AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ

ದೊಡ್ಡ ಬಜೆಟ್ ಸಿನಿಮಾಗಳಿಗೆ ಸಿಗುವಷ್ಟು ಮೌಲ್ಯ ಸಣ್ಣ ಕನ್ನಡ ಚಿತ್ರಗಳಿಗೆ OTT ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಗುತ್ತಿಲ್ಲ. 'ತೀರ್ಥ ರೂಪ ತಂದೆಯವರಿಗೆ' ಚಿತ್ರ ಥಿಯೇಟರ್ ಯಶಸ್ಸು ಕಂಡರೂ, OTTಯಲ್ಲಿ ಪ್ರತಿ ವೀಕ್ಷಣೆಗೆ ಕೇವಲ 10 ರೂಪಾಯಿ ಸಿಗುತ್ತಿದೆ. ಇದು ಸಣ್ಣ ಬಜೆಟ್ ಚಿತ್ರಗಳ ನಿರ್ಮಾಪಕರಿಗೆ ಆಗುತ್ತಿರುವ ಅನ್ಯಾಯವನ್ನು ಎತ್ತಿ ತೋರಿಸುತ್ತದೆ. ವೀಕ್ಷಕರ ಬೆಂಬಲಕ್ಕಾಗಿ ನಿರ್ದೇಶಕರು ಮನವಿ ಮಾಡಿದ್ದಾರೆ.

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ
ತೀರ್ಥರೂಪ ತಂದೆಯವರಿಗೆ
ರಾಜೇಶ್ ದುಗ್ಗುಮನೆ
|

Updated on:Mar 02, 2026 | 10:32 AM

Share

ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ.

‘ತೀರ್ಥ ರೂಪ ತಂದೆಯವರಿಗೆ’ ಚಿತ್ರವನ್ನು ರಾಮೇನಹಳ್ಳಿ ಜಗನ್ನಾಥ ಅವರು ನಿರ್ದೇಶನ ಮಾಡಿದ್ದಾರೆ. ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಇದನ್ನು ನಿರ್ಮಾಣ ಮಾಡಿದೆ. ನಿಹಾರ್ ಮುಕೇಶ್, ರಚನಾ ಇಂದರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಥಿಯೇಟರ್​​ನಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ: ‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ

ಈ ಚಿತ್ರವನ್ನು ಒಟಿಟಿಯಲ್ಲೇ ನೋಡುವಂತೆ ರಾಮೇನಹಳ್ಳಿ ಜಗನ್ನಾಥ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಈ ಚಿತ್ರವನ್ನು ಪ್ರೈಮ್ ಸಂಸ್ಥೆಯವರು ದುಡ್ಡು ಕೊಟ್ಟು ಖರೀದಿ ಮಾಡಿಲ್ಲ. ಬದಲಿಗೆ ವೀವ್ಸ್ ಆಧಾರದ ಮೇಲೆ ಪೇಮೆಂಟ್ ಮಾಡುವ ಆಯ್ಕೆ ಮೂಲಕ ಖರೀದಿ ಮಾಡಿದ್ದಾರೆ. ಸಿನಿಮಾನ ಒಂದು ಗಂಟೆ ವೀಕ್ಷಿಸಿದರೆ ತಂಡದವರಿಗೆ ಸಿಗೋದು ನಾಲ್ಕು ರೂಪಾಯಿ! ಅಂದರೆ, ‘ತೀರ್ಥ ರೂಪ ತಂದೆಯವರಿಗೆ’ ಸಿನಿಮಾ ಅವಧಿ 2 ಗಂಟೆ 30 ನಿಮಿಷ. ಈ ಸಿನಿಮಾನ ಸಂಪೂರ್ಣವಾಗಿ ಒಮ್ಮೆ ವೀಕ್ಷಿಸಿದರೆ ತಂಡದವರಿಗೆ 10 ರೂಪಾಯಿ ಸಿಗಲಿದೆ!

ಒಂದು ಚಿತ್ರವನ್ನು ಥಿಯೇಟರ್​ನಲ್ಲಿ ವೀಕ್ಷಣೆ ಮಾಡಿದರೆ ಸಿನಿಮಾದ ಟಿಕೆಟ್ ಬೆಲೆ ಕನಿಷ್ಠ 200 ರೂಪಾಯಿ ಇರುತ್ತದೆ. ಓರ್ವ ಸಿನಿಮಾ ನೋಡಿದರೆ ಟ್ಯಾಕ್ಸ್, ಶೇರು ಎಲ್ಲವನ್ನೂ ಕಳೆದರೆ ಅಂದಾಜು 100 ರೂಪಾಯಿ ತಂಡದ ಕೈ ಸೇರುತ್ತದೆ. ಆದರೆ, ಒಟಿಟಿಯಲ್ಲಿ ಇಡೀ ಕುಟುಂಬದವರು ಒಮ್ಮೆಲೇ ಸಿನಿಮಾ ನೋಡಿದರೂ ತಂಡದವರಿಗೆ ಸಿಗೋದು ಕೇವಲ 10 ರೂಪಾಯಿ ಮಾತ್ರ!

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Mon, 2 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್