OTT Release This Week: ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

OTT Release This Week: ಈ ವಾರ ಒಟಿಟಿಯಲ್ಲಿ ಕೆಲವು ಸೂಪರ್ ಹಿಟ್ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಹಾಲಿವುಡ್​ನ ಅವತಾರ್ 2 ಸೇರಿದಂತೆ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳು ನಿಮಗಾಗಿ ಈ ವಾರ.

OTT Release This Week: ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಒಟಿಟಿಯಲ್ಲಿ ಹೊಸ ಸಿನಿಮಾ
Follow us
ಮಂಜುನಾಥ ಸಿ.
|

Updated on: Jun 07, 2023 | 3:18 PM

ಐಪಿಎಲ್ (IPL), ಚುನಾವಣೆ (Election) ಕಾರಣಕ್ಕೆ ಚಿತ್ರಮಂದಿರಗಳು (Theater) ಹೊಸ ಸಿನಿಮಾಗಳಿಲ್ಲದೆ (New Movie) ಮಂಕಾಗಿದ್ದವು. ಆ ಸಮಯಕ್ಕೆ ಒಟಿಟಿಯಲ್ಲಿ ಕೆಲವು ಸೂಪರ್ ಹಿಟ್ ಸಿನಿಮಾಗಳು ಬಿಡುಗಡೆ ಆಗಿ ಪ್ರೇಕ್ಷಕರನ್ನು ರಂಜಿಸಿದವು. ಈ ವಾರವೂ ಸಹ ಕೆಲವು ಪ್ರಮುಖ ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಹಾಲಿವುಡ್​ನಿಂದ ಹಿಡಿದು ಪ್ರಾದೇಶಿಕ ಭಾಷೆಯ ಕೆಲವು ಸ್ಟಾರ್ ನಟರ ಬಿಗ್ ಬಜೆಟ್ ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಈ ವಾರ ಒಟಿಟಿಗೆ ಬರುತ್ತಿರುವ ಕೆಲವು ಬಿಗ್ ಬಜೆಟ್, ಸ್ಟಾರ್ ನಟರ ಸಿನಿಮಾಗಳ ಪಟ್ಟಿ ಇಲ್ಲಿದೆ.

ಅವತಾರ್ 2

ಕಳೆದ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಕಲೆಕ್ಷನ್​ನಲ್ಲಿ ದಾಖಲೆ ಬರೆದಿದ್ದ ಅವತಾರ್ 2 ಸಿನಿಮಾ ಈಗ ಒಟಿಟಿಗೆ ಬಂದಿದೆ. ಡಿಸೆಂಬರ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ವಿಶ್ವದಾದ್ಯಂತ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿತ್ತು. ಇದೀಗ ಈ ಸಿನಿಮಾ ಡಿಸ್ನಿ ಹಾಟ್​ಸ್ಟಾರ್​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಡಿಸ್ನಿಯಲ್ಲಿ ಉಚಿತವಾಗಿ ಈ ಸಿನಿಮಾವನ್ನು ಇಂಗ್ಲೀಷ್ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ.

2018

ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಮಲಯಾಳಂನ 2018 ಸಿನಿಮಾ ದೊಡ್ಡ ಹಿಟ್ ಆಗಿದೆ. ಐದು ವರ್ಷಗಳ ಹಿಂದೆ ಕೇರಳಕ್ಕೆ ಒದಗಿ ಬಂದಿದ್ದ ಭೀಕರ ಪ್ರವಾಹದ ಕುರಿತಾದ ಕತೆಯನ್ನು 2018 ಒಳಗೊಂಡಿದ್ದು ಈ ಸಿನಿಮಾವು ಕೇರಳದ ಈವರೆಗಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನಿಸಿಕೊಂಡಿದೆ. ಅತ್ಯಂತ ಕಡಿಮೆ ಬಜೆಟ್​ನಲ್ಲಿ ಅದ್ಭುತವಾದ ಗ್ರಾಫಿಕ್ಸ್ ಗಳನ್ನು ಬಳಸಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾವು ಸೋನಿ ಲಿವ್​ನಲ್ಲಿ ಮಲಯಾಳಂ ಸೇರಿದಂತೆ ಭಾರತದ ಇತರೆ ಕೆಲವು ಭಾಷೆಗಳಲ್ಲಿ ಲಭ್ಯವಿದೆ. ಈ ಸಿನಿಮಾವು ಒಟಿಟಿಯಲ್ಲಿ ಬಿಡುಗಡೆ ಆಗುತ್ತಿರುವುದನ್ನು ವಿರೋಧಿಸಿ ಕೇರಳದ ಚಿತ್ರಮಂದಿರ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ.

ಕಸ್ಟಡಿ

ನಾಗ ಚೈತನ್ಯ ನಟಿಸಿದ್ದ ಬಹುನಿರೀಕ್ಷಿತ ಸಿನಿಮಾ ಕಸ್ಟಡಿ ಚಿತ್ರಮಂದಿರಗಳಲ್ಲಿ ಕೆಲವೇ ದಿನಗಳಲ್ಲಿ ಒಟಿಟಿಗೆ ಬರುತ್ತಿದೆ. ತಮಿಳಿನ ವೆಂಕಟ್ ಪ್ರಭು ನಿರ್ದೇಶಿಸಿದ್ದ ಈ ಸಿನಿಮಾ ಮೇ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಿರಲಿಲ್ಲ. ಇದೀಗ ಅಮೆಜಾನ್ ಪ್ರೈಮ್​ಗೆ ಸಿನಿಮಾ ಬಂದಿದ್ದು ಜೂನ್ 9 ರಿಂದ ಸಿನಿಮಾ ಸ್ಟ್ರೀಮ್ ಆಗಲಿದೆ. ತೆಲುಗು ತಮಿಳು, ಮಲಯಾಳಂ, ಕನ್ನಡ, ಹಿಂದಿ ಭಾಷೆಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ಜೊತೆಗೆ ಕೃತಿ ಶೆಟ್ಟಿ ನಟಿಸಿದ್ದಾರೆ. ಇನ್ನೂ ಹಲವು ಸಿನಿಮಾಗಳು ಹಾಗೂ ವೆಬ್ ಸರಣಿಗಳು ಈ ವಾರ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿವೆ. ಕಳೆದ ವಾರವೂ ಕೆಲವು ಒಳ್ಳೆಯ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಯಲ್ಲಿ ಬಿಡುಗಡೆ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ