AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಸೆ* ವಿಡಿಯೋ ವೈರಲ್; ತಪ್ಪು ಮಾಡಿದ ಪತಿಯನ್ನು ವಹಿಸಿಕೊಂಡು ಬಂದ ಪತ್ನಿ

ಪಾಯಲ್ ಹೇಳೋ ಪ್ರಕಾರ ಈ ವಿಡಿಯೋನ ತಿರುಚಲಾಗಿದೆಯಂತೆ. ಈ ವಿಡಿಯೋನ ಎಡಿಟ್ ಮಾಡಲಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಆದರೆ, ವಿಡಿಯೋ ಮಾತ್ರ ಸಖತ್ ವೈರಲ್ ಆಗಿ ಸದ್ದು ಮಾಡುತ್ತಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.

ಬಿಗ್ ಬಾಸ್ ಮನೆಯ ಸೆ* ವಿಡಿಯೋ ವೈರಲ್; ತಪ್ಪು ಮಾಡಿದ ಪತಿಯನ್ನು ವಹಿಸಿಕೊಂಡು ಬಂದ ಪತ್ನಿ
ಅರ್ಮಾನ್-ಪಾಯಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 22, 2024 | 11:26 AM

Share

ಏಕಾ ಏಕಿ ‘ಬಿಗ್ ಬಾಸ್ ಹಿಂದಿ ಒಟಿಟಿ ಸೀಸನ್ 3’ ಬಗ್ಗೆ ಚರ್ಚೆಗಳು ಆರಂಭ ಆಗಿವೆ. ಇದಕ್ಕೆ ಕಾರಣ ಆಗಿರೋದು ಅರ್ಮಾನ್ ಮಲಿಕ್. ಅವರು ಇಬ್ಬರು ಪತ್ನಿಯರೊಂದಿಗೆ ಬಿಗ್ ಬಾಸ್​ಗೆ ಬಂದಿದ್ದರು. ಈ ಪೈಕಿ ಮೊದಲ ಪತ್ನಿ ಪಾಯಲ್ ಅವರು ಎಲಿಮಿನೇಟ್ ಆದರೆ, ಎರಡನೇ ಪತ್ನಿ ಕೃತಿಕಾ ಇನ್ನೂ ಬಿಗ್ ಬಾಸ್ ಮನೆಯಲ್ಲೇ ಇದ್ದಾರೆ. ಈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಅರ್ಮಾನ್ ಹಾಗೂ ಕೃತಿಕಾ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂಬ ರೀತಿಯ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಟೀಕೆ ಹೊರ ಹಾಕಿದ್ದಾರೆ. ಆದರೆ, ಪಾಯಲ್ ಅವರು ಈ ವಿಚಾರದಲ್ಲಿ ಪತಿಯನ್ನು ಬೆಂಬಲಿಸಿದ್ದಾರೆ.

ಪಾಯಲ್ ಹೇಳೋ ಪ್ರಕಾರ ಈ ವಿಡಿಯೋನ ತಿರುಚಲಾಗಿದೆಯಂತೆ. ಈ ವಿಡಿಯೋನ ಎಡಿಟ್ ಮಾಡಲಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಆದರೆ, ವಿಡಿಯೋ ಮಾತ್ರ ಸಖತ್ ವೈರಲ್ ಆಗಿ ಸದ್ದು ಮಾಡುತ್ತಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಬಗ್ಗೆ ವಾಹಿನಿಯವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಯಾರ್ಯಾರು ಆ ವಿಡಿಯೋ ಶೇರ್ ಮಾಡಿ ಇದು ಅರ್ಮಾನ್ ಹಾಗೂ ಕೃತಿಕಾ ಅವರದ್ದು ಎನ್ನುತ್ತಿದ್ದೀರೋ ಅವರ ಬಳಿ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಇದನ್ನು ಇಲ್ಲಿಯೇ ನಿಲ್ಲಿಸಿ. ಈ ವಿಡಿಯೋ ಎಡಿಟ್ ಮಾಡಲಾಗಿದೆ. ನಾನು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದವನು. ಆ ರೀತಿಯ ಲ್ಯಾಂಪ್ ಅಲ್ಲಿ ಇಲ್ಲ. ಬ್ಲ್ಯಾಂಕೆಟ್ ಕೂಡ ಭಿನ್ನವಾಗಿದೆ. ಮನೆಯಲ್ಲಿರುವ ಯಾರಿಗಾದರೂ ಇದು ಫೇಕ್ ಎಂದು ಗೊತ್ತಾಗುತ್ತದೆ’ ಎಂದಿದ್ದಾರೆ ಅವರು.

ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿತ್ತು. ಇದು ಬಿಗ್ ಬಾಸ್ ಮನೆಯ ಒಳಗಿನ ವಿಡಿಯೋ ಎಂದು ಹೇಳಲಾಗಿತ್ತು. ಈ ವಿಡಿಯೋದಲ್ಲಿ ಅರ್ಮಾನ್ ಹಾಗೂ ಕೃತಿಕಾ ಸಖತ್ ಇಂಟಿಮೇಟ್ ಆಗಿದ್ದರು. ಅವರು ಲೈಂಗಿಕ ಕ್ರಿಯೆ ನಡೆಸಿದ ರೀತಿಯಲ್ಲಿ ಈ ವಿಡಿಯೋ ಆಗಿತ್ತು. ಈ ವಿಡಿಯೋನ ಅನೇಕರು ಟೀಕಿಸಿದ್ದರು. ಬಿಗ್ ಬಾಸ್​ನಲ್ಲಿ ಈ ರೀತಿಯ ವಿಚಾರಗಳು ನಡೆಯೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಇತ್ತ ಬ್ಯಾಡ್ ಕಮೆಂಟ್​ಗಳನ್ನು ಎದುರಿಸುತ್ತಿರುವ ಪಾಯಲ್ ಅವರು ಅರ್ಮಾನ್ ಅವರಿಗೆ ವಿಚ್ಛೇದನ ಕೊಡೋದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಲೈವ್​ನಲ್ಲೇ ಸೆ*; ವೈರಲ್ ವಿಡಿಯೋ ನೋಡಿ ಎಲ್ಲರೂ ಶಾಕ್

ಪ್ರತಿ ಬಾರಿ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ವಿವಾದ ಎದುರಾಗುತ್ತಿದೆ. ಇತ್ತೀಚೆಗೆ ಪತಿ-ಪತ್ನಿಯರನ್ನು ಹೆಚ್ಚಾಗಿ ತರಲಾಗುತ್ತಿದೆ. ಕಳೆದ ಟಿವಿ ಸೀಸನ್​ನಲ್ಲಿ ಅಂಕಿತಾ ಜೈನ್ ಹಾಗೂ ವಿಕ್ಕಿ ಜೈನ್ ದಂಪತಿ ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:06 am, Mon, 22 July 24

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು