AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಒಟಿಟಿ ಹಕ್ಕಿನಿಂದ ಬಂದ ಹಣದಲ್ಲೇ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಒಟಿಟಿ ಹಕ್ಕು ಅಮೇಜಾನ್ ಪ್ರೈಮ್ ವಿಡಿಯೋ ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಈ ದಾಖಲೆಯ ಮೊತ್ತವು ಮತ್ತೊಂದು "ಕೆಜಿಎಫ್ 2" ಚಿತ್ರ ನಿರ್ಮಾಣಕ್ಕೆ ಸಾಕಾಗುತ್ತದೆ ಎಂದು ಅನೇಕರು ಹೇಳುತ್ತಿದ್ದರೆ. ಚಿತ್ರವು ಅಕ್ಟೋಬರ್ 2ರಂದು ಬಿಡುಗಡೆಯಾಗಲಿದ್ದು, ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ರದರ್ಶನಗೊಳ್ಳಲಿದೆ.

‘ಕಾಂತಾರ: ಚಾಪ್ಟರ್ 1’ ಒಟಿಟಿ ಹಕ್ಕಿನಿಂದ ಬಂದ ಹಣದಲ್ಲೇ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 11, 2025 | 2:34 PM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಸೂಪರ್ ಹಿಟ್ ಆಗುವ ಎಲ್ಲಾ ಲಕ್ಷಣ ಗೋಚರವಾಗಿದೆ. ರಿಷಬ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಕೂಡ ಇದೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಅವರು ನಾಯಕಿ ಪಾತ್ರ ಮಾಡಿದ್ದಾರೆ. ಇನ್ನೂ ಹಲವು ಪಾತ್ರಗಳು ಇನ್ನಷ್ಟೇ ರಿವೀಲ್ ಆಗಬೇಕಿದೆ. ಹೀಗಿರುವಾಗಲೇ ಸಿನಿಮಾದ ಒಟಿಟಿ ಹಕ್ಕಿನ ಮಾರಾಟ ಬಗ್ಗೆ ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಹಣದಲ್ಲಿ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ.

202ರಲ್ಲಿ ಬಂದ ‘ಕಾಂತಾರ’ ದೊಡ್ಡ ಯಶಸ್ಸು ಕಂಡಿತು. ಈ ಚಿತ್ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿತ್ತು. ಈ ಸಿನಿಮಾ ಪರಭಾಷೆಯಲ್ಲೂ ಹೆಸರು ಮಾಡಿತು. ಈಗ ಸರಿಯಾಗಿ ಮೂರು ವರ್ಷಗಳ ಬಳಿಕ (ಅಕ್ಟೋಬರ್ 2) ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ತೆರೆಗೆ ಬರುತ್ತಿದೆ. ಈ ಸಿನಿಮಾದ ಒಟಿಟಿ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ ಆಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹಕ್ಕನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಕ್ಕನ್ನು ಖರೀದಿಸಲು ತಂಡಕ್ಕೆ ಪ್ರೈಮ್ ವಿಡಿಯೋ ಕಡೆಯಿಂದ 125 ಕೊಟಿ ರೂಪಾಯಿ ಸಂದಾಯ ಆಗಿದೆ ಎನ್ನಲಾಗುತ್ತಿದೆ. ಈ ಮೊತ್ತದಲ್ಲಿ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ‘ಕೆಜಿಎಫ್ 2’ ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ. ಕೆಲವರು ‘ಕೆಜಿಎಫ್ 3’ ಸಿನಿಮಾದ ಬಜೆಟ್​ಗೆ ಇದು ಸರಿ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್
Image
ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? ಅದೆಷ್ಟು ಬದಲಾವಣೆ
Image
‘ಹಳ್ಳಿ ಪವರ್​’ನಲ್ಲಿ 1 ವಾರಕ್ಕೆ 4 ಮಂದಿ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ
Image
ಸು ಫ್ರಮ್ ಸೋಗೆ OTTಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?

ಸಿನಿಮಾದ ಹಕ್ಕು ಒಟಿಟಿಗೆ ಮಾರಾಟ ಆಗಿದೆ ಎಂದ ಮಾತ್ರಕ್ಕೆ ತಕ್ಷಣವೇ ಸಿನಿಮಾ ಒಟಿಟಿಗೆ ಬರೋದಿಲ್ಲ. ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿ ಹಲವು ವಾರ ಪ್ರದರ್ಶನ ಕಂಡ ಬಳಿಕವಷ್ಟೇ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಅದಕ್ಕೆ ಸಾಕಷ್ಟು ಸಮಯ ಬೇಕಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಟ್ರೇಲರ್ ರಿಲೀಸ್​ಗೆ ದಿನಾಂಕ ಫಿಕ್ಸ್; ಇನ್ನು ಕೆಲವೇ ದಿನಗಳು ಬಾಕಿ

‘ಕಾಂತಾರ: ಚಾಪ್ಟರ್ 1’ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ತೆರೆಗೆ ಬರುತ್ತಿದೆ. ಸಿನಿಮಾನ ಜನರು ಯಾವ ರೀತಿಯಲ್ಲಿ ಸ್ವಾಗತಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಕನ್ನಡ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!