Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​

Bhool Bhulaiyaa 2 on Netflix: ಚಿತ್ರಮಂದಿರಕ್ಕೆ ಹೋಗಿ ‘ಭೂಲ್​ ಭುಲಯ್ಯ 2’ ಸಿನಿಮಾವನ್ನು ನೋಡಲು ಕೆಲವರಿಗೆ ಸಾಧ್ಯವಾಗಿಲ್ಲ. ಅಂಥವರು ಒಟಿಟಿಯಲ್ಲಿ ವೀಕ್ಷಿಸಲು ಕಾದಿದ್ದಾರೆ.

Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
‘ಭೂಲ್ ಭುಲಯ್ಯ 2’ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on: Jun 15, 2022 | 2:59 PM

ಹಾರರ್​-ಕಾಮಿಡಿ ಕಥಾಹಂದರ ಹೊಂದಿರುವ ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾ ಸೂಪರ್ ಹಿಟ್​ ಆಗಿದೆ. ಆ ಮೂಲಕ ನಟ ಕಾರ್ತಿಕ್​ ಆರ್ಯನ್​ ಅವರು ಈ ವರ್ಷ ಭರ್ಜರಿ ಗೆಲುವು ಕಂಡಿದ್ದಾರೆ. ಬಾಲಿವುಡ್​ ಗುಂಪುಗಾರಿಕೆಯಿಂದ ಕಡೆಗಣಿಸಲ್ಪಟ್ಟಿದ್ದ ಅವರಿಗೆ ಜನರ ಆಶೀರ್ವಾದ ಸಿಕ್ಕಿದೆ. ಕಾರ್ತಿಕ್​ ಆರ್ಯನ್​ (Kartik Aaryan) ಅವರ ವೃತ್ತಿಜೀವನದಲ್ಲಿ ಇದು ಮೊದಲ ಬ್ಲಾಕ್​ ಬಸ್ಟರ್​ ಹಿಟ್​. ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ 173 ಕೋಟಿ ರೂಪಾಯಿ ಗಳಿಸಿದೆ. ಮೇ 20ರಂದು ತೆರೆಕಂಡ ಈ ಚಿತ್ರಕ್ಕೆ ಸಿಕ್ಕಿರುವ ಅಭೂತಪೂರ್ವ ಸ್ಪಂದನೆಯಿಂದಾಗಿ ಚಿತ್ರತಂಡ ಖುಷಿ ಆಗಿದೆ. ಈಗ ಅಭಿಮಾನಿಗಳಿಗೆ ಇನ್ನೊಂದು ಗುಡ್​ ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ‘ಭೂಲ್​ ಭುಲಯ್ಯ 2’ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಹೌದು, ‘ನೆಟ್​ಫ್ಲಿಕ್ಸ್​’ (Netflix) ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಆ ಕುರಿತು ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಭೂಲ್​ ಭುಲಯ್ಯ 2’ ಸಿನಿಮಾ ಇಂದಿಗೂ ಅನೇಕ ಕಡೆಗಳಲ್ಲಿ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಬೇರೆ ಯಾವ ಸಿನಿಮಾಗಳು ಕೂಡ ಈ ಚಿತ್ರಕ್ಕೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ‘ಜ್ಯೂರಾಸಿಕ್​ ವರ್ಲ್ಡ್​ ಡಾಮಿನಿಯನ್​’, ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗಳು ತೆರೆಕಂಡರೂ ಕೂಡ ‘ಭೂಲ್​ ಭುಲಯ್ಯ 2’ ಹವಾ ತಗ್ಗಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಕಲೆಕ್ಷನ್​ ಕುಸಿಯಲಿದೆ. ಹಾಗಾಗಿ ಒಟಿಟಿಯಲ್ಲಿ ಪ್ರಸಾರ ಮಾಡಲು ಚಿತ್ರತಂಡ ನಿರ್ಧರಿಸಿದೆ. ನೆಟ್​ಫ್ಲಿಕ್ಸ್​ನಲ್ಲಿ ಈ ಚಿತ್ರ ಪ್ರಸಾರ ಆಗುವುದು ಖಚಿತವಾಗಿದೆ. ಆದರೆ ಒಟಿಟಿ ರಿಲೀಸ್​ ದಿನಾಂಕದ ಬಗ್ಗೆ ಇನ್ನಷ್ಟೇ ಘೋಷಣೆ ಆಗಬೇಕಿದೆ.

2007ರಲ್ಲಿ ತೆರೆಕಂಡ ‘ಭೂಲ್​ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​, ವಿದ್ಯಾ ಬಾಲನ್​ ಮುಂತಾದವರು ನಟಿಸಿ ಗೆಲುವು ಕಂಡಿದ್ದರು. ಈ ಸಿನಿಮಾದ ಸೀಕ್ವೆಲ್​ ಆಗಿ ‘ಭೂಲ್​ ಭುಲಯ್ಯ 2’ ಮೂಡಿಬಂದಿದೆ. ಹಾಗಾಗಿ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇತ್ತು. ಆ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ಚಿತ್ರ ಯಶಸ್ವಿ ಆಗಿದೆ. ಕಾರ್ತಿಕ್​ ಆರ್ಯನ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈ ಸಿನಿಮಾದಿಂದ ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಿದೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
‘ಅಭಿಮಾನಿ ಜತೆ ಸ್ಟಾರ್​ ನಟನ ಮದುವೆ’ ಅಂತ ಹಬ್ಬಿತ್ತು ಸುದ್ದಿ; ಆದ್ರೆ ಅಲ್ಲಿ ನಡೆದಿದ್ದೇ ಬೇರೆ

ಟಬು, ರಾಜ್​ಪಾಲ್​ ಯಾದವ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕೆಲವರಿಗೆ ಈ ಸಿನಿಮಾವನ್ನು ಚಿತ್ರಮಂದಿರಕ್ಕೆ ಹೋಗಿ ನೋಡಲು ಸಾಧ್ಯವಾಗಿಲ್ಲ. ಅಂಥವರು ಒಟಿಟಿಯಲ್ಲಿ ವೀಕ್ಷಿಸಲು ಕಾದಿದ್ದಾರೆ. ಶೀಘ್ರವೇ ಒಟಿಟಿ ರಿಲೀಸ್​ ದಿನಾಂಕ ಘೋಷಣೆ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ