AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಸಂಕ್ರಾಂತಿಯ ಬ್ಲಾಕ್ ಬಸ್ಟರ್ ಸಿನಿಮಾ

Mana Shankara Vara Prasad Garu: ಈ ಬಾರಿಯ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು, ಹಲವಾರು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

ಒಟಿಟಿಗೆ ಬಂತು ಸಂಕ್ರಾಂತಿಯ ಬ್ಲಾಕ್ ಬಸ್ಟರ್ ಸಿನಿಮಾ
Mana Shankara Vara Prasad Garu
ಮಂಜುನಾಥ ಸಿ.
|

Updated on:Feb 03, 2026 | 9:39 PM

Share

ಪ್ರತಿ ವರ್ಷ ಸಂಕ್ರಾಂತಿ ಹಬ್ಬಕ್ಕೆ ಹಲವಾರು ಸಿನಿಮಾಗಳು (Cinema) ಅದರಲ್ಲೂ ದೊಡ್ಡ ಬಜೆಟ್​​ನ ದೊಡ್ಡ ಸ್ಟಾರ್ ನಟರ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತವೆ. ಈ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು, ಹಲವಾರು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

ಮೆಗಾಸ್ಟಾರ್ ಚಿರಂಜೀವಿ, ನಯನತಾರಾ, ವಿಕ್ಟರಿ ವೆಂಕಟೇಶ್ ಅವರುಗಳು ಪ್ರಮುಖ ಪಾತ್ರದಲ್ಲಿ ನಟಿಸಿದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆಗಿತ್ತು. ಪಕ್ಕಾ ಹಾಸ್ಯಮಯ, ಆಕ್ಷನ್ ಸಿನಿಮಾ ಆಗಿದ್ದ ‘ಶಂಕರ ವರಪ್ರಸಾದ್’ ಸಿನಿಮಾವನ್ನು ತೆಲುಗು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸಿದರು. ಕಳೆದ ಐದಾರು ವರ್ಷಗಳಿಂದ ಸತತ ಸೋಲು ಕಾಣುತ್ತಲೇ ಬಂದಿದ್ದ ಚಿರಂಜೀವಿ ಅವರಿಗೆ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಭಾರಿ ದೊಡ್ಡ ಗೆಲುವು ದೊರೆತಿದೆ. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಡಲಿದ್ದು, ಅಲ್ಲಿಯೂ ಸಹ ಗೆಲುವು ಕಾಣುವ ಹಂಬಲದಲ್ಲಿದೆ.

ಇದನ್ನೂ ಓದಿ:ಕೊನೆಗೂ ಗೆದ್ದ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಸಿದ್ದೆಷ್ಟು?

‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಲಿದೆ. ಅದೂ ಈ ವಾರ ಅಲ್ಲ ಬದಲಿಗೆ ಮುಂದಿನ ವಾರ. ಫೆಬ್ರವರಿ 11ರಂದು ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ವಿಶೇಷವೆಂದರೆ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಇದೀಗ ಪ್ರೇಮಿಗಳ ದಿನಾಚರಣೆಗೆ ಒಟಿಟಿಗೆ ಬರುತ್ತಿದೆ. ಮತ್ತೊಂದು ವಿಶೇಷವೆಂದರೆ ತೆಲುಗಿನ ಈ ಸಿನಿಮಾ ಒಟಿಟಿಯಲ್ಲಿ ಬರೋಬ್ಬರಿ ಏಳು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಜೊತೆಗೆ ಮರಾಠಿ ಮತ್ತು ಬಾಂಗ್ಲಾ ಭಾಷೆಗಳಲ್ಲಿ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ವಿಕ್ಟರಿ ವೆಂಕಟೇಶ್ ಕನ್ನಡಿಗನ ಪಾತ್ರದಲ್ಲಿ ನಟಿಸಿರುವುದು ವಿಶೇಷ. ಚಿರಂಜೀವಿ ತಮ್ಮ ಅದ್ಭುತ ಕಾಮಿಡಿ ಟೈಮಿಂಗ್ ಜೊತೆಗೆ ಅದ್ಭುತ ಡ್ಯಾನ್ಸ್ ಮೂಲಕವು ಗಮನ ಸೆಳೆದಿದ್ದಾರೆ. ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಬಿಡುಗಡೆ ಆಗಿ 22 ದಿನಗಳಾಗಿದ್ದು ಈ ವರೆಗೆ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 500 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Tue, 3 February 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ