ 'ಹನುಮಾನ್ ಅಂಶ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಜಯಭೇರಿ ಬಾರಿಸಿದೆ. ಚಿತ್ರದ 100 ಕೋಟಿ ರೂಪಾಯಿ ಒಟಿಟಿ ಡೀಲ್ ವದಂತಿಗಳನ್ನು ನಿರ್ಮಾಪಕಿ ರಾಗಿಣಿ ಸೋನಾ ನಿರಾಕರಿಸಿದ್ದಾರೆ. ಸಿನಿಮಾ ಥಿಯೇಟರ್‌ನಲ್ಲಿ 100 ದಿನ ಪೂರೈಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಶತದಿನೋತ್ಸವ ಆಚರಿಸಿದ ಬಳಿಕವೇ ‘ಹನುಮಾನ್ ಅಂಶ್’ ಒಟಿಟಿಗೆ; 100 ಕೋಟಿ ರೂ ಡೀಲ್?
ಹನುಮನ್ ಅಂಶ್
ರಾಜೇಶ್ ದುಗ್ಗುಮನೆ
|

Updated on:Sep 23, 2026 | 10:52 AM

Share

ಮುಖ್ಯಾಂಶಗಳು

  • 2 ಕೋಟಿ ಬಜೆಟ್, 366 ಕೋಟಿ ಗಳಿಕೆ
  • ಬಾಕ್ಸ್ ಆಫೀಸ್‌ನಲ್ಲಿ 'ಹನುಮಾನ್ ಅಂಶ' ಇತಿಹಾಸ
  • 100 ಕೋಟಿ ಒಟಿಟಿ ಡೀಲ್ ಸತ್ಯ ಬಿಚ್ಚಿಟ್ಟ ನಿರ್ಮಾಪಕಿ

ನೀಮ್ ಕರೋಲಿ ಬಾಬಾ ಜೀವನಧಾರಿತ ‘ಹನುಮಾನ್ ಅಂಶ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿದ ಅಭೂತಪೂರ್ವ ಇತಿಹಾಸ ಈಗ ಎಲ್ಲರ ಗಮನ ಸೆಳೆದಿದೆ. ಅತೀ ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರ ಕೋಟಿ ಕೋಟಿ ಗಳಿಸಿ ಹೊಸ ದಾಖಲೆ ಬರೆದಿದೆ. ಥಿಯೇಟರ್‌ನಲ್ಲಿ ಧೂಳೆಬ್ಬಿಸುತ್ತಿರುವ ಈ ಚಿತ್ರದ ಒಟಿಟಿ ಹಕ್ಕುಗಳ ಮಾರಾಟದ ಬಗ್ಗೆ ನಿರ್ಮಾಪಕಿ ರಾಗಿಣಿ ಸೋನಾ ಈಗ ಮಾತನಾಡಿದ್ದಾರೆ.

ಕೇವಲ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಚಿತ್ರವು ಮೂಲ ಬಜೆಟ್‌ಗಿಂತ 180 ಪಟ್ಟು ಹೆಚ್ಚು ಹಣ ಗಳಿಸಿದೆ. 1975ರ ಸೂಪರ್ ಹಿಟ್ ‘ಜೈ ಸಂತೋಷಿ ಮಾ’ ಚಿತ್ರದ ನಂತರ ಅತ್ಯಂತ ಹೆಚ್ಚು ಲಾಭ ತಂದ ಭಾರತೀಯ ಸಿನಿಮಾ ಇದಾಗಿದೆ. ಭಾರತದ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಬರೋಬ್ಬರಿ 331 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಕಲೆಹಾಕಿದೆ. ವಿಶ್ವದಾದ್ಯಂತ ಒಟ್ಟು 366 ಕೋಟಿ ರೂಪಾಯಿ ಗಳಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ಚಿತ್ರದ ಒಟಿಟಿ ಹಕ್ಕುಗಳು 100 ಕೋಟಿ ರೂಪಾಯಿಗೆ ಮಾರಾಟವಾಗಿವೆ ಎಂಬ ಸುದ್ದಿಗಳನ್ನು ನಿರ್ಮಾಪಕಿ ರಾಗಿಣಿ ನಿರಾಕರಿಸಿದ್ದಾರೆ. ನಮಗೆ ಹಲವು ದೊಡ್ಡ ಒಟಿಟಿ ಸಂಸ್ಥೆಗಳಿಂದ ಆಫರ್‌ಗಳು ಬರುತ್ತಿರುವುದು ನಿಜ. ಆದರೆ 100 ಕೋಟಿಯ ಆಫರ್ ಖಂಡಿತ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಒಂದು ನಿರ್ಧಾರ ತೆಗೆದುಕೊಂಡು, ನಂತರ ಒಟಿಟಿಯಲ್ಲಿ ರಿಲೀಸ್ ಮಾಡಲಾಗುತ್ತಿದೆ.

‘ಈ ಸಿನಿಮಾವನ್ನು ಜನರು ಥಿಯೇಟರ್‌ನಲ್ಲೇ ನೋಡಬೇಕು ಎಂಬುದು ನಮ್ಮ ಇಚ್ಛೆ. ಚಿತ್ರದ ಕೊನೆಯಲ್ಲಿ ಬರುವ ಹನುಮಾನ್ ಚಾಲೀಸಾ ದೃಶ್ಯ ಪ್ರೇಕ್ಷಕರನ್ನು ಬೇರೊಂದು ಲೋಕಕ್ಕೇ ಕರೆದೊಯ್ಯುತ್ತದೆ. ಅನೇಕ ಜನರು ಥಿಯೇಟರ್‌ನಲ್ಲಿ ಚಪ್ಪಲಿ ಬಿಟ್ಟು ಕೈ ಮುಗಿದು ಕುಳಿತು ಸಿನಿಮಾ ನೋಡುತ್ತಿದ್ದಾರೆ. ಒಟಿಟಿಯಲ್ಲಿ ಸಿಗದ ಅಪರೂಪದ ಆಧ್ಯಾತ್ಮಿಕ ಅನುಭವ ಚಿತ್ರಮಂದಿರಗಳಲ್ಲಿ ಸಿಗುತ್ತಿದೆ’ ಎಂದು ರಾಗಿಣಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 15 ಬಾರಿ ‘ಹನುಮಾನ್ ಅಂಶ್’ ಸಿನಿಮಾ ನೋಡಿ ಕಣ್ಣೀರಿಟ್ಟ ನೀಮ್ ಕರೋಲಿ ಬಾಬಾ ಪುತ್ರಿ

‘ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಯಾದರೂ ನಮ್ಮ ಚಿತ್ರದ ಓಟಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ‘ದೃಶ್ಯಂ 3’ ಚಿತ್ರದಿಂದ ಚಿತ್ರಮಂದಿರಗಳ ಸಂಖ್ಯೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಬಹುದು. ಆದರೂ ನಮ್ಮ ಸಿನಿಮಾ ಚಿತ್ರಮಂದಿರಗಳಲ್ಲಿ 100 ದಿನಗಳ ಯಶಸ್ವಿ ಪ್ರದರ್ಶನ ಪೂರೈಸುವ ಸಂಪೂರ್ಣ ಭರವಸೆ ನಮಗಿದೆ. ನೀಮ್ ಕರೋಲಿ ಬಾಬಾ ಮತ್ತು ಹನುಮಂತನ ಆಶೀರ್ವಾದ ನಮ್ಮ ಮೇಲಿದೆ’ ಎಂದು ನಿರ್ಮಾಪಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:47 am, Wed, 23 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ