‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಕನ್ನಡದ ‘ಮೂರು ಕಾಸಿನ ಕುದುರೆ’ ಸಿನಿಮಾ

‘ಮೂರು ಕಾಸಿನ ಕುದುರೆ’ ಸಿನಿಮಾಗೆ ಕರ್ತೃ ಗಿರೀಶ್ ನಿರ್ದೇಶನ ಮಾಡಿದ್ದು, ಅವರೇ ಬಂಡವಾಳ ಹೂಡಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ಗೋವಿಂದೇಗೌಡ, ಸನಾತನಿ, ಪೂರ್ಣಚಂದ್ರ ಮೈಸೂರು ಅವರು ಅಭಿನಯಿಸಿದ್ದಾರೆ. ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಸಿನಿಮಾ ಪ್ರಸಾರ ಆಗುತ್ತಿರುವ ಪ್ರಯುಕ್ತ ಚಿತ್ರತಂಡದವರು ಸುದ್ದಿಗೋಷ್ಠಿ ಆಯೋಜಿಸಿದ್ದರು.

‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಕನ್ನಡದ ‘ಮೂರು ಕಾಸಿನ ಕುದುರೆ’ ಸಿನಿಮಾ
‘ಮೂರು ಕಾಸಿನ ಕುದುರೆ’ ಚಿತ್ರತಂಡ
Follow us
ಮದನ್​ ಕುಮಾರ್​
|

Updated on: Oct 31, 2024 | 4:51 PM

‘ಮೂರು ಕಾಸಿನ ಕುದುರೆ’ ಸಿನಿಮಾದಲ್ಲಿ ಸೋಷಿಯಲ್ ಡ್ರಾಮಾ ಶೈಲಿಯ ಕಹಾನಿ ಇದೆ. ಈ ಸಿನಿಮಾದಲ್ಲಿ ಪ್ರಮುಖವಾಗಿ 3 ಪಾತ್ರಗಳಿವೆ. ಪೂರ್ಣಚಂದ್ರ ಮೈಸೂರು, ಗೋವಿಂದೇಗೌಡ ಹಾಗೂ ಸನಾತನಿ ಅವರು ಆ ಪಾತ್ರಗಳನ್ನು ನಿಭಾಯಿಸಿದ್ದಾರೆ. ಕರ್ತೃ ಗಿರೀಶ್ ಅವರು ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲಿಲ್ಲ. ಅಷ್ಟರಲ್ಲಾಗಲೇ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ (ರೆಂಟಲ್) ವೀಕ್ಷಣೆಗೆ ಲಭ್ಯವಾಗಿದೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ. ಇತ್ತೀಚೆಗೆ ‘ಮೂರು ಕಾಸಿನ ಕುದುರೆ’ ಚಿತ್ರದ ಸುದ್ದಿಗೋಷ್ಠಿ ನಡೆಯಿತು.

‘ಮೂರು ಕಾಸಿನ ಕುದುರೆ’ ಚಿತ್ರಕ್ಕೆ ಪ್ರದೀಪ್ ಗಾಂಧಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಆನಂದರಾಜಾ ವಿಕ್ರಮ ಅವರ ಸಂಗೀತ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞಾನ ಸುಲಭವಾಗಿ ಕೈಗೆ ಸಿಗುತ್ತಿರುವುದರಿಂದ ಸಿನಿಮಾವನ್ನು ಹೇಗೋ ನಿರ್ಮಾಣ ಮಾಡಬಹುದು. ಆದರೆ ರಿಲೀಸ್​ ಮಾಡುವುದು ಕಷ್ಟದ ಕೆಲಸ. ಆ ಕಾರಣದಿಂದ ಅನೇಕ ಚಿತ್ರತಂಡಗಳು ತಮ್ಮ ಸಿನಿಮಾವನ್ನು ಬಿಡುಗಡೆ ಮಾಡದೇ ಸುಮ್ಮನಾಗಿವೆ. ಈ ಸಂದರ್ಭದಲ್ಲಿ ‘ಮೂರು ಕಾಸಿನ ಕುದುರೆ’ ಸಿನಿಮಾಗೆ ಒಟಿಟಿ ಹಾದಿ ಕಾಣಿಸಿದೆ.

ಗಿರೀಶ್ ನಿರ್ದೇಶನ ಮಾಡಿದ ‘ಮೂರು ಕಾಸಿನ ಕುದುರೆ’ ಸಿನಿಮಾ ಸಿದ್ಧವಾಗಿ 2 ವರ್ಷ ಕಳೆದಿದೆ. ಆದರೆ ವಿತರಕರು ಸಿಗದ ಕಾರಣ ಚಿತ್ರಮಂದಿರದಲ್ಲಿ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಇತ್ತೀಚೆಗೆ ‘ಅಮೆಜಾನ್ ಪ್ರೈಂ ವಿಡಿಯೋ’ ಒಟಿಟಿ ಸಂಸ್ಥೆಯವರು ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಹಾಗಾಗಿ ಚಿತ್ರತಂಡದ ಜೊತೆ ಒಟಿಟಿ ಕೈ ಜೋಡಿಸಿದೆ. ಕಳೆದ ಕೆಲವು ದಿನಗಳಿಂದ ಈ ಸಿನಿಮಾ ‘ಅಮೆಜಾನ್ ಪ್ರೈಂ ವಿಡಿಯೋ’ದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಸಿನಿಮಾ ತಂಡಕ್ಕೆ ಸಂತಸ ಮೂಡಿಸಿದೆ.

ಒಟಿಟಿಯಲ್ಲಿ ‘ಮೂರು ಕಾಸಿನ ಕುದುರೆ’ ನೋಡಿದ ಕೆಲವರು ಇಂಥ ಉತ್ತಮ ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಿ ಎಂದು ಒತ್ತಾಯಿಸುತ್ತಿದ್ದಾರಂತೆ. ಈ ಮಾಹಿತಿಯನ್ನು ಸುದ್ದಿಯಲ್ಲಿ ಚಿತ್ರತಂಡ ಹಂಚಿಕೊಂಡಿತು. ಬಳಿಕ ಪಾತ್ರಧಾರಿಗಳು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: ಕನ್ನಡ ಸಿನಿಮಾಗಳಿಗೆ ಕಡಿಮೆ ದರದ ಹೊಸ ಒಟಿಟಿ ವೇದಿಕೆ

ನಿರ್ಮಾಪಕ/ನಿರ್ದೇಶಕ ಗಿರೀಶ್ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಒಂದಷ್ಟು ಧಾರಾವಾಹಿ ಹಾಗೂ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಈಗ ‘ಮೂರು ಕಾಸಿನ ಕುದುರೆ’ ಸಿನಿಮಾವನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ ಕಿಡ್ನಾಪ್ ಕುರಿತ ಕಥೆ ಇದೆ. ಒಬ್ಬ ನಟ, ಮತ್ತೊಬ್ಬ ಕ್ಯಾಬ್ ಚಾಲಕ, ಮನೆಬಿಟ್ಟು ಬಂದ ಯುವತಿ ಈ ಮೂವರು ಒಂದೇ ಕ್ಯಾಬ್​ನಲ್ಲಿ ಪ್ರಮಾಣ ಮಾಡುವಾಗ ನಡೆಯುವ ಸನ್ನಿವೇಶಗಳೇ ಈ ಸಿನಿಮಾದ ಹೈಲೈಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್