AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

Jana Nayagan: ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು ಪ್ರಭಾವ ಬಳಸಿ ಸಿನಿಮಾ ಬಿಡುಗಡೆ ಆಗದಂತೆ ತಡೆದಿದ್ದಾರೆ.

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?
Jana Nayagan
ಮಂಜುನಾಥ ಸಿ.
|

Updated on: Apr 10, 2026 | 1:09 PM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು ಪ್ರಭಾವ ಬಳಸಿ ಸಿನಿಮಾ ಬಿಡುಗಡೆ ಆಗದಂತೆ ತಡೆದಿದ್ದಾರೆ.

‘ಜನ ನಾಯಗನ್’ ಬಿಡುಗಡೆಯನ್ನು ಅನ್ಯಾಯವಾಗಿ ತಡೆದ ಬೆನ್ನಲ್ಲೆ ಇದೀಗ ಸಿನಿಮಾವನ್ನು ಆನ್​​ಲೈನ್​​ನಲ್ಲಿ ಲೀಕ್ ಮಾಡಿ, ಸಿನಿಮಾಕ್ಕೆ ಭಾರಿ ಪೆಟ್ಟು ನೀಡಲಾಗಿದೆ. ಸಿನಿಮಾದ ಹಲವು ದೃಶ್ಯಗಳು ಬಿಡಿ-ಬಿಡಿಯಾಗಿ ಹಾಗೂ ಕೆಲವು ಸೈಟ್​​ಗಳಲ್ಲಿ ಸಿನಿಮಾದ ಇಡೀ ಲಿಂಕ್ ಅನ್ನು ಪೋಸ್ಟ್ ಮಾಡಿ ಲೀಕ್ ಮಾಡಲಾಗಿದೆ. ಇದು ಚಿತ್ರತಂಡಕ್ಕೆ ಆತಂಕ ತಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿನಿಮಾದ ನಿರ್ದೇಶಕ ಎಚ್ ವಿನೋದ್, ಸಿನಿಮಾದ ಲೀಕ್ ಆಗಿರುವ ದೃಶ್ಯಗಳನ್ನು ಶೇರ್ ಮಾಡದಂತೆ ಮನವಿ ಮಾಡಿದ್ದಾರೆ. ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಿನಿಮಾದ ಲೀಕ್ ಹಿಂದೆ ಸೆನ್ಸಾರ್ ಮಂಡಳಿ ಇದೆ ಎಂದು ವಿಜಯ್ ಅವರ ಅಭಿಮಾನಿಗಳು ಆರೋಪಿಸುತ್ತಿದ್ದಾರೆ. ಇನ್ನು ಕೆಲವರು, ಚುನಾವಣೆ ಪ್ರಚಾರ ಸಿಗಲೆಂದು ವಿಜಯ್ ಅಭಿಮಾನಿಗಳೇ ‘ಜನ ನಾಯಗನ್’ ಸಿನಿಮಾ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಾರೆ ಸಿನಿಮಾ ಲೀಕ್ ಆಗಿದೆ, ಇದರಿಂದ ಯಾರಿಗೆ ಲಾಭವಾಗುತ್ತದೆಯೋ ತಿಳಿಯದು ಆದರೆ ನಿರ್ಮಾಪಕರಿಗಂತೂ ಭಾರಿ ನಷ್ಟವೇ ಆಗಲಿದೆ.

ಇದನ್ನೂ ಓದಿ:ದಳಪತಿ ವಿಜಯ್​​ಗೆ ಕೂಲ್​​ಡ್ರಿಂಗ್ ಕೊಟ್ಟ ಅಭಿಮಾನಿ: ವಿಡಿಯೋ ನೋಡಿ

ಸಿನಿಮಾ ಲೀಕ್ ಆಗಿರುವ ಕಾರಣ, ಹೆಚ್ಚಿನ ಡ್ಯಾಮೇಜ್ ಆಗುವ ಮುಂಚೆ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಮಾಣ ಸಂಸ್ಥೆ ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ ಒಟಿಟಿ ಬಿಡುಗಡೆಗೂ ಸಹ ಚುನಾವಣಾ ನೀತಿ ಸಂಹಿತೆ ಅಡ್ಡ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕೆವಿಎನ್ ನಿರ್ಮಾಣ ಸಂಸ್ಥೆಯು ‘ಜನ ನಾಯಗನ್’ ಸಿನಿಮಾದ ಮೇಲೆ ಸುಮಾರು 400 ಕೋಟಿ ಹೂಡಿಕೆ ಮಾಡಿದೆ. ಜನವರಿ ತಿಂಗಳಲ್ಲೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಕ್ಷುಲ್ಲಕ ಕಾರಣ ನೀಡಿ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲಿಲ್ಲ. ಬಳಿಕ ನ್ಯಾಯಾಲಯದಲ್ಲಿಯೂ ಸಹ ಕೆವಿಎನ್​​ಗೆ ‘ನ್ಯಾಯ’ ದೊರಕಲಿಲ್ಲ. ಇದೀಗ ಚುನಾವಣೆ ಬಂದಿರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ