AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್​ ಆಗಿ ಒಟಿಟಿಗೆ ಲಗ್ಗೆ ಇಟ್ಟ ‘ಪ್ರೇಮದ ಊರಲಿ’ ಸಿನಿಮಾ; ಎಲ್ಲಿ ವೀಕ್ಷಿಸಬಹುದು?

ಕೇವಲ 2-3 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ 130 ಕೋಟಿಗೂ ಅಧಿಕ ಗಳಿಕೆ ಕಂಡಿದ್ದ ಸೂಪರ್ ಹಿಟ್ ‘ಪ್ರೇಮದ ಊರಲಿ’ ಸಿನಿಮಾ ಇದೀಗ ಸೈಲೆಂಟ್ ಆಗಿ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಥಿಯೇಟರ್ ರನ್‌ಗೆ ತೊಂದರೆಯಾಗದಂತೆ ಸದ್ದಿಲ್ಲದೆ ಸ್ಟ್ರೀಮಿಂಗ್ ಆರಂಭಿಸಿರುವ ಈ ಚಿತ್ರವನ್ನು ಅಭಿಮಾನಿಗಳು ಈಗ ಮನೆಯಲ್ಲಿಯೇ ಕುಳಿತು ವೀಕ್ಷಿಸಬಹುದು.

ಸೈಲೆಂಟ್​ ಆಗಿ ಒಟಿಟಿಗೆ ಲಗ್ಗೆ ಇಟ್ಟ ‘ಪ್ರೇಮದ ಊರಲಿ’ ಸಿನಿಮಾ; ಎಲ್ಲಿ ವೀಕ್ಷಿಸಬಹುದು?
ಪ್ರೇಮದ ಊರಲಿ
ರಾಜೇಶ್ ದುಗ್ಗುಮನೆ
|

Updated on: Nov 17, 2026 | 10:34 AM

Share

ಮುಖ್ಯಾಂಶಗಳು

  • ಥಿಯೇಟರ್ ರನ್‌ಗೆ ಧಕ್ಕೆಯಾಗದಂತೆ ಸದ್ದಿಲ್ಲದೆ ಒಟಿಟಿಗೆ ಬಂದ ಸಿನಿಮಾ
  • 3 ಕೋಟಿ ಬಜೆಟ್, 130 ಕೋಟಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ
  • ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರಿಗೆ ಈಗ ಮನೆಯಲ್ಲಿಯೇ ನೋಡುವ ಚಾನ್ಸ್

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡು ಎಲ್ಲರ ಗಮನ ಸೆಳೆದಿದ್ದ ‘ಪ್ರೇಮದ ಊರಲಿ’ ಸಿನಿಮಾ ಇದೀಗ ಡಿಜಿಟಲ್ ವೇದಿಕೆಗೆ ಎಂಟ್ರಿ ಕೊಟ್ಟಿದೆ. ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಯಶಸ್ವಿ 50 ದಿನಗಳನ್ನು ಪೂರೈಸಿದ್ದ ಈ ಚಿತ್ರ, ಯಾವುದೇ ದೊಡ್ಡ ಮಟ್ಟದ ಪ್ರಚಾರವಿಲ್ಲದೆ ಸೈಲೆಂಟ್ ಆಗಿ ಒಟಿಟಿಗೆ ಲಗ್ಗೆ ಇಟ್ಟಿದೆ. ಸಿನಿಪ್ರಿಯರಿಗೆ ಇದೊಂದು ಭರ್ಜರಿ ಸಿಹಿಸುದ್ದಿಯಾಗಿದೆ.

ಸಾಮಾನ್ಯವಾಗಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹಿಟ್ ಆದ ಸಿನಿಮಾಗಳು ಒಟಿಟಿಗೆ ಬರುವಾಗ ಸಾಕಷ್ಟು ಸದ್ದು ಮಾಡುತ್ತವೆ. ಆದರೆ, ‘ಪ್ರೇಮದ ಊರಲಿ’ ಚಿತ್ರದ ವಿಚಾರದಲ್ಲಿ ಹಾಗಾಗಿಲ್ಲ. ಸದ್ಯ ಈ ಸಿನಿಮಾ ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಥಿಯೇಟರ್ ಕಲೆಕ್ಷನ್‌ಗೆ ಯಾವುದೇ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಚಿತ್ರತಂಡ ಈ ಸಿನಿಮಾವನ್ನು ಸದ್ದಿಲ್ಲದೆ ಒಟಿಟಿಗೆ ತಂದಿರುವ ಸಾಧ್ಯತೆಯಿದೆ.

ಬಾಕ್ಸ್ ಆಫೀಸ್ ಲೆಕ್ಕಾಚಾರದಲ್ಲೂ ಈ ಸಿನಿಮಾ ದೊಡ್ಡ ಮೈಲಿಗಲ್ಲು ಸ್ಥಾಪಿಸಿದೆ. ಕೇವಲ 2 ರಿಂದ 3 ಕೋಟಿ ರೂಪಾಯಿಗಳ ಸಣ್ಣ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ, ವಿಶ್ವದಾದ್ಯಂತ ಬರೋಬ್ಬರಿ 130 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಕಂಡು ಅಚ್ಚರಿ ಮೂಡಿಸಿದೆ. ಸಣ್ಣ ಬಜೆಟ್‌ನ ಚಿತ್ರವೊಂದು ಇಷ್ಟೊಂದು ದೊಡ್ಡ ಕಲೆಕ್ಷನ್ ಮಾಡಿರುವುದು ಚಿತ್ರರಂಗದಲ್ಲೇ ಹೊಸ ದಾಖಲೆಯಾಗಿದೆ. 50 ದಿನ ಕಳೆದರೂ ಸಿನಿಮಾ ಲಕ್ಷಗಳಲ್ಲಿ ಕಲೆಕ್ಷನ್ ಮಾಡುತ್ತಿದೆ.

ಇದನ್ನೂ ಓದಿ: ‘ಪ್ರೇಮದ ಊರಲಿ’ ನಟಿ ಆರಾಧ್ಯಾ ನಾಯರ್​​​ಗೆ ಮಲಯಾಳಂ ಸೀರಿಯಲ್ ಆಫರ್

ಥಿಯೇಟರ್‌ನಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರಿಗೆ ಈಗ ಒಟಿಟಿ ಮೂಲಕ ನೋಡುವ ಸುವರ್ಣಾವಕಾಶ ಸಿಕ್ಕಿದೆ. ಅಷ್ಟೇ ಅಲ್ಲದೆ, ಈಗಾಗಲೇ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಿ ಮೆಚ್ಚಿಕೊಂಡವರು ಕೂಡ ಮತ್ತೊಮ್ಮೆ ಕುಟುಂಬದವರ ಜೊತೆ ಕುಳಿತು ಎಂಜಾಯ್ ಮಾಡಬಹುದು.

ಎಲ್ಲಿ ವೀಕ್ಷಿಸಬಹುದು?

‘ಪ್ರೇಮದ ಊರಲಿ’ ಸಿನಿಮಾ ಸದ್ಯ ಜನಪ್ರಿಯ ಒಟಿಟಿ ಪ್ಲಾಟ್‌ಫಾರ್ಮ್‌ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಇಂದಿನಿಂದ (ನವೆಂಬರ್ 17) ಸಿನಿಮಾ ಪ್ರಸಾರ ಆರಂಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ