Laapataa Ladies: ಒಟಿಟಿಗೆ ಬಂತು ‘ಲಾಪತಾ ಲೇಡೀಸ್’ ಸಿನಿಮಾ; ನೆಟ್ಫ್ಲಿಕ್ಸ್ಗೆ ಧನ್ಯವಾದ ಹೇಳಿದ ಪ್ರೇಕ್ಷಕರು
ವಿಮರ್ಶಕರಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಪಡೆದ ‘ಲಾಪತಾ ಲೇಡೀಸ್’ ಸಿನಿಮಾ ಈಗ ಒಟಿಟಿಗೆ ಕಾಲಿಟ್ಟಿದೆ. ಸ್ಪರ್ಶ್ ಶ್ರೀವಾಸ್ತವ್, ನಿತಾಂಕ್ಷಿ ಗೋಯಲ್, ಪ್ರತಿಭಾ ರಂಟಾ, ರವಿ ಕಿಶನ್, ಛಾಯಾ ಕದಂ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆಮಿರ್ ಖಾನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನ ಮಾಡಿದ್ದಾರೆ.
ಖ್ಯಾತ ನಟ ಆಮಿರ್ ಖಾನ್ (Aamir Khan) ಅವರು ಅನೇಕ ಸದಭಿರುಚಿಯ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಆ ಪೈಕಿ ಇತ್ತೀಚೆಗೆ ತೆರೆಕಂಡ ‘ಲಾಪತಾ ಲೇಡೀಸ್’ (Laapataa Ladies) ಸಿನಿಮಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಯಾವುದೇ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿಲ್ಲ. ಬಹುತೇಕ ಹೊಸ ನಟ-ನಟಿಯರೇ ಈ ಸಿನಿಮಾದಲ್ಲಿದ್ದಾರೆ. ಹಾಗಾಗಿ ಚಿತ್ರಮಂದಿರದಲ್ಲಿ ‘ಲಾಪತಾ ಲೇಡೀಸ್’ ಸಿನಿಮಾ ಹೆಚ್ಚು ದಿನ ಪ್ರದರ್ಶನ ಕಾಣಲಿಲ್ಲ. ನಿರೀಕ್ಷಿತ ಮಟ್ಟದ ಕಲೆಕ್ಷನ್ ಕೂಡ ಆಗಲಿಲ್ಲ. ಈಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ. ನೆಟ್ಫ್ಲಿಕ್ಸ್ (Netflix) ಮೂಲಕ ‘ಲಾಪತಾ ಲೇಡೀಸ್’ ಚಿತ್ರ ವೀಕ್ಷಣೆಗೆ ಲಭ್ಯವಾಗುತ್ತಿದೆ.
‘ಲಾಪತಾ ಲೇಡೀಸ್’ ಸಿನಿಮಾಗೆ ಆಮಿರ್ ಖಾನ್ ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನ ಮಾಡಿದ್ದಾರೆ. ವಿಮರ್ಶಕರಿಂದ ಈ ಚಿತ್ರಕ್ಕೆ ಭರಪೂರ ಪ್ರಶಂಸೆ ವ್ಯಕ್ತವಾಗಿದೆ. ಎಲ್ಲ ಕಡೆಗಳಿಂದ ಸಿನಿಮಾ ಬಗ್ಗೆ ಮೆಚ್ಚುಗೆ ಕೇಳಿಬಂದಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಈ ಸಿನಿಮಾವನ್ನು ಥಿಯೇಟರ್ನಲ್ಲಿ ನೋಡಿರಲಿಲ್ಲ. ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದ ಎಲ್ಲರಿಗೂ ಈಗ ಖುಷಿ ಸುದ್ದಿ ಸಿಕ್ಕಿದೆ.
📣 TAAZA KHABAR : Laapataa Ladies mil chuki hai! 🤩#LaapataaLadies, starts streaming at midnight, on Netflix! pic.twitter.com/KsutE2U9U3
— Netflix India (@NetflixIndia) April 25, 2024
ಏಪ್ರಿಲ್ 26ರಿಂದ ನೆಟ್ಫ್ಲಿಕ್ಸ್ ಮೂಲಕ ‘ಲಾಪತಾ ಲೇಡೀಸ್’ ಸಿನಿಮಾದ ಸ್ಟ್ರೀಮಿಂಗ್ ಆರಂಭ ಆಗಲಿದೆ. ಕೆಲವೇ ಚಿತ್ರಮಂದಿರಗಳಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆ ಆಗಿತ್ತು. ಚಿಕ್ಕ ಪಟ್ಟಣಗಳು ಹಾಗೂ ಗ್ರಾಮೀಣ ಭಾಗದ ಪ್ರೇಕ್ಷಕರಿಗೆ ಈ ಸಿನಿಮಾ ನೋಡಲು ಸಾಧ್ಯವಾಗಿರಲಿಲ್ಲ. ಅವರೆಲ್ಲರೂ ಈಗ ಒಟಿಟಿಯಲ್ಲಿ ನೋಡಲಿದ್ದಾರೆ. ‘ಈ ಚಿತ್ರಕ್ಕಾಗಿ ನಾವು ಬಹಳ ದಿನಗಳಿಂದ ಕಾದಿದ್ದೆವು. ಈಗ ಒಟಿಟಿಯಲ್ಲಿ ರಿಲೀಸ್ ಮಾಡುತ್ತಿರುವುದಕ್ಕೆ ನೆಟ್ಫ್ಲಿಕ್ಸ್ಗೆ ಧನ್ಯವಾದಗಳು’ ಎಂದು ಅನೇಕ ಪ್ರೇಕ್ಷಕರು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Laapataa Ladies Review: ಈ ಕಾಲಕ್ಕೆ ಬೇಕಾದ ಮಹತ್ವಪೂರ್ಣ ಸಿನಿಮಾ ‘ಲಾಪತಾ ಲೇಡೀಸ್’
ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ. ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಸಮಯ ಬಂದಿದೆ. ಈ ಸಿನಿಮಾದಲ್ಲಿ ನಿತಾಂಕ್ಷಿ ಗೋಯಲ್, ಸ್ಪರ್ಶ್ ಶ್ರೀವಾಸ್ತವ್, ಪ್ರತಿಭಾ ರಂಟಾ, ಛಾಯಾ ಕದಂ, ರವಿ ಕಿಶನ್ ಮುಂತಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.