
‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಸೂಪರ್ ಹಿಟ್ ಆಗುವ ಎಲ್ಲಾ ಲಕ್ಷಣ ಗೋಚರವಾಗಿದೆ. ರಿಷಬ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಕೂಡ ಇದೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಅವರು ನಾಯಕಿ ಪಾತ್ರ ಮಾಡಿದ್ದಾರೆ. ಇನ್ನೂ ಹಲವು ಪಾತ್ರಗಳು ಇನ್ನಷ್ಟೇ ರಿವೀಲ್ ಆಗಬೇಕಿದೆ. ಹೀಗಿರುವಾಗಲೇ ಸಿನಿಮಾದ ಒಟಿಟಿ ಹಕ್ಕಿನ ಮಾರಾಟ ಬಗ್ಗೆ ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಹಣದಲ್ಲಿ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ.
202ರಲ್ಲಿ ಬಂದ ‘ಕಾಂತಾರ’ ದೊಡ್ಡ ಯಶಸ್ಸು ಕಂಡಿತು. ಈ ಚಿತ್ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿತ್ತು. ಈ ಸಿನಿಮಾ ಪರಭಾಷೆಯಲ್ಲೂ ಹೆಸರು ಮಾಡಿತು. ಈಗ ಸರಿಯಾಗಿ ಮೂರು ವರ್ಷಗಳ ಬಳಿಕ (ಅಕ್ಟೋಬರ್ 2) ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ತೆರೆಗೆ ಬರುತ್ತಿದೆ. ಈ ಸಿನಿಮಾದ ಒಟಿಟಿ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ ಆಗಿದೆ.
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹಕ್ಕನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಕ್ಕನ್ನು ಖರೀದಿಸಲು ತಂಡಕ್ಕೆ ಪ್ರೈಮ್ ವಿಡಿಯೋ ಕಡೆಯಿಂದ 125 ಕೊಟಿ ರೂಪಾಯಿ ಸಂದಾಯ ಆಗಿದೆ ಎನ್ನಲಾಗುತ್ತಿದೆ. ಈ ಮೊತ್ತದಲ್ಲಿ ಮತ್ತೊಂದು ‘ಕೆಜಿಎಫ್ 2’ ನಿರ್ಮಿಸಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ‘ಕೆಜಿಎಫ್ 2’ ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ. ಕೆಲವರು ‘ಕೆಜಿಎಫ್ 3’ ಸಿನಿಮಾದ ಬಜೆಟ್ಗೆ ಇದು ಸರಿ ಇದೆ ಎಂದು ಹೇಳಿದ್ದಾರೆ.
ಸಿನಿಮಾದ ಹಕ್ಕು ಒಟಿಟಿಗೆ ಮಾರಾಟ ಆಗಿದೆ ಎಂದ ಮಾತ್ರಕ್ಕೆ ತಕ್ಷಣವೇ ಸಿನಿಮಾ ಒಟಿಟಿಗೆ ಬರೋದಿಲ್ಲ. ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಿ ಹಲವು ವಾರ ಪ್ರದರ್ಶನ ಕಂಡ ಬಳಿಕವಷ್ಟೇ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಅದಕ್ಕೆ ಸಾಕಷ್ಟು ಸಮಯ ಬೇಕಿದೆ.
ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಟ್ರೇಲರ್ ರಿಲೀಸ್ಗೆ ದಿನಾಂಕ ಫಿಕ್ಸ್; ಇನ್ನು ಕೆಲವೇ ದಿನಗಳು ಬಾಕಿ
‘ಕಾಂತಾರ: ಚಾಪ್ಟರ್ 1’ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ತೆರೆಗೆ ಬರುತ್ತಿದೆ. ಸಿನಿಮಾನ ಜನರು ಯಾವ ರೀತಿಯಲ್ಲಿ ಸ್ವಾಗತಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಕನ್ನಡ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.