AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು, ಹಿಂದಿ ಬಳಿಕ ತೆಲುಗಿಗೆ ಡಬ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’

Second Case of Seetharam: ‘ಸೀತಾರಾಮ್ ಬಿನೋಯಿ’ ಚಿತ್ರಮಂದಿರದಲ್ಲಿ ಸಾಧಾರಣ ಹಿಟ್ ಆದರೂ ಬಳಿಕ ಒಟಿಟಿಯಲ್ಲಿ ಸಿನಿಮಾಕ್ಕೆ ದೊಡ್ಡ ಯಶಸ್ಸು ದೊರಕಿತ್ತು. ಅದೇ ಸಿನಿಮಾದ ಮುಂದುವರೆದ ಭಾಗ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾಕ್ಕೂ ಒಟಿಟಿಯಲ್ಲಿ ಭರ್ಜರಿ ಪ್ರತಿಕ್ರಿಯೆ ದೊರಕುತ್ತಿದೆ. ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೆ ಸಿನಿಮಾ ಅನ್ನು ತೆಲುಗಿಗೆ ಡಬ್ ಮಾಡಲಾಗಿದೆ.

ತಮಿಳು, ಹಿಂದಿ ಬಳಿಕ ತೆಲುಗಿಗೆ ಡಬ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’
Second Case Of Seetharam
ಮಂಜುನಾಥ ಸಿ.
|

Updated on: Aug 01, 2026 | 9:18 PM

Share

ಮುಖ್ಯಾಂಶಗಳು

  • ವಿಜಯ್ ರಾಘವೇಂದ್ರ ಸಿನಿಮಾ ಸೆಕೆಂಡ್ ಕೇಸ್ ಆಫ್ ಸೀತಾರಾಮ್
  • ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಅಮೆಜಾನ್ ಪ್ರೈಂನಲ್ಲಿ ಲಭ್ಯವಿದೆ.
  • ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾ ಈಗ ಒಟಿಟಿಯಲ್ಲಿ ತೆಲುಗಿನಲ್ಲೂ ಲಭ್ಯ.

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂಬರ್ 18’ ಸಿನಿಮಾ ದೊಡ್ಡ ಯಶಸ್ಸು ಗಳಿಸಿತು. ವಿಜಯ್ ರಾಘವೇಂದ್ರ ಅವರ ನಟನೆ, ಸಿನಿಮಾದಲ್ಲಿದ್ದ ಸಸ್ಪೆನ್ಸ್ ಎಲ್ಲವೂ ಸಹ ಪ್ರೇಕ್ಷಕರನ್ನು ಸೆಳೆದಿತ್ತು. ಚಿತ್ರಮಂದಿರದಲ್ಲಿ ಸಾಧಾರಣ ಹಿಟ್ ಆದರೂ ಬಳಿಕ ಒಟಿಟಿಯಲ್ಲಿ ಸಿನಿಮಾಕ್ಕೆ ದೊಡ್ಡ ಯಶಸ್ಸು ದೊರಕಿತ್ತು. ಅದೇ ಸಿನಿಮಾದ ಮುಂದುವರೆದ ಭಾಗ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾಕ್ಕೂ ಒಟಿಟಿಯಲ್ಲಿ ಭರ್ಜರಿ ಪ್ರತಿಕ್ರಿಯೆ ದೊರಕುತ್ತಿದೆ. ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೆ ಸಿನಿಮಾ ಅನ್ನು ತೆಲುಗಿಗೆ ಡಬ್ ಮಾಡಲಾಗಿದೆ.

‘ಸೆಕೆಂಡ್ ಕೇಸ್ ಆರ್ಫ ಸೀತಾರಾಮ್’ ಸಿನಿಮಾ ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಕೇವಲ ಕನ್ನಡ ಭಾಷೆಯಲ್ಲಿ ಮಾತ್ರವೇ ರಿಲೀಸ್ ಆಗಿತ್ತು. ಆ ನಂತರ ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಬಿಡುಗಡೆ ಆಯ್ತು. ಆಗ ಕನ್ನಡದ ಜೊತೆಗೆ ತಮಿಳು ಮತ್ತು ಹಿಂದಿ ಭಾಷೆಗಳಲ್ಲೂ ಸಿನಿಮಾ ಲಭ್ಯವಿತ್ತು. ಅಮೆಜಾನ್​​​ನಲ್ಲಿ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾದ ಬಳಿಕ ಇದೀಗ ಸಿನಿಮಾ ಅನ್ನು ತೆಲುಗಿಗೂ ಡಬ್ ಮಾಡಲಾಗಿದೆ.

ಇಷ್ಟು ದಿನ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಅಮೆಜಾನ್ ಪ್ರೈಂನಲ್ಲಿ ಲಭ್ಯವಿತ್ತು, ಆದರೆ ಈಗ ತೆಲುಗು ಭಾಷೆಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ತೆಲುಗು ಪ್ರೇಕ್ಷಕರು ಸಸ್ಪೆನ್ಸ್ ಥ್ರಿಲ್ಲರ್, ಕ್ರೈಂ ಥ್ರಿಲ್ಲರ್ ಸಿನಿಮಾಗಳನ್ನು ಹೆಚ್ಚು ವೀಕ್ಷಿಸುತ್ತಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ನಡೆಯುವ ಕ್ರೈಂ ಥ್ರಿಲ್ಲರ್ ಸಿನಿಮಾಗಳು ತೆಲುಗು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗುತ್ತದೆ. ಇದೇ ಕಾರಣಕ್ಕೆ ಈಗ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ತಿಂಗಳುಗಳ ನಂತರ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಲಾಗಿದೆ.

ಇದನ್ನೂ ಓದಿ:‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು

‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾನಲ್ಲಿ ವಿಜಯ್ ರಾಘವೇಂದ್ರ ನಾಯಕ. ಗೋಪಾಲ್ ದೇಶಪಾಂಡೆ, ಸಾಗರ್ ಪುರಾಣಿಕ್, ಉಷಾ ಬಂಢಾರಿ ಇನ್ನೂ ಹಲವಾರು ಕಲಾವಿದರು ನಟಿಸಿದ್ದಾರೆ. ಸಿನಿಮಾ ಅನ್ನು ದೇವಿಶ್ರೀ ಪ್ರಸಾದ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣವೂ ಅವರದ್ದೆ. ವಿಜಯ್ ರಾಘವೇಂದ್ರ ಅವರ ವೃತ್ತಿ ಜೀವನಕ್ಕೆ ಹೊಸ ತಿರುವು ನೀಡಿದ ಸಿನಿಮಾ ಇದೆನ್ನಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್