ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ವಿಮರ್ಶಕರಿಂದ ಮೆಚ್ಚುಗೆ ಪಡೆದ ‘ಲಾಪತಾ ಲೇಡೀಸ್​’ ಸಿನಿಮಾ ಈಗ ಒಟಿಟಿಯಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ಈ ಸಿನಿಮಾ ನಂಬರ್​ 1 ಸ್ಥಾನ ಪಡೆದುಕೊಂಡಿದೆ. ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು, ಬಹುತೇಕ ಹೊಸ ಕಲಾವಿದರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ
‘ಲಾಪತಾ ಲೇಡೀಸ್​’ ಪೋಸ್ಟರ್​, ಕಿರಣ್​ ರಾವ್​, ಆಮಿರ್​ ಖಾನ್​
Follow us
ಮದನ್​ ಕುಮಾರ್​
|

Updated on: Apr 29, 2024 | 10:15 PM

ಆಮಿರ್​ ಖಾನ್​ ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ (Laapataa Ladies) ಸಿನಿಮಾಗೆ ಚಿತ್ರಮಂದಿರದಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಲಿಲ್ಲ. ಆದರೆ ಸಿನಿಮಾ ನೋಡಿದ ಪ್ರತಿಯೊಬ್ಬರಿಂದಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ‘ಲಾಪತಾ ಲೇಡೀಸ್​’ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಕಾಲಿಟ್ಟಿದೆ. ನೆಟ್​ಫ್ಲಿಕ್ಸ್​ನಲ್ಲಿ (Netflix) ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಒಟಿಟಿ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಪರಿಣಾಮವಾಗಿ ನಂಬರ್​ ಟ್ರೆಂಡಿಂಗ್​ನಲ್ಲಿದೆ ‘ಲಾಪತಾ ಲೇಡೀಸ್​’ ಸಿನಿಮಾ.

ಹಲವು ವರ್ಷಗಳ ಬಳಿಕ ಕಿರಣ್​ ರಾವ್​ ಅವರು ನಿರ್ದೇಶನ ಮಾಡಿದ ಸಿನಿಮಾ ‘ಲಾಪತಾ ಲೇಡೀಸ್​’. ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್​, ನಿತಾನ್ಷಿ ಗೋಯಲ್​, ಪ್ರತಿಭಾ ರಂಟಾ, ಛಾಯಾ ಕದಂ, ರವಿ ಕಿಶನ್​ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಸಿನಿಮಾದ ಕಥೆ ಎಲ್ಲರಿಗೂ ಇಷ್ಟ ಆಗುತ್ತಿದೆ. ಎಲ್ಲ ಕಲಾವಿದರ ಅಭಿನಯಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ.

‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಒಂದು ಭಾವನಾತ್ಮಕವಾದ ಕಹಾನಿ ಇದೆ. ಸಿನಿಮಾದಲ್ಲಿನ ಅನೇಕ ಸನ್ನಿವೇಶಗಳು ಪ್ರೇಕ್ಷಕರಿಗೆ ಕನೆಕ್ಟ್​ ಆಗುತ್ತಿವೆ. ಇದೊಂದು ಹೃದಯಸ್ಪರ್ಶಿ ಸಿನಿಮಾ ಎಂದು ನೆಟ್ಟಿಗರು ಹೊಗಳುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಚಿತ್ರದ ಗುಣಗಾನ ಮಾಡಲಾಗುತ್ತಿದೆ. ತಮ್ಮಿಷ್ಟದ ಸೀನ್​ ಯಾವುದು ಎಂಬುದನ್ನು ಪ್ರೇಕ್ಷಕರು ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ‘ಲಾಪತಾ ಲೇಡೀಸ್​’ ಖ್ಯಾತಿಯ 16ರ ಪ್ರಾಯದ ನಟಿ​ಗೆ 1 ಕೋಟಿ ಫಾಲೋವರ್ಸ್​

ಮಹಿಳಾಪ್ರದಾನ ಕಥಾಹಂದರ ಇರುವ ‘ಲಾಪತಾ ಲೇಡೀಸ್​’ ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಗೆಲ್ಲುವ ಸಾಮರ್ಥ್ಯ ಇದೆ ಎಂದು ಕೂಡ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಳ್ಳಬಾರದಾಗಿತ್ತು ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಮಾರ್ಚ್​ 1ರಂದು ಥಿಯೇಟರ್​ನಲ್ಲಿ ‘ಲಾಪತಾ ಲೇಡೀಸ್​’ ತೆರೆಕಂಡಿತ್ತು. ಏಪ್ರಿಲ್​ 26ರಿಂದ ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ಪ್ರಸಾರ ಆರಂಭಿಸಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
ವೀಳ್ಯದೆಲೆ ದೀಪದ ಮಹತ್ವ ಮತ್ತು ಹಚ್ಚುವ ವಿಧಾನ ತಿಳಿಯಿರಿ
ವೀಳ್ಯದೆಲೆ ದೀಪದ ಮಹತ್ವ ಮತ್ತು ಹಚ್ಚುವ ವಿಧಾನ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ