AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ

ಧ್ರುವ ಸರ್ಜಾ ಅಭಿನಯದ 'ಕೆಡಿ-ದಿ ಡೆವಿಲ್' ಸಿನಿಮಾ ಜೂನ್ 5 ರಿಂದ ಜೀ5 ಓಟಿಟಿಯಲ್ಲಿ ಪ್ರಸಾರವಾಗಲಿದೆ. ಪ್ರೇಮ್ ನಿರ್ದೇಶನದ ಈ ಆಕ್ಷನ್ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಲಭ್ಯ. 70ರ ದಶಕದ ಕಥಾಹಂದರ ಹೊಂದಿರುವ 'ಕೆಡಿ' ಅಣ್ಣ-ತಮ್ಮನ ಬಾಂಧವ್ಯ ಕಥೆಯನ್ನು ಒಳಗೊಂಡಿದೆ. ರವಿಚಂದ್ರನ್, ಸಂಜಯ್ ದತ್ ಸೇರಿ ದೊಡ್ಡ ತಾರಾಗಣವಿದೆ.

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ
ಕೆಡಿ ಸಿನಿಮಾ Image Credit source: KD Movie
ರಾಜೇಶ್ ದುಗ್ಗುಮನೆ
|

Updated on: May 29, 2026 | 11:23 AM

Share

ನಿರ್ದೇಶಕ ಪ್ರೇಮ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನ ಬಹುನಿರೀಕ್ಷಿತ ‘KD-ದಿ ಡೆವಿಲ್’ (KD Movie) ಸಿನಿಮಾ ಥಿಯೇಟರ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈಗ ಸಿನಿಮಾ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಈ ಚಿತ್ರ ಜೂನ್ 5 ರಂದು ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಧಿಕೃತವಾಗಿ ಸ್ಟ್ರೀಮಿಂಗ್ ಆರಂಭಿಸಲಿದೆ. ವಿಶೇಷವೆಂದರೆ, ಕನ್ನಡದ ಜೊತೆಗೆ ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ನಿರ್ದೇಶಕ ಪ್ರೇಮ್ ‘ಜೋಗಿ’ ಚಿತ್ರದಲ್ಲಿ ಅಮ್ಮ ಹಾಗೂ ಮಗನ ಕಥೆ ಹೇಳಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಈ ಬಾರಿ ಅಣ್ಣ-ತಮ್ಮನ ಕಥೆ ಹೇಳಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರೇಕ್ಷಕರನ್ನು 70ರ ದಶಕದ ಕಾಲಘಟ್ಟಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಣ್ಣನೇ ಸರ್ವಸ್ವ ಎಂದು ಬದುಕುವ ‘ಕಾಳಿದಾಸ ಅಲಿಯಾಸ್ ಕೆಡಿ’ ಪಾತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ.

ಅಣ್ಣ-ತಮ್ಮನ ನಡುವಿನ ಭಾವನಾತ್ಮಕ ಬಾಂಧವ್ಯದ ಜೊತೆಗೆ ಆ ಕಾಲದ ರಾಜಕೀಯ ಪೈಪೋಟಿ ಮತ್ತು ರಕ್ತಸಿಕ್ತ ರೌಡಿಸಂ ಕಥೆಯನ್ನು ಚಿತ್ರ ಒಳಗೊಂಡಿದೆ. ಧ್ರುವ ಅವರು ಮಾಸ್ ಹಾಗೂ ಆ್ಯಕ್ಷನ್ ಮೂಲಕ ಅಭಿಮಾನಿಗಳ ಎದುರು ಬಂದಿದ್ದಾರೆ. ‘ಕೆಡಿ’ ಸಿನಿಮಾದ ಮತ್ತೊಂದು ದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಚಿತ್ರದ ಅದ್ದೂರಿ ತಾರಾಗಣ. ಈ ಸಿನಿಮಾದಲ್ಲಿ ಭಾರತೀಯ ಚಿತ್ರರಂಗದ ಘಟಾನುಘಟಿ ಕಲಾವಿದರು ಒಂದಾಗಿದ್ದಾರೆ.

ಇದನ್ನೂ ಓದಿ: 20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ?

ಕ್ರೇಜಿಸ್ಟಾರ್ ವಿ. ರವಿಚಂದ್ರನ್, ರಮೇಶ್ ಅರವಿಂದ್, ಬಾಲಿವುಡ್ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ ಬಣ್ಣ ಹಚ್ಚಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರದ ಪ್ರಮುಖ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡು ಚಿತ್ರದ ತೂಕವನ್ನು ಹೆಚ್ಚಿಸಿದ್ದಾರೆ. ಕನ್ನಡದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ದೊಡ್ಡ ಬೆಕಟ್​​ನಲ್ಲಿ ನಿರ್ಮಿಸಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?