AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​ ರೋಷನ್​ಗೆ ಜೋಡಿ ಆಗ್ತಾರಾ ಚಿಕ್ಕಮಗಳೂರು ಹುಡುಗಿ? ನಭಾ ನಟೇಶ್​ಗೆ ಬಿಗ್​ ಆಫರ್​

‘ಇಸ್ಮಾರ್ಟ್​ ಶಂಕರ್​’ ತೆಲುಗು ಚಿತ್ರದಲ್ಲಿ ನಭಾಗೆ ಭರ್ಜರಿ ಗೆಲುವು ಸಿಕ್ಕಿತು. ಸದ್ಯ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಅವರು ಹೃತಿಕ್​ಗೆ ಜೋಡಿಯಾಗಬಹುದು ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಹೃತಿಕ್​ ರೋಷನ್​ಗೆ ಜೋಡಿ ಆಗ್ತಾರಾ ಚಿಕ್ಕಮಗಳೂರು ಹುಡುಗಿ? ನಭಾ ನಟೇಶ್​ಗೆ ಬಿಗ್​ ಆಫರ್​
ನಭಾ ನಟೇಶ್​, ಹೃತಿಕ್​ ರೋಷನ್​
TV9 Web
| Edited By: |

Updated on: Jul 31, 2021 | 5:34 PM

Share

ಬಾಲಿವುಡ್​ನಲ್ಲಿ ದೊಡ್ಡ ಸ್ಟಾರ್​ ಹೀರೋಗಳೆಲ್ಲ ವೆಬ್​ ಸಿರೀಸ್​ನತ್ತ ಗಮನ ಹರಿಸುತ್ತಿದ್ದಾರೆ. ಸೈಫ್​ ಅಲಿ ಖಾನ್, ಅಭಿಷೇಕ್​ ಬಚ್ಚನ್​, ಮನೋಜ್​ ಭಾಜಪೇಯ್​ ಮುಂತಾದವರು ಈಗಾಗಲೇ ವೆಬ್​ ಸರಣಿಗಳ (Web Series) ಮೂಲಕ ಯಶಸ್ಸು ಕಂಡಿದ್ದಾರೆ. ಈಗ ನಟ ಹೃತಿಕ್​ ರೋಷನ್​ (Hrithik Roshan) ಕೂಡ ಈ ಪ್ಲಾಟ್​ಫಾರ್ಮ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡೋಕೆ ಮುಂದಾಗುತ್ತಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರಿಗೆ ಜೋಡಿಯಾಗಿ ಕನ್ನಡದ ಬೆಡಗಿ ನಭಾ ನಟೇಶ್​ (Nabha Natesh) ಅಭಿನಯಿಸುವ ಸಾಧ್ಯತೆ ಇದೆ ಎಂಬ ಸುದ್ದಿ ದಟ್ಟವಾಗಿ ಕೇಳಿಬರುತ್ತಿದೆ.

ನಭಾ ನಟೇಶ್​ ಮೂಲತಃ ಚಿಕ್ಕಮಗಳೂರಿನವರು. ಈಗ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ನಟನೆ ಮತ್ತು ಮಾಡೆಲಿಂಗ್​ನಲ್ಲಿ ಅವರು ಭದ್ರವಾಗಿ ನೆಲೆಕಂಡುಕೊಳ್ಳುತ್ತಿದ್ದಾರೆ. ನಭಾ ಜೊತೆ ವೆಬ್​ ಸಿರೀಸ್​ ತಂಡದವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದು ನಿಜವೇ ಹೌದಾಗಿದ್ದರೆ ಕನ್ನಡದ ಈ ಕುವರಿಗೆ ಹೃತಿಕ್​ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಸಿಕ್ಕಂತಾಗುತ್ತದೆ. ಈಗಾಗಲೇ ಕರುನಾಡಿನ ಅನೇಕ ನಟಿಯರು ಬಾಲಿವುಡ್​ನಲ್ಲಿ ಮಿಂಚಿದ್ದಾರೆ. ಆ ಸಾಲಿಗೆ ನಭಾ ಕೂಡ ಸೇರ್ಪಡೆ ಆಗಲಿದ್ದಾರೆ.

ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ನಭಾ ಆಗಲಿ, ವೆಬ್​ ಸರಣಿ ತಂಡದವರಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಹೃತಿಕ್​ ರೋಷನ್​ ಅವರಿಗೆ ಇದು ಮೊದಲ ವೆಬ್​ ಸಿರೀಸ್​ ಆಗಿರುವುದರಿಂದ ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಸದ್ಯ ಅವರು ತಮ್ಮ ಮುಂದಿನ ಸಿನಿಮಾ ‘ಫೈಟರ್​’ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ದೀಪಿಕಾ ಪಡುಕೋಣೆ ಹೀರೋಯಿನ್.

ನಭಾ ಸಿನಿಕರಿಯರ್​ ಮೇಲೆ ಕಣ್ಣು ಹಾಯಿಸುವುದಾದರೆ, ಅವರು ಕನ್ನಡದಲ್ಲಿ ಸಿನಿಮಾ ಮಾಡಿದ್ದು ಕಡಿಮೆ. ಅವರು ನಟಿಸಿದ ಮೊದಲ ಸಿನಿಮಾ ‘ವಜ್ರಕಾಯ’. ಬಳಿಕ ‘ಲೀ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು. ‘ಸಾಹೇಬ’ ಸಿನಿಮಾದ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕಿದರು. ಆನಂತರ ಅವರು ಹಾರಿದ್ದು ಟಾಲಿವುಡ್​​ಗೆ. 2019ರಲ್ಲಿ ಬಂದ ‘ಇಸ್ಮಾರ್ಟ್​ ಶಂಕರ್​’ ತೆಲುಗು ಚಿತ್ರದಲ್ಲಿ ನಭಾಗೆ ಭರ್ಜರಿ ಗೆಲುವು ಸಿಕ್ಕಿತು. ಸದ್ಯ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಈ ನಡುವೆ ಹೃತಿಕ್​ಗೆ ಜೋಡಿಯಾಗಬಹುದು ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಇದನ್ನೂ ಓದಿ:

ಹೃತಿಕ್​ ಜತೆ ಕೈ ಜೋಡಿಸಲಿದ್ದಾರೆ ದಕ್ಷಿಣ ಭಾರತದ ಹೀರೋ: 150 ಕೋಟಿ ದಾಟಲಿದೆ ಸಿನಿಮಾ ಬಜೆಟ್​!

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

Follow Us
TV9 Web
TV9 Web

TV9 Kannada

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ