AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸೂಪರ್ ಹಿಟ್ ಆದ ಹಾಲಿವುಡ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಬರೋದು ಯಾವಾಗ?

ಹಾಲಿವುಡ್​ನ ‘ಅಬ್ಸೆಷನ್’ ಸಿನಿಮಾ ಭಾರತದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ನಿರೀಕ್ಷೆಯೇ ಇಲ್ಲದೇ ಈ ಸಿನಿಮಾ ಅಂದಾಜು 100 ಕೋಟಿ ರೂಪಾಯಿ ಗಳಿಕೆ ಮಾಡುವಂತಾಗಿದೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಲು ಕಾದಿರುವ ಪ್ರೇಕ್ಷಕರಿಗೆ ಒಂದು ಗುಡ್ ನ್ಯೂಸ್ ಇದೆ.

ಭಾರತದಲ್ಲಿ ಸೂಪರ್ ಹಿಟ್ ಆದ ಹಾಲಿವುಡ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಬರೋದು ಯಾವಾಗ?
Obsession Movie Poster
ಮದನ್​ ಕುಮಾರ್​
|

Updated on: Jun 24, 2026 | 7:05 PM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಹಾಲಿವುಡ್ ಹಾರರ್ ಸಿನಿಮಾ ‘ಅಬ್ಸೆಷನ್’.
  • ಭಾರತದಲ್ಲೂ ಭರ್ಜರಿ ಕಲೆಕ್ಷನ್ ಮಾಡಿದ ಬಳಿಕ ಒಟಿಟಿ ಬಿಡುಗಡೆ ತಯಾರಿ.
  • ಭಾರತದ ಪ್ರಾದೇಶಿಕ ಭಾಷೆಗಳಲ್ಲೂ ಬಿಡುಗಡೆ ಮಾಡಲು ನಡೆದಿದೆ ಸಿದ್ಧತೆ.

ನಿರ್ದೇಶಕ ಕರಿ ಬಾರ್ಕರ್ ಅವರ ಸೈಕಲಾಜಿಕಲ್ ಹಾರರ್ ಥ್ರಿಲ್ಲರ್ ಸಿನಿಮಾ ‘ಅಬ್ಸೆಷನ್’ (Obsession) ಈ ವರ್ಷದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ತೀರಾ ಸಣ್ಣ ಬಜೆಟ್‌ನಲ್ಲಿ ಭಿನ್ನವಾದ ಕಥಾಹಂದರದೊಂದಿಗೆ ತಯಾರಾದ ಈ ಸಿನಿಮಾ, ನಿರೀಕ್ಷೆಗೂ ಮೀರಿದ ಯಶಸ್ಸು ಕಂಡು ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದ ಒಟಿಟಿ (OTT) ರಿಲೀಸ್ ಸಲುವಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಆ ಬಗ್ಗೆ ಸುದ್ದಿ ಕೇಳಿಬಂದಿದೆ.

ಥಿಯೇಟರ್‌ಗಳಲ್ಲಿ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದಲೇ ‘ಅಬ್ಸೆಷನ್’ ಸಿನಿಮಾದ ಡಿಜಿಟಲ್ ರಿಲೀಸ್ ಯೋಜನೆಯನ್ನು ಮುಂದೂಡಲಾಗಿತ್ತು. ಆದರೆ ಈಗ ಚಿತ್ರದ ಒಟಿಟಿ ಬಿಡುಗಡೆ ದಿನಾಂಕ ನಿಗದಿಯಾಗಿದ್ದು, ಜೂನ್ 30ರಿಂದ ಪ್ರೀಮಿಯಂ ವಿಡಿಯೋ-ಆನ್-ಡಿಮ್ಯಾಂಡ್ (PVOD) ಪ್ಲಾಟ್‌ಫಾರ್ಮ್‌ಗಳಲ್ಲಿ ಸಿನಿಮಾ ಲಭ್ಯವಾಗಲಿದೆ ಎಂದು ವರದಿಯಾಗಿದೆ.

ಬರೋಬ್ಬರಿ 100 ಕೋಟಿ ರೂಪಾಯಿ ಸನಿಹ:

ಭಾರತದಲ್ಲೂ ಈ ಸಿನಿಮಾ ಹಾರರ್ ಪ್ರೇಮಿಗಳ ನೆಚ್ಚಿನ ಆಯ್ಕೆಯಾಗಿದೆ. ಪ್ರಮುಖ ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್‌ಮೈಶೋ’ ಚಾರ್ಟ್‌ನಲ್ಲಿ ಸದಾ ಮುಂಚೂಣಿಯಲ್ಲಿರುವ ಈ ಸಿನಿಮಾ, ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆಯ ಸನಿಹದಲ್ಲಿದೆ. ಯಾವುದೇ ದೊಡ್ಡ ಸ್ಟಾರ್ ನಟರಿಲ್ಲದೆ ಈ ಸಾಧನೆ ಮಾಡಿರುವುದು ಹಾಲಿವುಡ್ ಚಿತ್ರರಂಗದಲ್ಲೇ ದೊಡ್ಡ ದಾಖಲೆಯಾಗಿದೆ.

ಭಾರತದ ಪ್ರಾದೇಶಿಕ ಭಾಷೆಗಳಲ್ಲೂ ಲಭ್ಯ?

ಆದರೆ ಭಾರತೀಯ ಒಟಿಟಿ ವೀಕ್ಷಕರಿಗೆ ಸಣ್ಣದೊಂದು ಟ್ವಿಸ್ಟ್ ಇದೆ. ಅಮೆಜಾನ್ ಪ್ರೈಮ್ ವಿಡಿಯೋ, ಆಪಲ್ ಟಿವಿ ಅಥವಾ ಬಿಎಂಎಸ್ ಸ್ಟ್ರೀಮ್ ಮುಂತಾದ ಪ್ರಮುಖ ಪ್ಲಾಟ್‌ಫಾರ್ಮ್‌ಗಳು ಇದರ ಸ್ಟ್ರೀಮಿಂಗ್ ಹಕ್ಕುಗಳನ್ನು ಖರೀದಿಸುವುದರ ಮೇಲೆ ಭಾರತದ ಡಿಜಿಟಲ್ ಬಿಡುಗಡೆ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ, ಸಿನಿಮಾ ಭಾರತದಲ್ಲಿ ಬಿಡುಗಡೆಯಾದರೆ ಪ್ರಾದೇಶಿಕ ಭಾಷೆಗಳಲ್ಲೂ ಲಭ್ಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಅಬ್ಸೆಷನ್’ ಚಿತ್ರಕ್ಕೆ ಹೆಚ್ಚು ಶೋ: ತಮ್ಮ ಸಿನಿಮಾಗೆ ಚಿತ್ರಮಂದಿರ ಸಿಗದಿದ್ದಕ್ಕೆ ಅನುರಾಗ್ ಕಶ್ಯಪ್ ಬೇಸರ

ನಾಯಕಿ ಅಭಿನಯಕ್ಕೆ ಭರ್ಜರಿ ಮೆಚ್ಚುಗೆ:

‘ಅಬ್ಸೆಷನ್’ ಚಿತ್ರದಲ್ಲಿ ಮೈಕೆಲ್ ಜಾನ್​ಸ್ಟನ್ ಮತ್ತು ಇಂಡಿ ನವರೇಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಶೇಷವಾಗಿ ನಾಯಕಿ ಇಂಡಿ ನವರೇಟಿ ಅವರ ನಟನೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡವರಿಗೆ ಹಾಗೂ ಮತ್ತೊಮ್ಮೆ ಮನೆಯಲ್ಲೇ ಕುಳಿತು ಹಾರರ್ ಅನುಭವ ಪಡೆಯಲು ಕಾಯುತ್ತಿರುವ ಪ್ರೇಕ್ಷಕರಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ