ಒಟಿಟಿಗೆ ಈ ವಾರ ಭರ್ಜರಿ ಸಿನಿಮಾಗಳು, ನೋಡಿ ನೋಡಿ ಮರುಳಾಗಿ

Updated on: Jun 06, 2026 | 5:48 PM

OTT Release this week: ಐಪಿಎಲ್ ಮುಗಿದಿದೆ, ಚಿತ್ರಮಂದಿರಗಳಿಗೆ ಸಿನಿಮಾಗಳು ಬರಲು ಪ್ರಾರಂಭವಾಗಿವೆ. ಈ ವಾರ ‘ಪೆದ್ದಿ’ ಮತ್ತು ಕನ್ನಡದಲ್ಲಿ ‘ಮ್ಯಾಂಗೊ ಪಚ್ಚ’ ಸಿನಿಮಾಗಳು ಬಂದಾಗಿವೆ. ಅದರ ಜೊತೆಗೆ ಈ ವಾರ ಒಟಿಟಿಗೆ ಸಹ ಕೆಲವು ಸೂಪರ್ ಹಿಟ್ ಸಿನಿಮಾಗಳು ಸಹ ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

1 / 6
ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ.

ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ.

2 / 6

ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಇನ್ನೂ ಹಲವರು ನಟಿಸಿರುವ ಈ ಸಿನಿಮಾವನ್ನು ಜೀ 5ನಲ್ಲಿ ವೀಕ್ಷಿಸಬಹುದಾಗಿದೆ.

3 / 6

ಮಾಧುರಿ ದೀಕ್ಷಿತ್, ತೃಪ್ತಿ ದಿಮ್ರಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಮಾ ಬೆಹೆನ್’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಮೂವರು ಮಹಿಳೆಯರ ಕತೆಯನ್ನು ಒಳಗೊಂಡಿರುವ ಈ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿದೆ. ಸಿನಿಮಾ ಅನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

4 / 6

ಮಲಯಾಳಂನ ಇಬ್ಬರು ಸ್ಟಾರ್ ನಟರುಗಳಾದ ಮೋಹನ್​​ಲಾಲ್ ಮತ್ತು ಮಮ್ಮುಟಿ ಒಟ್ಟಿಗೆ ನಟಿಸಿರುವ ಆಕ್ಷನ್ ಡ್ರಾಮಾ ಸಿನಿಮಾ ‘ಪೇಟ್ರಿಯಾಟ್’ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಫಹಾದ್ ಫಾಸಿಲ್ ಸಹ ನಟಿಸಿರುವ ಈ ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

5 / 6

ಸತೀಶ್ ನೀನಾಸಂ ನಟನೆಯ ಆಕ್ಷನ್ ಡ್ರಾಮಾ ‘ದಿ ರೈಸ್ ಆಫ್ ಅಶೋಕಾ’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ವಿಮರ್ಶಕರಿಂದ ಮೆಚ್ಚುಗೆ ಗಳಿಸಿದ್ದ ಈ ಕನ್ನಡ ಸಿನಿಮಾ ಇದೀಗ ಸನ್ ನೆಕ್ಸ್ಟ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 6

ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳ ಕೊರತೆ ಇದೆ ಎಂದು ದೂರುಗಳನ್ನು ಹೇಳುವ ಸಂದರ್ಭದಲ್ಲಿಯೇ ಬಂದಿರುವ ಕನ್ನಡದ ಒಂದು ಸುಂದರ ಸಿನಿಮಾ ‘ವಲವಾರ’ ಹಲವು ಒಳ್ಳೆಯ ಕನ್ನಡ ಸಿನಿಮಾಗಳಂತೆ ಈ ಸಿನಿಮಾ ಸಹ ಚಿತ್ರಮಂದಿರದಲ್ಲಿ ಫ್ಲಾಪ್ ಎನಿಸಿಕೊಂಡಿತು. ಈಗ ಒಟಿಟಿಯಲ್ಲಾದರೂ ಸಿನಿಮಾಕ್ಕೆ ಅರ್ಹ ಪ್ರಶಂಸೆ ಸಿಗುತ್ತದೆಯೇ ನೋಡಬೇಕು. ಸಿನಿಮಾ ಅನ್ನು ಜೀ5 ನಲ್ಲಿ ಬಿಡುಗಡೆ ಆಗಿದೆ.

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us