‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ

TV9 Digital Desk

| Edited By: Rajesh Duggumane

Updated on: Aug 07, 2022 | 6:30 AM

‘ಬಿಗ್ ಬಾಸ್​ ಒಟಿಟಿ’ಯಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಸೋನು ಗೌಡ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ.

‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
ಸೋನು

ಟಿಕ್​ ಟಾಕ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ (Social Media) ಖ್ಯಾತಿ ಪಡೆದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ‘ಬಿಗ್​ ಬಾಸ್​ ಒಟಿಟಿ ಕನ್ನಡ ಸೀಸನ್​ 1’ಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಎಂಟ್ರಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕೆಲವರು ಅವರ ಎಂಟ್ರಿ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಮೊದಲ ವಾರವೇ ಹೊರ ಬೀಳಲಿದ್ದಾರೆ ಎನ್ನುವ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಈಗ ಅವರು ನೇರ ಮಾತಿನಿಂದ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ.

‘ಬಿಗ್ ಬಾಸ್​ ಒಟಿಟಿ’ಯಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಸೋನು ಗೌಡ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ. ಸೋನು ಅವರ ಕೆಲ ಖಾಸಗಿ ಫೋಟೋಗಳು ಈ ಮೊದಲು ಲೀಕ್ ಆಗಿದ್ದವು. ಆ ಫೋಟೋಗಳು ತಮ್ಮದಲ್ಲ ಎಂದೇ ಅವರು ಹೇಳಿದ್ದರು. ಈಗ ಅವರು ಮನೆಯಲ್ಲಿ ನೇರ ಮಾತಿನ ಮೂಲಕ ಗಮನ ಸೆಳೆಯುತ್ತಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಸ್ಮೋಕ್ ಮಾಡುವ ವಿಚಾರ ಬಂತು. ನಟ ರೂಪೇಶ್​ ಅವರು ‘ನಾನು ಸ್ಮೋಕ್ ಮಾಡಲ್ಲ’ ಎಂದರು. ಇದಕ್ಕೆ ಸೋನು ಗೌಡ ಅವರು, ‘ಸ್ಮೋಕ್ ಮಾಡುವುದಿಲ್ಲವಾ? ನಾನು ಮಾಡ್ತೀನಿ’ ಎಂದರು. ‘ಸಿಗರೇಟ್ ಸೇದುತ್ತೀರಾ’ ಎಂದು ಆಶ್ಚರ್ಯ ರೀತಿಯಲ್ಲಿ ಕೇಳಿದರು ರೂಪೇಶ್. ‘ನಾನು ಸಿಗರೇಟ್ ಸೇದುತ್ತೇನೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ

ಇದನ್ನೂ ಓದಿ: ಬಿಗ್ ಬಾಸ್ ಮನೇಲಿ ಯಾರಾದ್ರು ಸಿಕ್ಕಿದ್ರೆ ಬಿಡಲ್ಲ: ಕಿಚ್ಚ ಕಾಲೆಳೆದಿದ್ದಕ್ಕೆ ನೇರ ಉತ್ತರ ಕೊಟ್ಟ ರೂಪೇಶ್

ಈ ಬಾರಿ ‘ಬಿಗ್ ಬಾಸ್​’ ಅನ್ನು ಒಟಿಟಿಯಲ್ಲಿ ಮಾತ್ರ ವೀಕ್ಷಿಸಬಹುದು. ವೂಟ್ ಆ್ಯಪ್​​ನ ಚಂದಾದಾರರಾದರೆ ಮಾತ್ರ ‘ಬಿಗ್ ಬಾಸ್ ಒಟಿಟಿ’ ವೀಕ್ಷಣೆ ಸಾಧ್ಯ. ಇಲ್ಲವಾದರೆ, ನೀವು ‘ಬಿಗ್ ಬಾಸ್’ ನೋಡಲು ಆಗುವುದಿಲ್ಲ. ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada