‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಫೈನಲ್? ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..

ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ‘ಸಲಾರ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಖರೀದಿಸಿದೆ. ನೆಟ್‌ಫ್ಲಿಕ್ಸ್‌ ಈ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ ‘ಸಲಾರ್’ ಚಿತ್ರವನ್ನು ಶೀಘ್ರದಲ್ಲೇ ಒಟಿಟಿಗೆ ತರಲಾಗುವುದು ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಫೈನಲ್? ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..
ಪ್ರಭಾಸ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jan 16, 2024 | 12:34 PM

ಪ್ಯಾನ್ ಇಂಡಿಯಾದ ಮಟ್ಟದಲ್ಲಿ ಪ್ರಭಾಸ್ (Prabhas Movie) ನಟನೆಯ ‘ಸಲಾರ್’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಬಿ ಸಿಂಹ, ಜಗಪತಿ ಬಾಬು, ಟಿನು ಆನಂದ್, ಶ್ರಿಯಾ ರೆಡ್ಡಿ ಮುಂತಾದವರು ವಿವಿಧ ಪಾತ್ರಗಳಲ್ಲಿ ಮಿಂಚಿದ್ದಾರೆ. ಡಿಸೆಂಬರ್ 22ರಂದು ಬಿಡುಗಡೆಯಾದ ‘ಸಲಾರ್’ ಬ್ಲಾಕ್ ಬಸ್ಟರ್ ಆಯಿತು. ಈಗ ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಸಲಾರ್’ ಸಿನಿಮಾದ ಮೊದಲ ದಿನದ ಅಬ್ಬರ ನೋಡಿದವರು ಈ ಚಿತ್ರ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಬಹುದು ಎಂದೇ ಭಾವಿಸಿದ್ದರು. ಆದರೆ, ಅಷ್ಟು ಗಳಿಕೆ ಆಗಿಲ್ಲ. ಈ ಚಿತ್ರದ ಒಟ್ಟಾರೆ ಗಳಿಕೆ 700 ಕೋಟಿ ರೂಪಾಯಿ ಆಗಿದೆ. ಬಹಳ ವರ್ಷಗಳ ನಂತರ ಪ್ರಭಾಸ್​​ಗೆ ‘ಸಲಾರ್’ ಚಿತ್ರದಿಂದ ದೊಡ್ಡ ಹಿಟ್ ಸಿಕ್ಕಂತೆ ಆಗಿದೆ. ಚಿತ್ರಮಂದಿರಗಳಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆದ ‘ಸಲಾರ್’ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾದವರು ಅನೇಕರಿದ್ದಾರೆ. ಈ ಕಾಯುವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ.

ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ‘ಸಲಾರ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ. ನೆಟ್‌ಫ್ಲಿಕ್ಸ್‌ ಈ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ ಎಂದು ವರದಿಯಾಗಿದೆ. ‘ಸಲಾರ್’ ಚಿತ್ರವನ್ನು ಶೀಘ್ರದಲ್ಲೇ ಒಟಿಟಿಗೆ ತರಲಾಗುವುದು ಎಂದು ನೆಟ್​ಫ್ಲಿಕ್ಸ್ ಹೇಳಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಪ್ರಭಾಸ್ ಸಿನಿಮಾ ಸ್ಟ್ರೀಮ್ ಆಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

‘ಸಲಾರ್’ ಸಿನಿಮಾದ ಮೊದಲ ಪಾರ್ಟ್​ಗೆ ‘ಸೀಸ್​ಫೈರ್​’ ಎಂದು ಹೆಸರು ಇಡಲಾಗಿದೆ. ‘ಖನ್ಸಾರ್​’ ಹೆಸರಿನ ಕಾಲ್ಪನಿಕ ಊರಲ್ಲಿ ಚಿತ್ರದ ಕಥೆ ಸಾಗುತ್ತದೆ. ‘ಸಲಾರ್’ ಶೀಘ್ರದಲ್ಲೇ ನೆಟ್‌ಫ್ಲಿಕ್ಸ್‌ನಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಸ್ಟ್ರೀಮ್ ಆಗಲಿದೆ ಎಂದು ನೆಟ್‌ಫ್ಲಿಕ್ಸ್ ತಿಳಿಸಿದೆ. ಸ್ಟ್ರೀಮಿಂಗ್ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಶೀಘ್ರದಲ್ಲೇ ರಿವೀಲ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ

‘ಕೆಜಿಎಫ್ 2’ ಸಿನಿಮಾಗೆ ಹೋಲಿಕೆ ಮಾಡಿದರೆ ‘ಸಲಾರ್’ ಸಿನಿಮಾ ಅಷ್ಟಾಗಿ ಅಬ್ಬರಿಸಿಲ್ಲ. ಪ್ರಶಾಂತ್ ನೀಲ್ ಅವರೇ ನಿರ್ದೇಶನ ಮಾಡಿದ್ದ ‘ಉಗ್ರಂ’ ಸಿನಿಮಾದಿಂದ ಕಥೆಯನ್ನು ಎರವಲು ಪಡೆದಿದ್ದು ‘ಸಲಾರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ಅನೇಕರಿಗೆ ‘ಕೆಜಿಎಫ್ 2’ ನೆನಪಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ‘ಸಲಾರ್’ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ಈಗ ಬಂದಿರೋದು ಮೊದಲ ಪಾರ್ಟ್ ಮಾತ್ರ. ಈ ಚಿತ್ರಕ್ಕೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದ್ದು, ಇದಕ್ಕೆ ‘ಶೌರ್ಯಂಗ ಪರ್ವಂ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಬಗ್ಗೆ ಯಾವುದೇ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿಲ್ಲ. ಕನ್ನಡದ ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ