AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ಗೆ ಖುಲಾಯಿಸಿದ ಅದೃಷ್ಟ, ಭಾರಿ ಮೊತ್ತಕ್ಕೆ ಒಟಿಟಿಗೆ ಸೇಲಾದ ‘ಸ್ಪೈ’ ಸಿನಿಮಾ

ಲುಗು ನಟ ನಿಖಿಲ್​ಸಿದ್ಧಾರ್ಥ್​ರ ಮಾರುಕಟ್ಟೆ ಮೌಲ್ಯದಲ್ಲಿ ಭಾರಿ ಏರಿಕೆಯಾಗಿದ್ದು, ಅವರ ಹೊಸ ಸಿನಿಮಾದ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ.

ನಿಖಿಲ್​ಗೆ ಖುಲಾಯಿಸಿದ ಅದೃಷ್ಟ, ಭಾರಿ ಮೊತ್ತಕ್ಕೆ ಒಟಿಟಿಗೆ ಸೇಲಾದ 'ಸ್ಪೈ' ಸಿನಿಮಾ
ನಿಖಿಲ್
ಮಂಜುನಾಥ ಸಿ.
|

Updated on: Apr 08, 2023 | 8:00 AM

Share

ಹ್ಯಾಪಿ ಡೇಸ್ (Happy Days) ಸಿನಿಮಾದ ಮೂಲಕ ಬೆಳಕಿಗೆ ಬಂದು ನಿಧಾನಕ್ಕೆ ತಮ್ಮದೇ ಮಾದರಿಯ ಸಿನಿಮಾಗಳನ್ನು ಮಾಡುತ್ತಾ ಬಂದು ಇದೀಗ ಮಾಸ್ ಹೀರೋ ಆಗಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿರುವ ತೆಲುಗು ನಟ ನಿಖಿಲ್​ ಸಿದ್ಧಾರ್ಥ್​ರ (Nikhil Siddhartha) ಮಾರುಕಟ್ಟೆ ಮೌಲ್ಯದಲ್ಲಿ ಭಾರಿ ಏರಿಕೆಯಾಗಿದ್ದು, ಅವರ ಹೊಸ ಸಿನಿಮಾದ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗುತ್ತಿವೆ. ಅದರಲ್ಲಿಯೂ ಈ ಸಿನಿಮಾದ ಒಟಿಟಿ ಹಕ್ಕು ಹುಬ್ಬೇರಿಸುವ ಮೊತ್ತಕ್ಕೆ ಮಾರಾಟವಾಗಿರುವುದು ತೆಲುಗು ಚಿತ್ರರಂಗದ ಹಲವರನ್ನು ಆಶ್ಚರ್ಯಚಕಿತರನ್ನಾಗಿಸಿದೆ.

ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆಗೆ ಸಜ್ಜಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಪ್ರೀ ರಿಲೀಸ್ ಬ್ಯುಸಿನೆಸ್ ನಲ್ಲಿ ದಾಖಲೆ ಬರೆಯುತ್ತಿದೆ. ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ‘ಸ್ಪೈ’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ‘ಎವರು’ ಮತ್ತು ‘ಹಿಟ್’ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ಇಡಿ ಎಂಟರ್‌ಟೈನ್‌ಮೆಂಟ್‌ ಅಡಿಯಲ್ಲಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಸಿನಿಮಾ ಥಿಯೇಟರ್ ಹಕ್ಕು ಹೊರತುಡಪಡಿಸಿ ಉಳಿದೆಲ್ಲಾ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಅಮೇಜಾನ್ ಹಾಗೂ ಸ್ಟಾರ್ ನೆಟ್ವರ್ಕ್ ಜೊತೆಗೂಡಿ ಸ್ಪೈ ಸಿನಿಮಾದ ನಾನ್ ಥಿಯೇಟ್ರಿಕಲ್ ಹಕ್ಕನ್ನು 40 ಕೋಟಿಗೆ ಖರೀದಿ ಮಾಡಿದೆ.

ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ಈಗಾಗಲೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ಹೆಚ್ಚಿಸಿವೆ. ಈ ಸಿನಿಮಾದಲ್ಲಿ ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರಲಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೊತೆಗೆ ಐಶ್ವರ್ಯ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ. ಹೈ ಬಜೆಟ್‌ನಲ್ಲಿ ತಯಾರಾಗಲಿರುವ ‘ಸ್ಪೈ’ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಈ ಸಿನಿಮಾ ಜೊತೆಗೆ ED ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಮತ್ತೆರಡು ಹೊಸ ಪ್ರಾಜೆಕ್ಟ್ ತಯಾರಾಗಲಿದ್ದು, ಡಿಜೆ ಟಿಲ್ಲು ಖ್ಯಾತಿಯ ನಿರ್ದೇಶಕ ವಿಮಲ್ ಕೃಷ್ಣ ನಿರ್ದೇಶನಲ್ಲೊಂದು ಸಿನಿಮಾ ಬರಲಿದೆ.

ನಿಖಿಲ್ ಸಿದ್ಧಾರ್ಥ್ ನಟನೆಯ ಕಾರ್ತಿಕೇಯ 2 ಕಳೆದ ವರ್ಷ ಬಿಡುಗಡೆ ಆಗಿ ಬಹುದೊಡ್ಡ ಹಿಟ್ ಆಗಿತ್ತು. ಚಿತ್ರಮಂದಿರಗಳಲ್ಲಿ ಸೂಪರ್ ಎನಿಸಿಕೊಂಡಿದ್ದ ಜೊತೆಗೆ ಒಟಿಟಿಯಲ್ಲಿ ಬಿಡುಗಡೆ ಆಗಿ ದೊಡ್ಡ ಸಂಖ್ಯೆಯ ಜನರನ್ನು ತಲುಪಿತ್ತು. ಗುಜರಾತಿನ ಸಿಎಂ ಸಹ ನಿಖಿಲ್ ಅವರನ್ನು ಭೇಟಿಯಾಗಿ ಸಂತಸ ವ್ಯಕ್ತಪಡಿಸಿದ್ದು ವಿಶೇಷ. ಅದಾದ ಬಳಿಕ ನಿಖಿಲ್ ನಟನೆಯ 18 ಪೇಜಸ್ ಸಿನಿಮಾ ಬಿಡುಗಡೆ ಆಗಿ ಅದೂ ಸಹ ಹಿಟ್ ಆಗಿತ್ತು, ಮಾತ್ರವಲ್ಲದೆ ಒಟಿಟಿಯಲ್ಲಿಯೂ ಒಳ್ಳೆಯ ಪ್ರದರ್ಶನ ಕಂಡಿತ್ತು. ಒಂದರ ಹಿಂದೆ ಒಂದು ನಿಖಿಲ್​ರ ಎರಡು ಸಿನಿಮಾಗಳು ಒಟಿಟಿಯಲ್ಲಿ ಉತ್ತಮ ಪ್ರದರ್ಶನ ಕಂಡ ಕಾರಣ, ನಿಖಿಲ್​ರ ಈ ಸಿನಿಮಾಕ್ಕೆ ಒಟಿಟಿಗಳಿಂದ ಭಾರಿ ಬೇಡಿಕೆ ಬಂದು ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?