AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ

OTT Release this week: ಐಪಿಎಲ್ ಮುಗಿದ ಬಳಿಕ ಚಿತ್ರಮಂದಿರಗಳಲ್ಲಿ ಸಾಲು-ಸಾಲಾಗಿ ಬಿಗ್ ಬಜೆಟ್ ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅಂತೆಯೇ ಒಟಿಟಿಗಳಲ್ಲಿಯೂ ಸಹ ಒಂದರ ಹಿಂದೊಂದು ಭರ್ಜರಿ ಸಿನಿಮಾಗಳು ತೆರೆಗೆ ಬರುತ್ತಿವೆ. ಪ್ರತಿ ವಾರದಂತೆ ಈ ವಾರವೂ ಸಹ ಕೆಲವು ಭರ್ಜರಿ ಸಿನಿಮಾಗಳು, ಚಿತ್ರಮಂದಿರದಲ್ಲಿ ಸೂಪರ್ ಹಿಟ್ ಆದ ಸಿನಿಮಾಗಳು ಒಟಿಟಿಗೆ ಬಂದಿದ್ದು, ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on:Jun 13, 2026 | 3:53 PM

Share
ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲಾ’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಪ್ರಿಯದರ್ಶನ್ ನಿರ್ದೇಶನದ ಈ ಸಿನಿಮಾಕ್ಕೆ ಭರ್ಜರಿ ಪ್ರಚಾರವನ್ನು ಸಹ ಮಾಡಲಾಗಿತ್ತು. ಅಕ್ಷಯ್, ಪರೇಶ್ ರಾವಲ್, ರಾಜ್​​ಪಾಲ್ ಯಾದವ್ ಸೇರಿದಂತೆ ಇತರರು ನಟಿಸಿರುವ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

1 / 6
ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಹೆಸರುವಾಸಿ ಆಗಿರುವ ಮಲಯಾಳಂ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಬಂದಿದೆ. ಶೇನ್ ನಿಗಮ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ‘ದೃಢಂ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ, ಕನ್ನಡ ಮತ್ತು ಇತರೆ ಭಾಷೆಗಳಲ್ಲಿ ನೋಡಬಹುದಾಗಿದೆ.

2 / 6
ಸೂರ್ಯ ಮತ್ತು ತ್ರಿಷಾ ಕೃಷ್ಣನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕರುಪ್ಪು’ ಇದೀಗ ಒಟಿಟಿಗೆ ಬರುತ್ತಿದೆ. ಸಿನಿಮಾ ಬಿಡುಗಡೆ ಆದ ಒಂದು ತಿಂಗಳಿಗೆ ಮುಂಚಿತವಾಗಿಯೇ ಸಿನಿಮಾ ಒಟಿಟಿಗೆ ಬಂದಿದೆ. ಈ ಸೂಪರ್ ಹಿಟ್ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು.

3 / 6
ಏಪ್ರಿಲ್ 24 ರಂದು ವಿಶ್ವದಾದ್ಯಂತ ಬಿಡುಗಡೆ ಆಗಿ ಭಾರಿ ದೊಡ್ಡ ಕಲೆಕ್ಷನ್ ಮಾಡಿರುವ ‘ಮೈಖಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೈಖಲ್ ಜಾಕ್ಸನ್ ಜೀವನ ಆಧರಿಸಿದ ಈ ಸಿನಿಮಾವನ್ನು ಅಮೆಜಾನ್ ಪ್ರೈಂ, ಆಪಲ್ ಟಿವಿ ಪ್ಲಸ್ ಮತ್ತು ಬಿಎಂಎಸ್ ಸ್ಟ್ರೀಮ್​​ಗಳಲ್ಲಿ ವೀಕ್ಷಿಸಬಹುದಾಗಿದೆ. ಆದರೆ ರೆಂಟ್ ಆಧಾರದಲ್ಲಿ ಮಾತ್ರವೇ ಸಿನಿಮಾ ಲಭ್ಯವಿದೆ.

4 / 6
ಫುಟ್​​ಬಾಲ್ ವಿಶ್ವಕಪ್ ಶುರುವಾಗಿದೆ. ಇದೇ ಸಮಯದಲ್ಲಿ ನಾರ್ವೆಯ ಫುಟ್​​ಬಾಲ್ ತಂಡದ ಕುರಿತಾಗಿ ಒಂದು ಡಾಕ್ಯುಮೆಂಟರಿ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ‘ನಾರ್ವೆ: ದಿ ಡಾರ್ಕ್ ಹಾರ್ಸ್’ ಅದರ ಹೆಸರು. ನಾರ್ವೆ ತಂಡವು 28 ವರ್ಷಗಳ ಬಳಿಕ ವಿಶ್ವಕಪ್ ಆಡಲು ಅರ್ಹತೆ ಗಿಟ್ಟಿಸಿಕೊಂಡಿದೆ. ಇದರ ಕುರಿತಾಗಿಯೇ ಈ ಎರಡು ಭಾಗಗಳ ಡಾಕ್ಯುಮೆಂಟರಿ ಬೆಳಕು ಚೆಲ್ಲಲಿದೆ

5 / 6
1970 ರಲ್ಲಿ ಸ್ಥಿತವಾಗಿರುವ ಕತೆಯನ್ನು ಒಳಗೊಂಡಿರುವ ಹಿಂದಿ ವೆಬ್ ಸರಣಿ ‘ರಾಖ್’ ಇದೀಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ಸರಣಿ ಕೊಲೆಗಳು ಅದರ ಹಿಂದಿರುವ ವ್ಯಕ್ತಿ, ಕಾರಣಗಳನ್ನು ಹುಡುಕಿಕೊಂಡು ಹೋಗುವ ಕತೆ ಇದಾಗಿದೆ. ಸೊನಾಲಿ ಬೇಂದ್ರೆ, ಅಲಿ ಫಜಲ್, ಆಮಿರ್ ಬಷೀರ್ ಅವರುಗಳು ಇದರಲ್ಲಿ ನಟಿಸಿದ್ದಾರೆ. ಕನ್ನಡದಲ್ಲೂ ಇದನ್ನು ನೋಡಬಹುದಾಗಿದೆ.

6 / 6

Published On - 3:33 pm, Sat, 13 June 26

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ

ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​

ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್

ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು

ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?