Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಹೊಸ ನಿಯಮ ತರಲು ಮುಂದಾದ ಸರ್ಕಾರ; ಯಾವಾಗಿನಿಂದ ಜಾರಿ?

ಈ ವಿಚಾರದಲ್ಲಿ ಮಾತುಕತೆ ನಡೆಯುತ್ತಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದರೆ ಒಟಿಟಿ ಪ್ಲಾಟ್​​ಫಾರ್ಮ್​​ಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ.  

ಒಟಿಟಿಗೆ ಹೊಸ ನಿಯಮ ತರಲು ಮುಂದಾದ ಸರ್ಕಾರ; ಯಾವಾಗಿನಿಂದ ಜಾರಿ?
ಒಟಿಟಿ ಪ್ಲಾಟ್​ಫಾರ್ಮ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 17, 2023 | 8:16 AM

ಕೊವಿಡ್ ಕಾಣಿಸಿಕೊಂಡ ನಂತರ ಒಟಿಟಿ (OTT Platforms) ವ್ಯಾಪ್ತಿ ಹಿರಿದಾಗಿದೆ. ಅನೇಕ ಚಿತ್ರಗಳು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಯಾವುದೇ ಕಟ್ಟುಪಾಡು ಇಲ್ಲದ ಕಾರಣ ಹಿಂಸೆ, ಅಪರಾಧ, ಮದ್ಯಪಾನ, ದೂಮಪಾನದ ದೃಶ್ಯಗಳನ್ನು ಯಥೇಚ್ಛವಾಗಿ ತೋರಿಸಲಾಗುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ (Indian Government) ಹೊಸ ನಿಯಮ ತರಲು ಮುಂದಾಗಿದೆ. ಸದ್ಯ ಈ ವಿಷಯ ಮಾತುಕತೆ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ.

ತಂಬಾಕು ಸೇವನೆ ಅಪಾಯ. ಈ ಕಾರಣಕ್ಕೆ ಸಿನಿಮಾ ಆರಂಭಕ್ಕೂ ಮೊದಲು ‘ತಂಬಾಕು ಸೇವನೆ ಅಪಾಯ’ ಎಂದು ಜಾಗೃತಿ ಮೂಡಿಸುವ ಜಾಹೀರಾತು ತೋರಿಸಲಾಗುತ್ತದೆ. ಇನ್ನುಮುಂದೆ ಒಟಿಟಿಯಲ್ಲಿನ ವೆಬ್ ಸೀರಿಸ್ ಹಾಗೂ ಸಿನಿಮಾಗಳಲ್ಲೂ ಈ ಜಾಹೀರಾತು ಪ್ರಸಾರ ಆಗುವಂತೆ ನೋಡಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸರ್ಕಾರ ನಿಯಮ ರೂಪಿಸುತ್ತಿದೆ.

ಸದ್ಯ ವೆಬ್​ ಸೀರಿಸ್​​ಗಳಲ್ಲಿ ಮದ್ಯ ಸೇವನೆ ಹಾಗೂ ಧೂಮ್ರಪಾನದ ದೃಶ್ಯಗಳು ಬಂದರೆ ಯಾವುದೇ ಎಚ್ಚರಿಕೆಯನ್ನು ತೋರಿಸಲಾಗುವುದಿಲ್ಲ. ಆದರೆ, ಇನ್ನುಮುಂದೆ ಹಾಗಾಗುವುದಿಲ್ಲ. ಈ ರೀತಿಯ ದೃಶ್ಯಗಳು ಬಂದರೆ ಎಚ್ಚರಿಕೆ ನೀಡಬೇಕಾಗುತ್ತದೆ. ಈ ರೀತಿಯ ಆದೇಶವನ್ನು ಸರ್ಕಾರ ಹೊರಡಿಸಿದೆ. ಹೊಸ ನಿಯಮ ಜಾರಿಗೆ ತರುವ ವಿಚಾರಕ್ಕೆ ಸಂಬಂಧಿಸಿ ಭಾರತೀಯ ಆರೋಗ್ಯ ಇಲಾಖೆಯು ಮಾಹಿತಿ ಮತ್ತು ಪ್ರಸಾರ ಇಲಾಖೆಯನ್ನು ಸಂಪರ್ಕಿಸಿದೆ.

ಇದನ್ನೂ ಓದಿ
Image
ಬಾಲಿವುಡ್​ನಲ್ಲಿ ಸೋತ ಆಮಿರ್ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ಗೆ ಒಟಿಟಿಯಲ್ಲಿ ಭವ್ಯ ಸ್ವಾಗತ  
Image
100 ಕೋಟಿ ರೂಪಾಯಿಗೆ ಸೇಲ್ ಆಯ್ತು ಶಾರುಖ್ ಸಿನಿಮಾದ ಒಟಿಟಿ ಹಕ್ಕು; ಥಿಯೇಟರ್ ಕಥೆ ಏನು?
Image
Ponniyin Selvan: 125 ಕೋಟಿ ರೂಪಾಯಿಗೆ ‘ಪೊನ್ನಿಯಿನ್​ ಸೆಲ್ವನ್​’ ಒಟಿಟಿ ಹಕ್ಕು ಮಾರಾಟ; ಮಣಿರತ್ನಂ ಚಿತ್ರಕ್ಕೆ ಭಾರಿ ಬಿಸ್ನೆಸ್​

ಸದ್ಯ ಈ ವಿಚಾರದಲ್ಲಿ ಮಾತುಕತೆ ನಡೆಯುತ್ತಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದರೆ ಒಟಿಟಿ ಪ್ಲಾಟ್​​ಫಾರ್ಮ್​​ಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ.

ಒಟಿಟಿಗೆ ಸೆನ್ಸಾರ್​ಶಿಪ್​​ ಸಾಧ್ಯವಿಲ್ಲ ಎಂದಿದ್ದ ಕೋರ್ಟ್​

‘ವೆಬ್​ ಸಿರೀಸ್​ಗಳಿಗೆ ಸೆನ್ಸಾರ್​ ಕಮಿಟಿ ಇರಲು ಹೇಗೆ ಸಾಧ್ಯ? ಅದಕ್ಕಾಗಿ ಬೇರೆಯದೇ ಕಾನೂನು ಇದೆ. ಅದರ ಅಡಿಯಲ್ಲಿ ಒಟಿಟಿ ಬರುತ್ತದೆ ಎಂದಾದರೆ ಮಾತ್ರ ಈಗಿರುವ ಕಾನೂನು ಅನ್ವಯ ಆಗುತ್ತದೆ. ಬೇರೆ ಬೇರೆ ದೇಶಗಳಿಂದಲೂ ಕಂಟೆಂಟ್​ ಪ್ರಸಾರ ಆಗುವುದರಿಂದ ಅನೇಕ ಪ್ರಶ್ನೆಗಳು ಉದ್ಭವ ಆಗುತ್ತವೆ. ವೀಕ್ಷಕರು ಇಲ್ಲಿನವರೇ ಆಗಿದ್ದರೂ ಕೂಡ ಕಂಟೆಂಟ್​ ಪ್ರಸಾರ ಆಗುತ್ತಿರುವುದು ಬೇರೆ ಬೇರೆ ದೇಶಗಳಿಂದ. ಪ್ರಸಾರ ಆದ ನಂತರ ಏನಾದರೂ ತಪ್ಪಿದ್ದರೆ ಕ್ರಮ ಕೈಗೊಳ್ಳುವುದು ಬೇರೆ. ನಿಮ್ಮ ಅರ್ಜಿ ಹೆಚ್ಚು ವಿವರವಾಗಿ ಇರಬೇಕು’ ಎಂದು ಹೇಳುವ ಮೂಲಕ ಅರ್ಜಿದಾರರ ಮನವಿಯನ್ನು ಕೋರ್ಟ್​ ತಳ್ಳಿಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್