ಸಿನಿಮಾ ಬಿಡುಗಡೆಗೆ ಮುನ್ನವೇ ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ

ಪ್ರಭಾಸ್ ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಅದಕ್ಕೂ ಮುನ್ನವೇ ಅಮೆಜಾನ್ ಪ್ರೈಂಗೆ ಕಾಲಿಟ್ಟಿದೆ!

ಸಿನಿಮಾ ಬಿಡುಗಡೆಗೆ ಮುನ್ನವೇ ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ
Follow us
ಮಂಜುನಾಥ ಸಿ.
|

Updated on: May 30, 2024 | 5:11 PM

ಡಿಜಿಟಲ್ ಯುಗದಲ್ಲಿ ಸಿನಿಮಾ ನಿರ್ಮಾಪಕರಿಗೆ (Producer) ಗಳಿಕೆಯ ಹಲವು ಹಾದಿಗಳು ತೆರೆದುಕೊಂಡಿವೆ. ಡಿಜಿಟಲ್, ಒಟಿಟಿ, ಪೇ ಪರ್ ವ್ಯೂ, ಸ್ಯಾಟಲೈಟ್ ಹಲವು ಆಯ್ಕೆಗಳಿವೆ. ಇವುಗಳ ಜೊತೆಗೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಒಟಿಟಿಗೆ ನೀಡಿದ್ದು, ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ಕ್ಕೆ ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಸಿನಿಮಾದ ಕೆಲವು ಪೋಸ್ಟರ್, ಟೀಸರ್​ಗಳು ಈಗಾಗಲೇ ಬಿಡುಗಡೆ ಆಗಿ ಭಾರಿ ಜನಪ್ರಿಯತೆ ಗಳಿಸಿವೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿದೆ. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಪುಟ್ಟ ಯಂತ್ರವಿದೆ. ಈ ಇಬ್ಬರ ಸಂಭಾಷಣೆ, ಬಾಂಡಿಂಗ್, ಪರಸ್ಪರ ಕಾಲೆಳೆತಗಳು ಸಿನಿಮಾದ ಹೈಲೈಟ್ ಎನ್ನಲಾಗುತ್ತಿದೆ. ಇದೀಗ ಈ ಇಬ್ಬರ ಗೆಳೆತನವನ್ನೇ ಆಧಾರವಾಗಿಟ್ಟುಕೊಂಡು ರಚಿಸಲಾಗಿರುವ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಮೇ 31 ಕ್ಕೆ ಅಂದರೆ ನಾಳೆಗೆ ಬಿಡುಗಡೆ ಮಾಡಲಾಗುತ್ತಿದೆ. ಅನಿಮೇಟೆಡ್ ಸರಣಿಯ ಟೀಸರ್ ಅನ್ನು ಅಮೆಜಾನ್ ಪ್ರೈಂ ಹಂಚಿಕೊಂಡಿದೆ.

ಇದನ್ನೂ ಓದಿ:Kalki 2898 AD: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಈವೆಂಟ್; ಪ್ರಭಾಸ್ ಬರ್ತಾರಾ?

ಟ್ರೈಲರ್​ನಲ್ಲಿ ಬುಜ್ಜಿ ಹಾಗೂ ಭೈರವ ಅಪಾಯಕಾರಿ ಮಿಷನ್​ಗಳಲ್ಲಿ ಪಾಲ್ಗೊಂಡಿರುವ, ದುಷ್ಟರನ್ನು ತಮ್ಮ ಅತ್ಯಾಧುನಿಕ ವಾಹನ ಹಾಗೂ ಶಸ್ತ್ರಾಸ್ತ್ರಗಳನ್ನು ಬಳಸಿ ಪುಡಿಗಟ್ಟುತ್ತಿರುವ ದೃಶ್ಯಗಳಿವೆ. ಅನಿಮೇಷನ್ ಅನ್ನು ಸುಂದರವಾಗಿ ಮಾಡಿದ್ದು, ಪ್ರಭಾಸ್​ರ ಭೈರವನ ಪಾತ್ರವನ್ನು ಚೆನ್ನಾಗಿ ನಕಲು ಮಾಡಲಾಗಿದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. ಇನ್ನು ಬುಜ್ಜಿ ಪಾತ್ರಕ್ಕೆ ನಟಿ ಕೀರ್ತಿ ಸುರೇಶ್ ಧ್ವನಿ ನೀಡಿದ್ದಾರೆ. ಸಿನಿಮಾದಲ್ಲಿಯೂ ಸಹ ಬುಜ್ಜಿ ಪಾತ್ರಕ್ಕೆ ಕೀರ್ತಿ ಸುರೇಶ್ ಅವರೇ ಧ್ವನಿ ನೀಡಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಭವಿಷ್ಯದಲ್ಲಿ ನಡೆಯುವ ಕತೆಯನ್ನು ಹೊಂದಿದೆ. ಸಿನಿಮಾದ ಮೇಕಿಂಗ್ ಹಾಲಿವುಡ್ ಸಿನಿಮಾಗಳನ್ನು ನೆನಪಿಸುವಂತಿದೆ. ಸಿನಿಮಾವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಕತೆಯನ್ನು ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಹಾಗೂ ನಾಗ್ ಅಶ್ವಿನ್ ರಚಿಸಿದ್ದಾರೆ. ಸಿನಿಮಾನಲ್ಲಿ ದೊಡ್ಡ ತಾರಾಗಣವೇ ಇದೆ. ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಅವರುಗಳು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ