AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರೋಕೆ ರೆಡಿ ಆಯ್ತು ‘ಲಿಯೋ’ ಸಿನಿಮಾ; ಎಲ್ಲಿ, ಯಾವಾಗ? ಇಲ್ಲಿದೆ ವಿವರ

‘ಲಿಯೋ’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 19ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿದೆ. ವಿಶ್ವಾದ್ಯಂತ ಈ ಚಿತ್ರ 550 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ಒಟಿಟಿ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಒಟಿಟಿಗೆ ಬರೋಕೆ ರೆಡಿ ಆಯ್ತು ‘ಲಿಯೋ’ ಸಿನಿಮಾ; ಎಲ್ಲಿ, ಯಾವಾಗ? ಇಲ್ಲಿದೆ ವಿವರ
ಲಿಯೋ
ರಾಜೇಶ್ ದುಗ್ಗುಮನೆ
|

Updated on:Nov 17, 2023 | 8:45 AM

Share

ದಳಪತಿ ವಿಜಯ್ (Thalapathy Vijay) ಸೌತ್ ಇಂಡಸ್ಟ್ರಿಯ ಟಾಪ್ ಹೀರೋಗಳಲ್ಲಿ ಒಬ್ಬರು. ತಮಿಳಿನಲ್ಲಿ ಮಾತ್ರವಲ್ಲದೆ ಕನ್ನಡ, ತೆಲುಗಿನಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಜಯ್ ಅಭಿನಯದ ಸಿನಿಮಾಗಳು ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತವೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ‘ವಾರಿಸು’ ಸಿನಿಮಾ ಗೆಲುವು ಕಂಡಿತು. ‘ಲಿಯೋ’ ಸಿನಿಮಾ ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಪಡೆಯಿತಾದರೂ, ಬಾಕ್ಸ್ ಆಫೀಸ್​ನಲ್ಲಿ ಬ್ಲಾಕ್ಬಸ್ಟರ್ ಹಿಟ್ ಎನಿಸಿಕೊಂಡಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರದ ಒಟಿಟಿ ಪ್ರಸಾರದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

‘ಲಿಯೋ’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 19ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿದೆ. ವಿಶ್ವಾದ್ಯಂತ ಈ ಚಿತ್ರ 550 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ಒಟಿಟಿ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಬಗ್ಗೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡಿತ್ತು. ನೆಟ್​ಫ್ಲಿಕ್ಸ್ ಕಡೆಯಿಂದಲೇ ಈ ಬಗ್ಗೆ ಮಾಹಿತಿ ಸಿಕ್ಕಿದೆ.

‘ಲಿಯೋ’ ರಿಲೀಸ್ ಆಗಿ ನಾಲ್ಕು ವಾರಗಳಲ್ಲಿ ಈ ಚಿತ್ರ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ನವೆಂಬರ್ 16ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ‘ಲಿಯೋ’ ಒಟಿಟಿ ಬಿಡುಗಡೆ ದಿನಾಂಕದ ಬಗ್ಗೆ ನೆಟ್​ಫ್ಲಿಕ್ಸ್ ಸ್ಪಷ್ಟತೆ ನೀಡಿದೆ. ನವೆಂಬರ್ 21ರಿಂದ ಚಿತ್ರ ಸ್ಟ್ರೀಮ್ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ನವೆಂಬರ್ ತಿಂಗಳಲ್ಲಿ, ಒಟಿಟಿಯಲ್ಲಿ ಬಿಡುಗಡೆಯಾಗುವ ಚಲನಚಿತ್ರಗಳ ಪಟ್ಟಿಯನ್ನು ನೆಟ್​ಫ್ಲಿಕ್ಸ್ ಬಹಿರಂಗಪಡಿಸಿದೆ. ಅದರ ಭಾಗವಾಗಿ ದಳಪತಿ ವಿಜಯ್ ಅಭಿನಯದ ಲಿಯೋ ಚಿತ್ರದ ಸ್ಟ್ರೀಮಿಂಗ್ ಡೇಟ್ ಕೂಡ ಬಹಿರಂಗವಾಗಿದೆ.

View this post on Instagram

A post shared by Netflix India (@netflix_in)

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಲಿಯೋ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಅಂದುಕೊಂಡ ರೀತಿಯಲ್ಲಿ ‘ಲಿಯೋ’ ಮೂಡಿ ಬಂದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿದೆಯಾದರೂ ಇದು ನಕಲಿ ಲೆಕ್ಕ ಎಂದು ಅನೇಕರು ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:44 am, Fri, 17 November 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More