Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಲವು ಸೂಪರ್ ಹಿಟ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

OTT release this week: ಚಿತ್ರಮಂದಿರಗಳಲ್ಲಿ 'ಸಪ್ತ ಸಾಗರದಾಚೆ ಎಲ್ಲೋ', 'ಜವಾನ್', 'ಜೈಲರ್' ಸಿನಿಮಾಗಳು ಅಬ್ಬರಿಸುತ್ತಿರುವ ಹೊತ್ತಿನಲ್ಲೇ, ಒಟಿಟಿಯಲ್ಲಿಯೂ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಿಟ್ ಸಿನಿಮಾಗಳು ಬಿಡುಗಡೆ ಆಗಿವೆ. ಈ ವಾರ ಒಟಿಟಿಗೆ ಬಂದ ಕೆಲವು ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ.

ಈ ವಾರ ಒಟಿಟಿಗೆ ಬಂದಿವೆ ಹಲವು ಸೂಪರ್ ಹಿಟ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?
ಒಟಿಟಿ
Follow us
ಮಂಜುನಾಥ ಸಿ.
|

Updated on: Sep 14, 2023 | 8:29 PM

ಚಿತ್ರಮಂದಿರಗಳಲ್ಲಿ (Theater) ಒಳ್ಳೆಯ ಸಿನಿಮಾಗಳು ಸಾಲು-ಸಾಲಾಗಿ ಬರುತ್ತಿವೆ. ಕನ್ನಡ, ಹಿಂದಿ, ತಮಿಳು ಸಿನಿಮಾಗಳು ಸಾಲಾಗಿ ಹಿಟ್ ಆಗುತ್ತಿವೆ. ‘ಸಪ್ತಸಾಗರದಾಚೆ ಎಲ್ಲೋ’, ‘ಜವಾನ್‘ (Jawan), ‘ಜೈಲರ್’ ಇನ್ನು ಕೆಲವು ಹಿಟ್ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅದರ ಜೊತೆಗೆ ಈ ವಾರ ಒಟಿಟಿಗೂ ಸಹ ಭರ್ಜರಿ ಹಿಟ್ ಸಿನಿಮಾಗಳು ಎಂಟ್ರಿ ಆಗಿವೆ. ಅದರಲ್ಲಿ ಕನ್ನಡದ ಇತ್ತೀಚಿನ ಹಿಟ್ ಸಿನಿಮಾಗಳು ಸಹ ಸೇರಿವೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’

ಸೂಪರ್ ಹಿಟ್ ಆಗಿದ್ದ ಕನ್ನಡದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇದೇ ವಾರ ಜೀ5 ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಜುಲೈ 21ಕ್ಕೆ ಬಿಡುಗಡೆ ಆಗಿದ್ದ ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಹೊಸ ಹುಡುಗರು, ಭಿನ್ನವಾಗಿ ಹೆಣೆದು, ಪ್ರಸ್ತುತ ಪಡಿಸಿದ ಈ ಸಿನಿಮಾ ಯುವಕರನ್ನು ಬಹುವಾಗಿ ಸೆಳೆದಿತ್ತು. ಇತ್ತೀಚೆಗಷ್ಟೆ ಸಿನಿಮಾ 50 ದಿನ ಪೂರೈಸಿದೆ.

‘ಕೌಸಲ್ಯ ಸುಪ್ರಜಾ ರಾಮ’

ಡಾರ್ಲಿಂಗ್ ಕೃಷ್ಣ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಸಹ ಇದೇ ವಾರ ಒಟಿಟಿಗೆ ಬಂದಿದೆ. ಸೆಪ್ಟೆಂಬರ್ 14ರ ರಾತ್ರಿಯಿಂದಲೇ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಶಶಾಂಕ್ ನಿರ್ದೇಶಿಸಿರುವ ಈ ಸಿನಿಮಾ ಫ್ಯಾಮಿಲಿ ಆಡಿಯೆನ್ಸ್​ ಅನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿತ್ತು. ಈಗ ಒಟಿಟಿ ಮೂಲಕ ಇನ್ನೂ ಹೆಚ್ಚು ಜನರಿಗೆ ಸಿನಿಮಾ ತಲುಪಲಿದೆ.

ಚಿರಂಜೀವಿಯ ‘ಭೋಲಾ ಶಂಕರ್’

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ ಆಗಸ್ಟ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಈ ಸಿನಿಮಾ ಹೀನಾಯ ಸೋಲು ಕಂಡಿತು. ಪ್ರೇಕ್ಷಕರು ಚಿರಂಜೀವಿಯ ಕತೆಯ ಆಯ್ಕೆಯ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಎತ್ತಂಗಡಿಯಾದ ಈ ಸಿನಿಮಾ ಇದೀಗ ‘ನೆಟ್​ಫ್ಲಿಕ್ಸ್​’ ನಲ್ಲಿ ಸೆಪ್ಟೆಂಬರ್ 15ರಿಂದ ಲಭ್ಯವಾಗಲಿದೆ.

‘ರಾಮಬಾಣಂ’

ತೆಲುಗಿನ ನಟ ಗೋಪಿಚಂದ್ ನಟನೆಯ ‘ರಾಮಬಾಣಂ’ ಸಿನಿಮಾ ಸೆಪ್ಟೆಂಬರ್ 15ರಿಂದಲೇ ನೆಟ್​ಫ್ಲಿಕ್ಸ್​ನಲ್ಲಿ ಲಭ್ಯವಾಗಲಿದೆ. ಈ ಸಿನಿಮಾ ಕಳೆದ ತಿಂಗಳ ಆರಂಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಇದೀಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗುತ್ತಿದೆ.

‘ಬಾರ್ಬಿ’

ಕಳೆದ ತಿಂಗಳು ಭಾರತದಲ್ಲಿ ದೊಡ್ಡ ಹವಾ ಎಬ್ಬಿಸಿತ್ತು ‘ಬಾರ್ಬಿ’ ಹಾಲಿವುಡ್ ಸಿನಿಮಾ. ಹಾಲಿವುಡ್​ನ ‘ಆಪನ್​ಹೈಮರ್’ ಸಿನಿಮಾ ಬಿಡುಗಡೆ ಆದ ದಿನವೇ ಬಾರ್ಬಿ ಸಿನಿಮಾ ಸಹ ಬಿಡುಗಡೆ ಆಗಿತ್ತು. ‘ಆಪನ್​ಹೈಮರ್​’ಗಿಂತಲೂ ಹೆಚ್ಚು ಮೊತ್ತವನ್ನು ಕಲೆ ಹಾಕಿತ್ತು ಸಹ. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಂ ಆಗುತ್ತಿದೆ. ಆದರೆ ಈ ಸಿನಿಮಾ ನೋಡಲು ಚಂದಾದಾರರು ಹೆಚ್ಚಿನ ಮೊತ್ತವನ್ನು ಪಾವತಿಸಬೇಕಿದೆ.

ಈ ಸಿನಿಮಾಗಳ ಜೊತೆಗೆ ಇನ್ನೂ ಹಲವು ಇಂಗ್ಲೀಷ್ ವೆಬ್ ಸರಣಿ, ಸಿನಿಮಾಗಳು, ತೆಲುಗು ವೆಬ್ ಸರಣಿ ‘ಅತಿಥಿ’, ‘ಮೈತ್ರಿ’ ಇನ್ನೂ ಹಲವು ವಿವಿಧ ಭಾಷೆಯ ಸಿನಿಮಾಗಳು, ವೆಬ್ ಸರಣಿಗಳು ಬಿಡುಗಡೆ ಆಗುತ್ತಿವೆ.

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ