AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​​ನಲ್ಲಿ ರಿಲೀಸ್ ಆದ ತಿಂಗಳೊಳಗೆ ಒಟಿಟಿಗೆ ಕಾಲಿಟ್ಟ ‘ಪ್ಯಾರಡೈಸ್’ ಸಿನಿಮಾ

ನ್ಯಾಚುರಲ್ ಸ್ಟಾರ್ ನಾನಿ ಹಾಗೂ ಪ್ರತಿಭಾವಂತ ನಿರ್ದೇಶಕ ಶ್ರೀಕಾಂತ್ ಒಡೆಲ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ 'ದಿ ಪ್ಯಾರಡೈಸ್' ಆಕ್ಷನ್ ಡ್ರಾಮಾ ಸಿನಿಮಾವು ಅಕ್ಟೋಬರ್ 22ರಂದು ಖ್ಯಾತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. 1980ರ ಹಿನ್ನೆಲೆಯುಳ್ಳ ಈ ವಿಭಿನ್ನ ಕಥೆಯು ಒಟಿಟಿಯಲ್ಲಿ ಯಾವ ರೀತಿಯಲ್ಲಿ ಸದ್ದು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. 

ಥಿಯೇಟರ್​​ನಲ್ಲಿ ರಿಲೀಸ್ ಆದ ತಿಂಗಳೊಳಗೆ ಒಟಿಟಿಗೆ ಕಾಲಿಟ್ಟ ‘ಪ್ಯಾರಡೈಸ್’ ಸಿನಿಮಾ
ಪ್ಯಾರಡೈಸ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Oct 19, 2026 | 2:49 PM

Share

ಮುಖ್ಯಾಂಶಗಳು

  • ನೆಟ್‌ಫ್ಲಿಕ್ಸ್‌ನಲ್ಲಿ ಅಕ್ಟೋಬರ್ 22ಕ್ಕೆ 'ದಿ ಪ್ಯಾರಡೈಸ್' ಡಿಜಿಟಲ್ ಪ್ರೀಮಿಯರ್
  •  1980ರ ಕಾಲಘಟ್ಟದ ಕಥೆ ಹಾಗೂ ಜಡಲ್ ಪಾತ್ರದಲ್ಲಿ ನಾನಿ
  • ಶ್ರೀಕಾಂತ್ ಒಡೆಲ ಮತ್ತು ನಾನಿ ಕಾಂಬಿನೇಷನ್ ಫೇಲ್

ಟಾಲಿವುಡ್‌ ನಟ ನಾನಿ ಹಾಗೂ ನಿರ್ದೇಶಕ ಶ್ರೀಕಾಂತ್ ಒಡೆಲ ಕಾಂಬಿನೇಷನ್ ಅಲ್ಲಿ ಮೂಡಿ ಬಂದ ‘ಪ್ಯಾರಡೈಸ್’ ಸಿನಿಮಾ ಸೆಪ್ಟೆಂಬರ್ 24ರಂದು ಥಿಯೇಟರ್​​ನಲ್ಲಿ ರಿಲೀಸ್ ಆಗಿತ್ತು. ಈ ಚಿತ್ರ ಜನರನ್ನು ಇಂಪ್ರೆಸ್ ಮಾಡಲು ವಿಫಲವಾಗಿತ್ತು. ಈ ಚಿತ್ರ ಈಗ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ. ಅದು ಕೂಡ ತಿಂಗಳ ಒಳಗಾಗಿ ಅನ್ನೋದು ಅಚ್ಚರಿಯ ವಿಷಯ.

‘ದಸರಾ’ ಸಿನಿಮಾ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಈ ಸಿನಿಮಾದಲ್ಲಿ ನಾನಿ ಹಾಗೂ ಶ್ರೀಕಾಂತ್ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅದೇ ಜೋಡಿ ‘ಪ್ಯಾರಡೈಸ್’ ಸಿನಿಮಾಗೆ  ಮತ್ತೆ ಒಂದಾಗಿತ್ತು. 80ರ ದಶಕದ ಕಥೆಯಲ್ಲಿ ‘ಪ್ಯಾರಡೈಸ್’ ಸಾಗಿತ್ತು. ಪ್ಯಾರಡೈಸ್ ಎಂಬ ಕೊಳೆಗೇರಿಯಲ್ಲಿ ಬದುಕುವ ಸವಾರೀ ಎಂಬ ಸಮುದಾಯದ ಬದುಕಿನ ಕರಾಳ ಸತ್ಯಗಳನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಈ ಚಿತ್ರದಲ್ಲಿ ನಾನಿ ಸಂಪೂರ್ಣ ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ‘ಜಡಲ್’ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟ ಮೋಹನ್ ಬಾಬು, ಶಿಕಂಜಾ ಮಾಲಿಕ್ ಪಾತ್ರದಲ್ಲಿ ಹಾಗೂ ರಾಘವ್ ಜುಯಲ್ ವಿಕ್ರಮ್ ಮಾಲಿಕ್ ಪಾತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾದಲ್ಲಿನ ಹಿಂಸೆ, ತಾರತಮ್ಯ ಹಾಗೂ ಅಸ್ತಿತ್ವಕ್ಕಾಗಿನ ಹೋರಾಟದ ಕಥೆಯು ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗೊದೆ.

ಎಸ್‌ಎಲ್ ವೀ ಸಿನಿಮನ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಚೆರುಕುರಿ ಅವರು ಈ ಸಿನಿಮಾವನ್ನು ಅತ್ಯಂತ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತ ಅಷ್ಟಾಗಿ ಮೋಡಿ ಮಾಡಿಲ್ಲ. ಥಿಯೇಟರ್‌ನಲ್ಲಿ ಸೋತಿರುವ ಈ ಸಿನಿಮಾನ ಪ್ರೇಕ್ಷಕರು ಇಷ್ಟಪಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಈ ವಿಷಯದಲ್ಲಿ ಯಶ್‌ಗಿಂತ ನಾನಿ ಬೆಸ್ಟ್; ನಟಿ ಶ್ರೀನಿಧಿ ಶೆಟ್ಟಿ ನೇರ ಮಾತು

ಸೆಪ್ಟೆಂಬರ್ 24ರಂದು ತೆರೆಕಂಡಿದ್ದ ಈ ಚಿತ್ರವು ಈಗ ಅಕ್ಟೋಬರ್ 22ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಅಧಿಕೃತವಾಗಿ ಸ್ಟ್ರೀಮಿಂಗ್ ಆರಂಭಿಸಲಿದೆ. ‘ವೆಲ್ಕಮ್ ಟು ಜಡಲ್ ಜಮಾನಾ’ ಎಂಬ ವಿಭಿನ್ನ ಕ್ಯಾಪ್ಷನ್‌ನೊಂದಿಗೆ ನೆಟ್‌ಫ್ಲಿಕ್ಸ್ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡ ಸಿನಿಪ್ರಿಯರು ಈಗ ಮನೆಯಲ್ಲೇ ಕುಳಿತು ಈ ಹೈ ವೋಲ್ಟೇಜ್ ಆಕ್ಷನ್ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ