Liger OTT Date: ‘ಲೈಗರ್’ ಸಿನಿಮಾ ಒಟಿಟಿಗೆ ಬರೋದು ಯಾವಾಗ?
Liger Movie | Vijay Deverakonda: ‘ಲೈಗರ್’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ವಿಶೇಷ ಮ್ಯಾನರಿಸಂ ಇದೆ.
ಪುರಿ ಜಗನ್ನಾಥ್ ನಿರ್ದೇಶನದ ‘ಲೈಗರ್’ ಸಿನಿಮಾ (Liger Movie) ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಹತ್ತು ಹಲವು ಕಾರಣಗಳಿಂದಾಗಿ ಈ ಚಿತ್ರ ಹೈಪ್ ಸೃಷ್ಟಿ ಮಾಡಿತ್ತು. ಆಗಸ್ಟ್ 25ರಂದು ಬಿಡುಗಡೆ ಆದ ಈ ಸಿನಿಮಾದ ಮೇಲೆ ವಿಜಯ್ ದೇವರಕೊಂಡ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಬಾಕ್ಸ್ ಆಫೀಸ್ ಗಳಿಕೆ ವಿಚಾರದಲ್ಲಿ ‘ಲೈಗರ್’ ಸಿನಿಮಾ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಿತ್ತು. ಅದೇನೇ ಇರಲಿ, ವಿಜಯ್ ದೇವರಕೊಂಡ (Vijay Deverakonda) ಅವರಿಗೆ ಈ ಸಿನಿಮಾದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಹೆಚ್ಚಿರುವುದಂತೂ ನಿಜ. ಕೊರೊನಾ ಬಳಿಕ ಬದಲಾದ ಈ ಕಾಲಘಟ್ಟದಲ್ಲಿ ಜನರು ಒಟಿಟಿಯಲ್ಲಿ (OTT) ಸಿನಿಮಾ ನೋಡಲು ಬಯಸುತ್ತಿದ್ದಾರೆ. ‘ಲೈಗರ್’ ಚಿತ್ರ ಯಾವಾಗ ಒಟಿಟಿಗೆ ಬರಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ತೆರೆಕಂಡ ‘ಲೈಗರ್’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಇಷ್ಟು ದಿನ ಬಾಲಿವುಡ್ನಲ್ಲಿ ಮಿಂಚುತ್ತಿದ್ದ ಅವರು ಈಗ ದಕ್ಷಿಣ ಭಾರತದ ಸಿನಿಪ್ರಿಯರಿಗೆ ಪರಿಚಿತರಾಗಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡದೇ ಇರುವವರು ಒಟಿಟಿಯಲ್ಲಿ ನೋಡಿ ಎಂಜಾಯ್ ಮಾಡಲಿದ್ದಾರೆ.
‘ಲೈಗರ್’ ತೆರೆಕಂಡು ಕೆಲವೇ ದಿನಗಳು ಕಳೆದಿವೆ. ಹಲವು ಥಿಯೇಟರ್ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ನಿರ್ಮಾಪಕರು ಈಗಲೇ ಒಟಿಟಿ ರಿಲೀಸ್ ಡೇಟ್ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಹಾಗಿದ್ದರೂ ಕೂಡ ಒಂದಷ್ಟು ವರದಿಗಳು ಪ್ರಕಟ ಆಗಿವೆ. ಮೂಲಗಳ ಪ್ರಕಾರ, ಸೆಪ್ಟೆಂಬರ್ 30ರಂದು ‘ಲೈಗರ್’ ಒಟಿಟಿಗೆ ಬರಲಿದೆ. ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಅಧಿಕೃತ ಪ್ರಕಟಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
‘ಲೈಗರ್’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ವಿಶೇಷ ಮ್ಯಾನರಿಸಂ ಇದೆ. ವಿಶ್ವ ವಿಖ್ಯಾತ ಬಾಕ್ಸರ್ ಮೈಕ್ ಟೈಸನ್ ಅವರು ಕೂಡ ಈ ಚಿತ್ರದಲ್ಲಿ ನಟಿಸಿದ್ದರಿಂದ ಹೆಚ್ಚು ಹೈಪ್ ಕ್ರಿಯೇಟ್ ಆಯಿತು. ಹಾಡುಗಳು ಕೂಡ ಸಖತ್ ಸೌಂಡು ಮಾಡಿದವು. ಅದಕ್ಕೆ ತಕ್ಕಂತೆ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿಲ್ಲ ಎಂಬುದು ಬೇಸರದ ಸಂಗತಿ. ಈ ಚಿತ್ರಕ್ಕೆ ಪುರಿ ಜಗನ್ನಾಥ್, ಕರಣ್ ಜೋಹರ್, ಚಾರ್ಮಿ ಕೌರ್ ಬಂಡವಾಳ ಹೂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:33 pm, Sun, 28 August 22