ಓಟಿಟಿಗೆ ಬಂತು ‘ತಲೈವಿ’; ಚಿತ್ರಮಂದಿರದಲ್ಲಿ ಸೋತ ಕಂಗನಾ ಸಿನಿಮಾಗೆ ನೆಟ್​ಫ್ಲಿಕ್ಸ್​ನಲ್ಲಿ ಸಿಗುತ್ತಾ ಜಯ?

Thalaivii | Netflix: ವಿಮರ್ಶಕರು ‘ತಲೈವಿ’ ಸಿನಿಮಾವನ್ನು ಮೆಚ್ಚಿಕೊಂಡಿದ್ದರೂ ಕೂಡ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲು ಹೆಚ್ಚಿನ ಪ್ರೇಕ್ಷಕರು ಆಸಕ್ತಿ ತೋರಿಸಿಲ್ಲ. ಹಾಗಾಗಿ ಬಿಡುಗಡೆಯಾಗಿ ಕೇವಲ 15ಕ್ಕೆ ಈ ಚಿತ್ರ ಈಗ ನೆಟ್​ಫ್ಲಿಕ್ಸ್​ ಅಂಗಳಕ್ಕೆ ಬಂದಿದೆ.

ಓಟಿಟಿಗೆ ಬಂತು ‘ತಲೈವಿ’; ಚಿತ್ರಮಂದಿರದಲ್ಲಿ ಸೋತ ಕಂಗನಾ ಸಿನಿಮಾಗೆ ನೆಟ್​ಫ್ಲಿಕ್ಸ್​ನಲ್ಲಿ ಸಿಗುತ್ತಾ ಜಯ?
ಓಟಿಟಿಗೆ ಬಂತು ‘ತಲೈವಿ’ ಸಿನಿಮಾ
Follow us
TV9 Web
| Updated By: ಮದನ್​ ಕುಮಾರ್​

Updated on: Sep 25, 2021 | 1:27 PM

ನಟಿ ಕಂಗನಾ ರಣಾವತ್​ ಅವರು ಭಾರಿ ನಿರೀಕ್ಷೆಯೊಂದಿಗೆ ‘ತಲೈವಿ’ ಸಿನಿಮಾ ಬಿಡುಗಡೆ ಮಾಡಿದ್ದರು. ಸೆ.10ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಈ ಚಿತ್ರ ರಿಲೀಸ್​ ಆಗಿತ್ತು. ಆದರೆ ಹಲವು ಕಾರಣಗಳಿಂದಾಗಿ ಚಿತ್ರಮಂದಿರಲ್ಲಿ ‘ತಲೈವಿ’ ಯಶಸ್ಸು ಕಾಣಲಿಲ್ಲ. ಆದರೆ ಈಗ ಓಟಿಟಿ ವೇದಿಕೆಗೆ ಈ ಸಿನಿಮಾ ಕಾಲಿಟ್ಟಿದೆ. ನೆಟ್​ಫ್ಲಿಕ್ಸ್​ ಮೂಲಕ ಇದರ ಹಿಂದಿ ವರ್ಷನ್​ ಬಿಡುಗಡೆ ಆಗಿದೆ. ಸೆ.25ರಿಂದ ಪ್ರಸಾರ ಆರಂಭಿಸಿರುವ ಈ ಚಿತ್ರ ಆನ್​ಲೈನ್​ನಲ್ಲಾದರೂ ಗೆಲ್ಲುತ್ತಾ ಎಂಬ ಕೌತುಕದ ಪ್ರಶ್ನೆ ಈಗ ಮೂಡಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಯಶಸ್ಸು ಕಂಡವರು ಜಯಲಲಿತಾ. ಆದರೆ ಅವರ ಬದುಕಿನ ಕಥೆ ಹೇಳುವ ‘ತಲೈವಿ’ ಚಿತ್ರಕ್ಕೆ ಥಿಯೇಟರ್​ನಲ್ಲಿ ಯಶಸ್ಸು ಸಿಕ್ಕಿಲ್ಲ. ವಿಮರ್ಶಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದರೂ ಕೂಡ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲು ಹೆಚ್ಚಿನ ಪ್ರೇಕ್ಷಕರು ಆಸಕ್ತಿ ತೋರಿಸಿಲ್ಲ. ಹಾಗಾಗಿ ಬಿಡುಗಡೆಯಾಗಿ ಕೇವಲ 15ಕ್ಕೆ ಈ ಚಿತ್ರ ಈಗ ನೆಟ್​ಫ್ಲಿಕ್ಸ್​ ಅಂಗಳಕ್ಕೆ ಬಂದಿದೆ.

‘ತಲೈವಿ’ ಚಿತ್ರಕ್ಕೆ ಎ.ಎಲ್​. ವಿಜಯ್ ನಿರ್ದೇಶನವಿದೆ. ಅಚ್ಚರಿ ವಿಚಾರ ಏನೆಂದರೆ ಈಗಾಗಲೇ ‘ತಲೈವಿ 2’ ಸಿನಿಮಾ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಆದರೆ ಕಂಗನಾ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರದ ಸಹ ಬರಹಗಾರ ರಜತ್​ ಅರೋರಾ ಅವರು ಈ ಬಗ್ಗೆ ಇತ್ತೀಚೆಗೆ ಬಾಯಿ ಬಿಟ್ಟಿದ್ದಾರೆ.

‘ಜಯಲಲಿತಾ ಸಿಎಂ ಆದ ನಂತರ ಏನಾಯಿತು ಎಂದು ಸಿನಿಮಾದಲ್ಲಿ ತೋರಿಸಿಯೇ ಇಲ್ಲ ಅಂತ ಅನೇಕರು ಹೇಳುತ್ತಿದ್ದಾರೆ. ಹಾಗೆ ತೋರಿಸೋಕೆ ಸಾಕಷ್ಟು ವಿಷಯಗಳಿವೆ ಜಯಲಲಿತಾ ರಾಜಕೀಯ ಬದುಕು ತುಂಬಾನೇ ದೀರ್ಘವಾಗಿದೆ. ಇದನ್ನು 15 ನಿಮಿಷಗಳಲ್ಲಿ ಹೇಳಿದರೆ ನಾವು ಅದಕ್ಕೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ ಎಂದು ನಮಗನಿಸಿತು. ಹೀಗಾಗಿ, ‘ತಲೈವಿ ಪಾರ್ಟ್​ 2’ ತರೋಕೆ ಸಿದ್ಧತೆ ನಡೆದಿದೆ. ನಾವು ಕಂಗನಾ ಜತೆಗೆ ಮಾತುಕತೆ ನಡೆಸಿದ್ದೇವೆ’ ಎಂದು ರಜತ್​ ಅರೋರಾ ಹೇಳಿದ್ದಾರೆ.

ಇದನ್ನೂ ಓದಿ:

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ