ಒಟಿಟಿಗೆ ಬರುತ್ತಿದೆ ‘ಕಾಟೇರ’: ಯಾವಾಗ? ಯಾವ ಒಟಿಟಿ?

Kaatera OTT: ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಚಿತ್ರಮಂದಿರಗಳಲ್ಲಿ ಈಗಲೂ ಸಹ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದರ ನಡುವೆಯೇ ಒಟಿಟಿಗೆ ಸಹ ಲಗ್ಗೆ ಇಡುತ್ತಿದೆ.

ಒಟಿಟಿಗೆ ಬರುತ್ತಿದೆ ‘ಕಾಟೇರ’: ಯಾವಾಗ? ಯಾವ ಒಟಿಟಿ?

Updated on: Feb 02, 2024 | 9:57 PM

‘ಸಲಾರ್’, ‘ಡಂಕಿ’ ಸಿನಿಮಾಗಳ ಎದುರು ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡ ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಈಗಲೂ ಮುನ್ನುಗ್ಗುತ್ತಿದೆ. ದರ್ಶನ್ ಅಭಿಮಾನಿಗಳು ಮಾತ್ರವೇ ಅಲ್ಲದೆ ಕುಟುಂಬ ಪ್ರೇಕ್ಷಕರನ್ನು ಸಹ ಚಿತ್ರಮಂದಿರಗಳಿಗೆ ಕರೆತರುವಲ್ಲಿ ಯಶಸ್ವಿಯಾಗಿರುವ ದರ್ಶನ್ ನಟನೆಯ ‘ಕಾಟೇರ’ ಇದೀಗ ಒಟಿಟಿಗೆ ಬರುತ್ತಿದೆ. ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ನಿಗದಿ ಆಗಿದೆ.

196 ಚಿತ್ರಮಂದಿರ ಹಾಗೂ 63 ಮಲ್ಟಿಫ್ಲೆಕ್ಸ್ ಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ದರ್ಶನ್​ರ ಸಿನಿಮಾ ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಲಗ್ಗೆ ಇಡುತ್ತಿದೆ. ದರ್ಶನ್ ವೃತ್ತಿ ಜೀವನದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ ಕಾಟೇರ ಬಾಕ್ಸಾಫೀಸ್​ನಲ್ಲಿ ಕೋಟಿ-ಕೋಟಿ ಲೂಟಿ ಮಾಡಿದೆ. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದಾನೆ. ರಾಕ್​ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾ ಈಗಾಗಲೇ ಜೀ5 ಜೊತೆ ವ್ಯಾಪಾರ ವಹಿವಾಟು ಮುಗಿಸಿದೆ. ನಿರ್ಮಾಪಕರು ಹಾಗೂ ಓಟಿಟಿ ವೇದಿಕೆ ಜೊತೆ ಮಾಡಿಕೊಂಡ ಒಡಂಬಡಿಕೆಯಂತೆ ‘ಕಾಟೇರ’ ಮುಂದಿನ ವಾರ ಒಟಿಟಿಯಲ್ಲಿ ಬಿಡುಗಡೆ ಕಾಣಲಿದೆ.

ಜೀ5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು ಜೀ5 ನಲ್ಲಿ ಸಿನಿಮಾ ಪ್ರೀಮಿಯರ್ ಆಗಲಿದೆ.

ಇದನ್ನೂ ಓದಿ: Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್

ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ. ಈ ನಡುವೆಯೂ ರಾಜ್ಯದ 196 ಚಿತ್ರಮಂದಿರಗಳಲ್ಲಿ ಭರ್ಜರಿ ಓಟ ಮುಂದುವರಿಸಿದೆ. ಈ ಬೆನ್ನಲ್ಲೇ ಒಟಿಟಿ ಆಗಮನಕ್ಕೂ ದಿನಾಂಕ ನಿಗದಿಯಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ