AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲ-ಸುದ್ದಿಯಿಲ್ಲ, ಏಕಾಏಕಿ ಒಟಿಟಿಯಲ್ಲಿ ರಾಘವೇಂದ್ರ ಸ್ಟೋರ್ಸ್ ಬಿಡುಗಡೆ

Raghvendra Stores: ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಶೀಘ್ರವೇ ಟಿವಿಗೂ ಬರಲಿದೆ.

ಸದ್ದಿಲ್ಲ-ಸುದ್ದಿಯಿಲ್ಲ, ಏಕಾಏಕಿ ಒಟಿಟಿಯಲ್ಲಿ ರಾಘವೇಂದ್ರ ಸ್ಟೋರ್ಸ್ ಬಿಡುಗಡೆ
ರಾಘವೇಂದ್ರ ಸ್ಟೋರ್ಸ್
ಮಂಜುನಾಥ ಸಿ.
|

Updated on: May 19, 2023 | 4:23 PM

Share

ಜಗ್ಗೇಶ್ (Jaggesh) ನಟನೆಯ ರಾಘವೇಂದ್ರ ಸ್ಟೋರ್ಸ್ (Raghvendra Stores) ಸಿನಿಮಾ ಕಳೆದ ತಿಂಗಳಾಂತ್ಯದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಬ್ರಹ್ಮಚಾರಿಯೊಬ್ಬ ಮದುವೆಯಾಗಲು ಪಡುವ ಪಡಿಪಾಟಿನ ಕುರಿತಾದ ಕತೆಯನ್ನು ಸಿನಿಮಾ ಒಳಗೊಂಡಿತ್ತು. ಚುನಾವಣೆ ಘೋಷಣೆ ನಡುವೆ ಬಿಡುಗಡೆ ಆಗಿದ್ದರೂ ಸಹ ಸಿನಿಮಾಕ್ಕೆ ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಿನಿಮಾ ಒಟಿಟಿಗೆ (OTT) ಯಾವಾಗ ಬರುತ್ತದೆ ಎಂದು ಕೆಲವರು ಕೇಳುತ್ತಿರುವ ಹೊತ್ತಿನಲ್ಲಿಯೇ ಹಠಾತ್ತನೆ ಯಾವುದೇ ಪ್ರಚಾರಗಳಿಲ್ಲದೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿಬಿಟ್ಟಿದೆ.

ಹೌದು, ರಾಘವೇಂದ್ರ ಸ್ಟೋರ್ಸ್ ಸಿನಿಮಾ ನಿನ್ನೆ (ಮೇ 18) ರಂದು ಮಧ್ಯರಾತ್ರಿ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸಿದೆ. ಯಾವುದೇ ಹೆಚ್ಚಿನ ಪ್ರಚಾರಗಳಿಲ್ಲದೆ ಸಿನಿಮಾ ಏಕಾಏಕಿ ಅಮೆಜಾನ್​ ಪ್ರೈಂಗೆ ಬಿಡುಗಡೆ ಆಗಿರುವುದು ಅಭಿಮಾನಿಗಳಿಗೆ ಆಶ್ಚರ್ಯ ತಂದಿದೆ. ಮೇ 26 ರಂದು ರಾಘವೇಂದ್ರ ಸ್ಟೋರ್ಸ್ ಸಿನಿಮಾ ಅಮೆಜಾನ್​ ಪ್ರೈಂನಲ್ಲಿ ಸ್ಟ್ರೀಮ್ ಆಗಲಿದೆ ಎಂದು ಈ ಹಿಂದೆ ಸುದ್ದಿ ಹರಿದಾಡಿತ್ತು ಆದರೆ ಈಗ ಒಂದು ವಾರ ಮುಂಚೆಯೇ ಅಂದರೆ ಮೇ 18ರ ಮಧ್ಯ ರಾತ್ರಿಯಿಂದಲೇ ಸ್ಟ್ರೀಮಿಂಗ್ ಪ್ರಾರಂಭಿಸಿದೆ.

ಐಪಿಎಲ್ ಹಾಗೂ ರಾಜ್ಯ ಚುನಾವಣೆ ನಡುವೆ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ನಿರ್ಮಾಪಕರಿಗೆ ಕಂಟೆಂಟ್ ಮೇಲಿರುವ ನಂಬಿಕೆಯಿಂದ ಸಿನಿಮಾವನ್ನು ಬಿಡುಗಡೆ ಮಾಡಿದ್ದಾರೆ ಎಂದು ಜಗ್ಗೇಶ್ ಹೇಳಿದ್ದರು. ಸಿನಿಮಾ ಸಹ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನವನ್ನೇ ಕಂಡಿತ್ತು, ರಾಘವೇಂದ್ರ ಸ್ಟೋರ್ಸ್ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ ಎಂದು ಸ್ವತಃ ಹೊಂಬಾಳೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹೇಳಿಕೊಂಡಿದ್ದರು. ಚುನಾವಣೆ ಇನ್ನಿತರೆ ಕಾರಣಗಳಿಂದ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲಾಗದಿದ್ದವರು ಈಗ ಸಿನಿಮಾವನ್ನು ಒಟಿಟಿಯಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ:ರಾಘವೇಂದ್ರ ಸ್ಟೋರ್ಸ್​ನಲ್ಲಿ ಬಹಳ ಚೆನ್ನಾಗಿದ್ದ ಸೀನ್ ಒಂದನ್ನು ತೆಗೆಯಲೇಬೇಕಾಯ್ತು: ಜಗ್ಗೇಶ್

ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಕತೆ ಪುನೀತ್ ರಾಜ್​ಕುಮಾರ್ ಅವರಿಗೆ ಬಹಳ ಇಷ್ಟವಾಗಿತ್ತು. ಕತೆ ಕೇಳಿದ ಅಪ್ಪು, ವಿಲನ್ ಪಾತ್ರಕ್ಕೆ ಲಿಂಕ್ ವೀಕ್ ಎನ್ನಿಸುತ್ತಿದೆ ಅದೊಂದನ್ನು ಕೊಡಿ ಇನ್ನೆಲ್ಲ ಸೂಪರ್ ಆಗಿದೆ ಎಂದಿದ್ದರು. ಅಲ್ಲದೆ ಈ ಸಿನಿಮಾಕ್ಕೆ ಒಂದು ಹಾಡು ಹಾಡುವ ಅಥವಾ ಯಾವುದಾದರೂ ಒಂದು ಸಣ್ಣ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆ ಅಪ್ಪುಗೆ ಇತ್ತು” ಎಂದು ಜಗ್ಗೇಶ್ ಸಿನಿಮಾ ಬಿಡುಗಡೆಗೆ ಮುನ್ನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ರಾಘವೇಂದ್ರ ಸ್ಟೋರ್ಸ್ ಸಿನಿಮಾವನ್ನು ಸಂತೋಶ್ ಆನಂದ್​ರಾಮ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಹೊಂಬಾಳೆ ಫಿಲಮ್ಸ್​ನ ವಿಜಯ್ ಕಿರಗಂದೂರು. ಸಿನಿಮಾದಲ್ಲಿ ದತ್ತಣ್ಣ, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಸೇರಿದಂತೆ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಶ್ವೇತಾ ಶ್ರೀವತ್ಸ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ