Hrithik Roshan: ‘ಸಿಟಾಡೆಲ್​’ ವೆಬ್​ ಸಿರೀಸ್​ ನೋಡಿ ಮೆಚ್ಚುಗೆ ಸೂಚಿಸಿದ ಹೃತಿಕ್​ ರೋಷನ್​; ಪ್ರಿಯಾಂಕಾಗೆ ಖುಷಿ

Citadel Web Series: ಪ್ರಿಯಾಂಕಾ ಚೋಪ್ರಾ ಅವರಿಗೆ ಹೃತಿಕ್ ರೋಷನ್​ ಅವರಿಂದ ಸಿಕ್ಕ ಮೆಚ್ಚುಗೆ ಕಂಡು ಖುಷಿ ಆಗಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Hrithik Roshan: ‘ಸಿಟಾಡೆಲ್​’ ವೆಬ್​ ಸಿರೀಸ್​ ನೋಡಿ ಮೆಚ್ಚುಗೆ ಸೂಚಿಸಿದ ಹೃತಿಕ್​ ರೋಷನ್​; ಪ್ರಿಯಾಂಕಾಗೆ ಖುಷಿ
ಹೃತಿಕ್ ರೋಷನ್, ಪ್ರಿಯಾಂಕಾ ಚೋಪ್ರಾ
Follow us
ಮದನ್​ ಕುಮಾರ್​
|

Updated on: May 15, 2023 | 5:45 PM

ಹಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿರುವ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಅವರ ಇತ್ತೀಚಿನ ವೆಬ್ ಸೀರೀಸ್ ‘ಸಿಟಾಡೆಲ್’ (Citadel Web Series) ಅನ್ನು ನಟ ಹೃತಿಕ್ ರೋಷನ್ (Hrithik Roshan) ಅವರು ವೀಕ್ಷಿಸಿದ್ದಾರೆ. ನಂತರ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಚೋಪ್ರಾರನ್ನು ಅವರು ಹೊಗಳಿದ್ದಾರೆ. ಹೃತಿಕ್ ರೋಷನ್​ ಅವರು ತಮ್ಮ ವಿಮರ್ಶೆಯನ್ನು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಿಯಾಂಕಾ ನಮ್ಮ ಹೆಮ್ಮೆ’ ಎಂದು ಹೃತಿಕ್​ ಹೊಗಳಿದ್ದಾರೆ. ಪ್ರಿಯಾಂಕಾ ಚೋಪ್ರಾ (Priyanka Chopra) ಮತ್ತು ಹೃತಿಕ್ ರೋಷನ್​ ನಡುವೆ ಹಲವು ವರ್ಷಗಳ ಸ್ನೇಹ ಇದೆ. ‘ಕ್ರಿಶ್’ ಫ್ರಾಂಚೈಸ್, ‘ಅಗ್ನಿಪಥ್’ ಮುಂತಾದ ಚಿತ್ರಗಳಲ್ಲಿ ಅವರು ಒಟ್ಟಿಗೆ ಕೆಲಸ ಮಾಡಿದ್ದಾರೆ. ಈಗ ಸ್ನೇಹಿತೆಯ ವೆಬ್​ ಸೀರಿಸ್​ಗೆ ಹೃತಿಕ್​ ರೋಷನ್​ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಸಿಟಾಡೆಲ್​’ ನೋಡಿದ ಬಳಿಕ ಹೃತಿಕ್ ರೋಷನ್ ಅವರು ಅದರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ‘ಪ್ರಿಯಾಂಕಾ ಅವರನ್ನು ಸಿಟಾಡೆಲ್‌ನಲ್ಲಿ ನೋಡುವುದು ತುಂಬಾ ಅದ್ಭುತವಾಗಿದೆ. ಅದ್ಭುತ ಕೆಲಸ. ಅಲ್ಲದೆ, ಅದ್ಭುತ ಪರ್ಫಾರ್ಮೆನ್ಸ್​. ಅತ್ಯುತ್ತಮ ನಿರ್ದೇಶನ ಮತ್ತು ಚಿತ್ರಕಥೆ. ಪ್ರಿಯಾಂಕಾ ಅವರೇ, ನೀವು ಈ ಬಾರಿ ತುಂಬಾ ಚೆನ್ನಾಗಿ ನಟಿಸಿದ್ದೀರಿ. ತುಂಬ ಹೆಮ್ಮೆ ಎನಿಸುತ್ತದೆ’ ಎಂದು ಹೃತಿಕ್​ ರೋಷನ್​ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Priyanka Chopra: ತಂಗಿ ಎಂಗೇಜ್​ಮೆಂಟ್​ಗೆ ಬಂದ ಪ್ರಿಯಾಂಕಾ ಚೋಪ್ರಾ; ವಿಮಾನ ನಿಲ್ದಾಣದಲ್ಲಿ ಆಗಿದ್ದೇ ಬೇರೆ

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರಿಗೆ ಹೃತಿಕ್ ರೋಷನ್​ ಅವರಿಂದ ಸಿಕ್ಕ ಮೆಚ್ಚುಗೆ ಕಂಡು ಖುಷಿ ಆಗಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಗಳಲ್ಲಿ ರೀ-ಪೋಸ್ಟ್ ಮಾಡಿದ್ದಾರೆ. ‘ಧನ್ಯವಾದಗಳು ನನ್ನ ಸ್ನೇಹಿತನೇ’ ಎಂದು ಬರೆದುಕೊಂಡಿರುವ ಅವರು ಹೃತಿಕ್​ ರೋಷನ್​ರ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ. ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ‘ಸಿಟಾಡೆಲ್​’ ಪ್ರಸಾರ ಆಗುತ್ತಿದೆ.

ಇದನ್ನೂ ಓದಿ: Priyanka Chopra: ‘ಮಗಳಿಗಾಗಿ ಕೆಲಸ ತೊರೆದು, ದೇಶ ಬಿಟ್ಟುಹೋಗಲು ಸಿದ್ಧ’: ಪ್ರಿಯಾಂಕಾ ಚೋಪ್ರಾ ಜೋನಸ್​

ಪ್ರಿಯಾಂಕಾ ಚೋಪ್ರಾ ಅವರು ಈಗ ಹಾಲಿವುಡ್​ನಲ್ಲೇ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಹಿಂದಿ ಸಿನಿಮಾಗಳಿಂದ ಅವರು ಅಂತರ ಕಾಯ್ದುಕೊಂಡಿದ್ದಾರೆ. ಈಗ ‘ಲವ್​ ಅಗೇನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರೀಮಿಯರ್ ಶೋ ಇತ್ತೀಚೆಗೆ ನಡೆಯಿತು. ನ್ಯೂಯಾರ್ಕ್​ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಸ್ಯಾಮ್​ ಹ್ಯೂವನ್​ ಜೊತೆ ನಿಕ್​ ಜೋನಸ್​ ಕೂಡ ಭಾಗಿ ಆಗಿದ್ದರು. ಪ್ರಚಾರದ ವೇಳೆ ಮಾಧ್ಯಮದ ಕ್ಯಾಮೆರಾಗೆ ಪೋಸ್​ ನೀಡುವಾಗ ಪ್ರಿಯಾಂಕಾ ಅವರ ಮೂಗಿನ ಮೇಲೆ ಸ್ಯಾಮ್​ ಹ್ಯೂವನ್ ಅವರು ಕಿಸ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ