ಒಟಿಟಿಯಲ್ಲಿ ರಿಲೀಸ್ ಆದ ‘ಕೋಟಿಗೊಬ್ಬ 3’ ಚಿತ್ರಕ್ಕೆ ಬರುತ್ತಿದೆ ಉತ್ತಮ ಪ್ರತಿಕ್ರಿಯೆ
ಕಿಚ್ಚ ಸುದೀಪ್ ನಟನೆಯ ಈ ಸಿನಿಮಾ ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿದೆ. ಸುದೀಪ್ ಅವರು ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಸಖತ್ ಥ್ರಿಲ್ ನೀಡಿತ್ತು.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕನ್ನಡ ಮಾತ್ರವಲ್ಲದೆ, ಬೇರೆ ಭಾಷೆಯಲ್ಲೂ ಅವರಿಗೆ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಅವರ ಸಿನಿಮಾಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಇತ್ತೀಚೆಗೆ ‘ಕೋಟಿಗೊಬ್ಬ 3’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿದೆ. ಪರ ದೇಶಗಳಲ್ಲಿ ಇದ್ದುಕೊಂಡು ಈ ಸಿನಿಮಾ ನೋಡೋಕೆ ಸಾಧ್ಯವಾಗದೆ ಇದ್ದವರು, ಒಟಿಟಿಯಲ್ಲಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.
ಕಿಚ್ಚ ಸುದೀಪ್ ನಟನೆಯ ಈ ಸಿನಿಮಾ ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿದೆ. ಸುದೀಪ್ ಅವರು ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಸಖತ್ ಥ್ರಿಲ್ ನೀಡಿತ್ತು. ಕೆಲವರು ಎರಡು ಬಾರಿ ಚಿತ್ರಮಂದಿರದತ್ತ ಮುಖ ಮಾಡಿದ್ದರು. ಇನ್ನೂ ಕೆಲವರು ಕೊವಿಡ್ಗೆ ಭಯ ಬಿದ್ದು ಮನೆಯಲ್ಲೇ ಇದ್ದರು. ಇದರಿಂದ ಸಿನಿಮಾ ನೋಡೋಕೆ ಆಗಿರಲಿಲ್ಲ. ‘ಕೋಟಿಗೊಬ್ಬ 3’ ಸಿನಿಮಾ ನವೆಂಬರ್ 23ರಂದು ಅಮೇಜಾನ್ ಪ್ರೈಮ್ನಲ್ಲಿ ಪ್ರೀಮಿಯರ್ ಆಗಬೇಕಿತ್ತು. ಆದರೆ, ವಿಳಂಬವಾಗಿ, ಇಂದು (ನವೆಂಬರ್ 29) ರಿಲೀಸ್ ಆಗಿದೆ.
ಅಭಿಮಾನಿಯೋರ್ವ ಟ್ವಿಟರ್ನಲ್ಲಿ ಅಮೇಜಾನ್ ಪ್ರೈಮ್ ಹೆಲ್ಪ್ ಡೆಸ್ಕ್ಗೆ ‘ಕೋಟಿಗೊಬ್ಬ 3’ ಯಾವಾಗ ರಿಲೀಸ್ ಆಗುತ್ತದೆ ಎಂದು ಪ್ರಶ್ನೆ ಮಾಡಿದ್ದ. ಅದಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಉತ್ತರ ನೀಡಿತ್ತು. ನವೆಂಬರ್ 23ಕ್ಕೆ ಸಿನಿಮಾ ರಿಲೀಸ್ ಮಾಡಲಾಗುತ್ತಿದೆ ಎಂದು ಹೇಳಿತ್ತು. ನಂತರ ಸಿನಿಮಾ ರಿಲೀಸ್ ವಿಳಂವಾಗಿತ್ತು.
‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್ ವಿಳಂಬವಾದರೂ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿತ್ತು. ರಾಜ್ಯಾದ್ಯಂತ ನೂರಾರು ಚಿತ್ರಮಂದಿರಗಳಲ್ಲಿ ತೆರೆಕಂಡ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿತ್ತು. ಮೊದಲ ದಿನ ‘ಕೋಟಿಗೊಬ್ಬ 3’ ಬರೋಬ್ಬರಿ 12.5 ಕೋಟಿ ರೂಪಾಯಿ ಗಳಿಸಿತ್ತು. ನಾಲ್ಕು ದಿನಕ್ಕೆ ಸಿನಿಮಾ ಬರೋಬ್ಬರಿ 40.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.
ಇದನ್ನೂ ಓದಿ: ಒಟಿಟಿಯಲ್ಲಿ ಕೋಟಿಗೊಬ್ಬ 3 ಬಿಡುಗಡೆ ಯಾವಾಗ?; ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ಪಟ್ಟಿ ಇಲ್ಲಿದೆ
ಅಮೇರಿಕದ ಈ ಒಂದು ವರ್ಷದ ಮಗು ತಿಂಗಳಿಗೆ ರೂ 75,000 ಗಳಿಸುತ್ತದೆ ಅಂದರೆ ನೀವು ನಂಬಲೇಬೇಕು!
Published On - 2:44 pm, Mon, 29 November 21