AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗಳಿಂದ ನಿರ್ಲಕ್ಷ್ಯ, ಕನ್ನಡ ಸಿನಿಮಾಗಳ ನೆರವಿಗೆ ಬಂದ ಸರ್ಕಾರ

Karnataka Government: ಕನ್ನಡ ಸಿನಿಮಾಗಳನ್ನು ಒಟಿಟಿಗಳು ನಿರ್ಲಕ್ಷ್ಯ ಮಾಡಿವೆ, ಕನ್ನಡ ಸಿನಿಮಾಗಳನ್ನು ಒಟಿಟಿಗಳು ಖರೀದಿ ಮಾಡುವುದೇ ಇಲ್ಲ ಎಂಬ ದೂರಿದೆ. ಇದೀಗ ರಾಜ್ಯ ಸರ್ಕಾರವು ಕನ್ನಡ ಸಿನಿಮಾಗಳ ನೆರವಿಗೆ ಬಂದಿದೆ. ರಾಜ್ಯ ಸರ್ಕಾರವೇ ಒಟಿಟಿ ಪ್ರಾರಂಭಿಸಲು ಮುಂದಾಗಿದ್ದು, ಇದಕ್ಕಾಗಿ ಸಮಿತಿಯೊಂದರ ರಚನೆಯನ್ನು ಮಾಡಿದೆ.

ಒಟಿಟಿಗಳಿಂದ ನಿರ್ಲಕ್ಷ್ಯ, ಕನ್ನಡ ಸಿನಿಮಾಗಳ ನೆರವಿಗೆ ಬಂದ ಸರ್ಕಾರ
Ott By Government
ಮಂಜುನಾಥ ಸಿ.
|

Updated on: Sep 25, 2025 | 11:05 AM

Share

ಕೆಲ ವಾರಗಳ ಹಿಂದಷ್ಟೆ ಕರ್ನಾಟಕ ರಾಜ್ಯ ಸರ್ಕಾರವು, ಸಿನಿಮಾ ರಂಗಕ್ಕೆ ಸಂಬಂಧಿಸಿದಂತೆ ಮಹತ್ವದ, ಜನಪರವಾದ ಆದೇಶವೊಂದನ್ನು ಹೊರಡಿಸಿತ್ತು. ರಾಜ್ಯದಾದ್ಯಂತ ಏಕರೂಪ ಟಿಕೆಟ್ ದರವನ್ನು ಜಾರಿಗೊಳಿಸಿ ಆದೇಶ ಹೊರಡಿಸಿತ್ತು, ಇದರಿಂದ ಮಲ್ಟಿಪ್ಲೆಕ್ಸ್​ ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಕೇವಲ 200 ರೂಪಾಯಿಗೆ ಟಿಕೆಟ್ ಖರೀದಿಸಿ ಸಿನಿಮಾ ನೋಡಬಹುದಾಗಿತ್ತು. ಆದರೆ ಹೊಂಬಾಳೆ ಹಾಗೂ ಇತರೆ ಕೆಲವು ನಿರ್ಮಾಣ ಸಂಸ್ಥೆಗಳು ನ್ಯಾಯಾಲಯಕ್ಕೆ ಹೋಗಿ ಸರ್ಕಾರದ ಆದೇಶದ ವಿರುದ್ಧ ಮಧ್ಯಂತರ ತಡೆ ತಂದಿವೆ. ಆದರೆ ಇದೀಗ ರಾಜ್ಯ ಸರ್ಕಾರವು ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದು, ಈ ಬಾರಿ ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಪ್ರೇಮಿಗಳು ಇಬ್ಬರಿಗೂ ಅನುಕೂಲ ಆಗುವಂತೆ ಯೋಜನೆಯೊಂದನ್ನು ಹಾಕಿಕೊಂಡಿದೆ.

ಕನ್ನಡ ಸಿನಿಮಾಗಳನ್ನು ಒಟಿಟಿಗಳು ನಿರ್ಲಕ್ಷ್ಯ ಮಾಡುತ್ತಿವೆ. ಕನ್ನಡ ಸಿನಿಮಾಗಳನ್ನು ಒಟಿಟಿಗಳು ಖರೀದಿಯೇ ಮಾಡುತ್ತಿಲ್ಲ ಎಂಬ ದೂರುಗಳು ಹಲವು ವರ್ಷಗಳಿಂದಲೂ ಕೇಳುತ್ತಲೇ ಬರುತ್ತಿದೆ. ಸ್ಟಾರ್ ನಟರ ಸಿನಿಮಾಗಳನ್ನು ಸಹ ಒಟಿಟಿಗಳು ಒಳ್ಳೆಯ ಬೆಲೆಗಳಿಗೆ ಖರೀದಿ ಮಾಡುತ್ತಿಲ್ಲ ಎಂಬ ದೂರು ಮೊದಲಿನಿಂದಲೂ ಇದೆ. ಕನ್ನಡ ಚಿತ್ರರಂಗದ ಹಲವು ನಿರ್ಮಾಪಕರು, ನಿರ್ದೇಶಕರುಗಳು ಈ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರ ಚಿತ್ರರಂಗದ ನೆರವಿಗೆ ಬಂದಿದೆ. ಸ್ವತಃ ರಾಜ್ಯ ಸರ್ಕಾರವೇ ಹೊಸದೊಂದು ಒಟಿಟಿ ಪ್ರಾರಂಭಕ್ಕೆ ಮುಂದಾಗಿದೆ.

ಅಸಲಿಗೆ ಸರ್ಕಾರದ ವತಿಯಿಂದ ಒಟಿಟಿ ಪ್ರಾರಂಭ ಯೋಜನೆ ಹೊಸದೇನಲ್ಲ. ಈ ಹಿಂದಿನ ಬಜೆಟ್​​ನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಒಟಿಟಿ ಸ್ಥಾಪನೆ ಬಗ್ಗೆ ಉಲ್ಲೇಖಿಸಿದ್ದರು. ಇದೀಗ ಒಟಿಟಿ ಸ್ಥಾಪನೆಗೆ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿಯು ಒಟಿಟಿ ನಿರ್ಮಾಣ ಅದರ ಕಾರ್ಯವೈಖರಿ ಇನ್ನಿತರೆಗಳ ಬಗ್ಗೆ ವಿವರವಾದ ನೀಲನಕ್ಷೆಯನ್ನು ತಯಾರು ಮಾಡುತ್ತಿದೆ. ಒಟಿಟಿ ನಿರ್ಮಾಣಕ್ಕೆ ತಗಲುವ ವೆಚ್ಚ, ಸರ್ಕಾರದಿಂದ ಬೇಕಾಗುವ ಅನುದಾನ ಇನ್ನಿತರೆಗಳ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆಯ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.

ಇದನ್ನೂ ಓದಿ:‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ

ಈ ಸಮಿತಿಯಲ್ಲಿ ಕಂಠೀರವ ಸ್ಟುಡಿಯೋದ ಚೇರ್​​ಮ್ಯಾನ್ ಮೆಹಬೂಬ್ ಪಾಷಾ, ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಸಿನಿಮಾ ನಿರ್ಮಾಪಕ ಕೆಪಿ ಶ್ರೀಕಾಂತ್, ರಾಕ್​​ಲೈನ್ ವೆಂಕಟೇಶ್, ಸಿನಿಮಾ ನಟ, ನಿರ್ದೇಶಕ ದುನಿಯಾ ವಿಜಯ್, ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸೋಜಾ ಇನ್ನೂ ಕೆಲವರು ಇದ್ದಾರೆ.

2024 ರಲ್ಲಿ ನೆರೆಯ ಕೇರಳದಲ್ಲಿ ಅಲ್ಲಿನ ರಾಜ್ಯ ಸರ್ಕಾರವು ಒಟಿಟಿ ಫ್ಲ್ಯಾಟ್​​ಪಾರ್ಮ್ ನಿರ್ಮಾಣ ಮಾಡಿತು. ಸಿ ಸ್ಪೇಸ್ ಹೆಸರಿನ ಈ ಒಟಿಟಿ ಪ್ಲ್ಯಾಟ್​​ಫಾರ್ಮ್ ಕೇವಲ ಮಲಯಾಳಂ ಸಿನಿಮಾಗಳನ್ನು ಮಾತ್ರ ಪ್ರದರ್ಶಿಸುತ್ತಿದ್ದು, ಚಿತ್ರರಂಗಕ್ಕೆ ನೆರವು ನೀಡಲೆಂದು ಪ್ರಾರಂಭವಾದ ಒಟಿಟಿ ಇದಾಗಿದೆ. ಈ ಒಟಿಟಿಯಿಂದಾಗಿ ಕಡಿಮೆ ದರಕ್ಕೆ ಮಲಯಾಳಂ ಸಿನಿಮಾಗಳನ್ನು ಪ್ರೇಕ್ಷಕರು ನೋಡುವಂತಾಗಿದೆ. ಇ ಒಟಿಟಿಯು ಪೇ-ಪರ್-ವೀವ್ ಮಾಡೆಲ್​​​ ಮೇಲೆ ಕೆಲಸ ಮಾಡುತ್ತಿದೆ. ಎಷ್ಟು ಹಣ ಬರುತ್ತದೆಯೋ ಅದರಲ್ಲಿ 50% ಅನ್ನು ನಿರ್ಮಾಪಕರಿಗೆ ನೀಡಲಾಗುತ್ತದೆ. ಇದೇ ಮಾದರಿಯ ಒಟಿಟಿ ಕನ್ನಡಕ್ಕಾಗಿಯೂ ನಿರ್ಮಾಣ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ