AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಬರಲು ರೆಡಿ ಆಯ್ತು ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’; ಎಲ್ಲಿ, ಯಾವಾಗ?

Kothalavadi on OTT: ಪುಷ್ಪಾ ಅರುಣ್ ಕುಮಾರ್ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರವು ಆಗಸ್ಟ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾತ್ತು. ಈಗ ಸಿನಿಮಾ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿಯ ನಿರ್ಮಾಣದ ಈ ಚಿತ್ರವು ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಾಗಲಿದೆ. ಪೃಥ್ವಿ ಅಂಬರ್ ಮುಖ್ಯ ಪಾತ್ರದಲ್ಲಿದ್ದಾರೆ ಮತ್ತು ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರದ ಹೈಲೈಟ್ ಆಗಿದೆ.

ಒಟಿಟಿಯಲ್ಲಿ ಬರಲು ರೆಡಿ ಆಯ್ತು ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’; ಎಲ್ಲಿ, ಯಾವಾಗ?
ಕೊತ್ತಲವಾಡಿ
ರಾಜೇಶ್ ದುಗ್ಗುಮನೆ
|

Updated on: Sep 04, 2025 | 2:54 PM

Share

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್​ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ (Kottalavadi) ಸಿನಿಮಾ ಆಗಸ್ಟ್ 1ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ನಿರ್ಮಾಣದಲ್ಲಿ ಪುಷ್ಪಾ ಅವರಿಗೆ ಇದು ಮೊದಲ ಅನುಭವ. ಈಗ ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಲು ಸಿದ್ಧವಾಗಿದೆ. ಈ ಸಿನಿಮಾನ ಒಟಿಟಿಯಲ್ಲಿ ಪ್ರೇಕ್ಷಕರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಪುಷ್ಪಾ ಅವರು ‘ಪಿಎ ಪ್ರೊಡಕ್ಷನ್ಸ್ ಲಾಂಛನ’ ಆರಂಭಿಸಿದ್ದಾರೆ. ಈ ನಿರ್ಮಾಣ ಸಂಶ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡೋ ಗುರಿಯನ್ನು ಅವರು ಹೊಂದಿದ್ದಾರೆ. ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಮೂಡಿ ಬಂದ ಮೊದಲ ಚಿತ್ರ ‘ಕೊತ್ತಲವಾಡಿ’ ಸಿನಿಮಾ ಈಗ ಒಟಿಟಿಯಲ್ಲಿ ಬರಲು ರೆಡಿ ಆಗಿದೆ. ಸೆಪ್ಟೆಂಬರ್ 5ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್​ನಲ್ಲಿ ವೀಕ್ಷಿಸಬಹುದಾಗಿದೆ.

‘ಕೊತ್ತಲವಾಡಿ’ ಥಿಯೇಟರ್​​ಗಳಲ್ಲಿ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿರಲಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ನೋಡಬಹುದಾಗಿದೆ. ಸದ್ಯ ಸೆಪ್ಟೆಂಬರ್ 5ರಂದು ಕನ್ನಡದಲ್ಲಿ ಮಾತ್ರ ಪ್ರದರ್ಶನವಾಗಲಿದ್ದು, ನಂತರದ ದಿನಗಳಲ್ಲಿ ಮಿಕ್ಕ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ
Image
ಶಂಕರ್​ ನಾಗ್​​ಗೆ ಅಣ್ಣ ಮಾತ್ರ ಅಲ್ಲ, ಸಾಕು ತಂದೆಯೂ ಆಗಿದ್ದ ಅನಂತ್ ನಾಗ್
Image
‘ಕಾಂತಾರ: ಚಾಪ್ಟರ್​ 1’ ಎದುರು ರಿಲೀಸ್ ಆಗಲಿದೆ ದೊಡ್ಡ ಹೀರೋ ಸಿನಿಮಾ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

‘ಕೊತ್ತಲವಾಡಿ’ ಸಿನಿಮಾದಲ್ಲಿ ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾವ್ಯ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಮಾನಸಿ ಸುಧೀರ್ ಮೊದಲಾದವರು ನಟಿಸಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕೆ ಇದೆ. ಗೋಪಾಲ್ ದೇಶಪಾಂಡೆ ನಟನೆ ಹಾಗೂ ರಘು ನಿಡುವಳ್ಳಿ ಸಂಭಾಷಣೆ ಚಿತ್ರದ ಹೈಲೈಟ್​. ಕಾರ್ತಿಕ್ ಎಸ್ ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ,‌ ವಿಕಾಸ್ ವಸಿಷ್ಠ ಸಂಗೀತ ಸಂಯೋಜನೆ ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.

ಇದನ್ನೂ ಓದಿ: ‘ಕೊತ್ತಲವಾಡಿ’ ಸಿನಿಮಾದಲ್ಲಿ ಬಳಕೆ ಆಗಿದೆ ಯಶ್ ಖರೀದಿಸಿದ್ದ ಮೊದಲ ಬೈಕ್

ಸದ್ಯ ಪುಷ್ಪಾ ಅವರು ತಮ್ಮ ಬ್ಯಾನರ್ ಮೂಲಕ ಸಿನಿಮಾ ಹಂಚಿಕೆಗೂ ಇಳಿದಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾನ ಕರ್ನಾಟಕದಲ್ಲಿ ಅವರು ಹಂಚಿಕೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!