AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಪ್ರಸಾರದಲ್ಲಿ ದೊಡ್ಡ ಬದಲಾವಣೆ; ಒಟಿಟಿಯಲ್ಲಿ ಫಸ್ಟ್​, ಟಿವಿಯಲ್ಲಿ ಆಮೇಲೆ

Bigg Boss on OTT: ಈಗ ಮತ್ತೆ ಬಿಗ್ ಬಾಸ್ ಶೋ ಆರಂಭವಾಗುತ್ತಿದೆ. ಕನ್ನಡ ಮಾತ್ರವಲ್ಲ ಹಿಂದಿಯಲ್ಲೂ ಈ ಶೋ ಪ್ರಸಾರ ಕಾಣಲಿದೆ. ಟಿವಿ ಕ್ಷೇತ್ರದ ಬಲು ಜನಪ್ರಿಯ ರಿಯಾಲಿಟಿ ಶೋ ಆಗಿದೆ ಬಿಗ್​ಬಾಸ್. ಟಿವಿಯಲ್ಲಿ ಕೋಟ್ಯಂತರ ಮಂದಿ ವೀಕ್ಷಕರು ಬಿಗ್​ಬಾಸ್ ವೀಕ್ಷಣೆ ಮಾಡುತ್ತಾರೆ. ಆದರೆ ಇದೀಗ ಒಟಿಟಿಯಲ್ಲಿ ಬಿಗ್​ಬಾಸ್ ಶೋ ಮೊದಲು ಪ್ರಸಾರ ಆಗಲಿದೆ.

ಬಿಗ್ ಬಾಸ್ ಪ್ರಸಾರದಲ್ಲಿ ದೊಡ್ಡ ಬದಲಾವಣೆ; ಒಟಿಟಿಯಲ್ಲಿ ಫಸ್ಟ್​, ಟಿವಿಯಲ್ಲಿ ಆಮೇಲೆ
Bigg Boss Hindi
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Jul 08, 2025 | 11:38 AM

Share

ಈಗ ಮತ್ತೆ ಬಿಗ್ ಬಾಸ್ ಶೋ (Bigg Boss Show) ಆರಂಭವಾಗುತ್ತಿದೆ. ಕನ್ನಡ ಮಾತ್ರವಲ್ಲ ಹಿಂದಿಯಲ್ಲೂ ಈ ಶೋ ಪ್ರಸಾರ ಕಾಣಲಿದೆ. ಹಿಂದಿಯಲ್ಲಿ 19ನೇ ಸೀಸನ್ ಈ ಬಾರಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪ್ರಸಾರ ಆಗುವ ನಿರೀಕ್ಷೆ ಇದೆ. ಎಂದಿನಂತೆ ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡಲಿದ್ದಾರೆ. ವಿಶೇಷ ಎಂದರೆ ಈ ಬಾರಿ ಶೋ ಐದು ತಿಂಗಳು ಇರಲಿದೆ ಎನ್ನಲಾಗುತ್ತಿದೆ. ಈ ಮೂಲಕ ಮನರಂಜನೆ ಹೆಚ್ಚೇ ಇರುವ ನಿರೀಕ್ಷೆ ಇದೆ. ಈ ಮಧ್ಯೆ ಒಂದು ಅಚ್ಚರಿಯ ವಿಚಾರ ಹೊರ ಬಿದ್ದಿದೆ.

ಈ ಬಾರಿ ಹಿಂದಿ ಬಿಗ್ ಬಾಸ್​​ ಪ್ರಸಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲು ನಿರ್ಧರಿಸಿಯಾಗಿದೆ ಎನ್ನಲಾಗುತ್ತಿದೆ. ಈ ಮೊದಲೆಲ್ಲ ಶೋ ಟಿವಿ ಹಾಗೂ ಒಟಿಟಿಯಲ್ಲಿ ಒಟ್ಟಿಗೆ ಪ್ರಸಾರ ಕಾಣುತ್ತಿತ್ತು. ಆದರೆ, ಈ ಬಾರಿ ಒಟಿಟಿಗೆ ಹೆಚ್ಚಿನ ಆದ್ಯತೆ ನೀಡಲು ಜಿಯೋ ಹಾಟ್​ಸ್ಟಾರ್​ನಲ್ಲಿ ಶೋ ಮೊದಲು ಪ್ರಸಾರ ಕಾಣಲಿದೆ. ಆ ಬಳಿಕ ಟಿವಿಯಲ್ಲಿ ಬರಲಿದೆ ಎನ್ನಲಾಗಿದೆ.

ಇತ್ತೀಚೆಗೆ ಒಟಿಟಿಗೆ ಹೆಚ್ಚು ಆದ್ಯತೆ ನೀಡುವ ಕೆಲಸ ಆಗುತ್ತಿದೆ. ಈ ಕಾರಣದಿಂದ ಒಟಿಟಿಯಲ್ಲಿ ಮೊದಲು ಎಪಿಸೋಡ್ ಪ್ರಸಾರ ಆಗಲಿದೆ. ಒಂದೂವರೆ ಗಂಟೆಗಳ ಬಳಿಕ ಟಿವಿಯಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಮೂಲಕ ಡಿಜಿಟಲ್ ಪ್ರೇಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡುವ ಕೆಲಸ ಆಗುತ್ತಿದೆ.

ಕನ್ನಡದಲ್ಲೂ ಬದಲಾವಣೆ ಆಗುತ್ತದೆಯೇ?

ಈ ಶೋ ಕನ್ನಡದಲ್ಲೂ ಪ್ರಸಾರ ಕಾಣಲು ರೆಡಿ ಆಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೋ ಪ್ರಸಾರ ಆಗಲಿದೆ. ಹಿಂದಿಯಲ್ಲಿ ಈ ಬದಲಾವಣೆ ತರಲಾಗಿದೆ ಎಂದರೆ ಕನ್ನಡದಲ್ಲೂ ಅದನ್ನೇ ತರುವ ನಿರೀಕ್ಷೆ ಇದೆ. ಹಾಗಾದಲ್ಲಿ ಒಟಿಟಿಯಲ್ಲಿ ಶೋನ ಮೊದಲು ವೀಕ್ಷಿಸಬಹುದಾಗಿದೆ. ಸುದೀಪ್ ಅವರೇ ಈ ಶೋನ ನಡೆಸಿಕೊಡಲಿದ್ದಾರೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡುತ್ತರಾದರೂ, ಆಗಾಗ ಬೇರೆ ಬೇರೆ ಸೆಲೆಬ್ರಿಟಿಗಳು ಬರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.  ಸದ್ಯ ಕನ್ನಡದಲ್ಲಿ ಯಾವೆಲ್ಲ ಸ್ಪರ್ಧಿಗಳು ಬಿಗ್ ಬಾಸ್​ಗೆ ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಶೀಘ್ರವೇ ಪ್ರೋಮೋ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ