AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಹಾಟ್‌ಸ್ಟಾರ್‌ನಿಂದ ‘ಪ್ರೇಮಲು’ ಹಿಂದಿ ವರ್ಷನ್ ಡಿಲೀಟ್: ಕಾರಣ ಹೀಗಿದೆ

ಬ್ಲಾಕ್‌ಬಸ್ಟರ್ ಮಲೆಯಾಳಂ ಸಿನಿಮಾ 'ಪ್ರೇಮಲು' ಚಿತ್ರದ ಹಿಂದಿ ಆವೃತ್ತಿಯನ್ನು ಜಿಯೋಹಾಟ್‌ಸ್ಟಾರ್ ಒಟಿಟಿಯಿಂದ ತೆಗೆದುಹಾಕಲಾಗಿದೆ. ಈ ಚಿತ್ರದ ಹಿಂದಿ ರಿಮೇಕ್ 'ಪ್ರೇಮ್ ಕೀಟಾಣು' ಶೀಘ್ರದಲ್ಲೇ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದ್ದು, ಪ್ರೇಕ್ಷಕರ ಗಮನ ಸೆಳೆಯಲು ಹಾಗೂ ರಿಮೇಕ್ ಸಿನಿಮಾಗೆ ತೊಂದರೆಯಾಗದಂತೆ ತಡೆಯಲು ನಿರ್ಮಾಪಕರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಜಿಯೋ ಹಾಟ್‌ಸ್ಟಾರ್‌ನಿಂದ 'ಪ್ರೇಮಲು' ಹಿಂದಿ ವರ್ಷನ್ ಡಿಲೀಟ್: ಕಾರಣ ಹೀಗಿದೆ
ಪ್ರೇಮಲು
ರಾಜೇಶ್ ದುಗ್ಗುಮನೆ
|

Updated on: Aug 17, 2026 | 10:44 AM

Share

ಮುಖ್ಯಾಂಶಗಳು

  • ಒಟಿಟಿಯಿಂದ ಡಿಲೀಟ್ ಆಯ್ತು 'ಪ್ರೇಮಲು' ಹಿಂದಿ ಆವೃತ್ತಿ
  • 'ಪ್ರೇಮ್ ಕೀಟಾಣು' ಹೆಸರಿನಲ್ಲಿ ಬರ್ತಿದೆ ಹಿಂದಿ ರಿಮೇಕ್
  • ಅಕ್ಟೋಬರ್ 2 ಕ್ಕೆ ಥಿಯೇಟರ್‌ಗೆ ಬರಲಿದೆ ಹೊಸ ಸಿನಿಮಾ

ಮಲಯಾಳಂ ಚಿತ್ರರಂಗದ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ‘ಪ್ರೇಮಲು’ ಚಿತ್ರಕ್ಕೂ (Premalu Movie) ಜಾಗ ಇದೆ. ಹಾಸ್ಯ ಹಾಗೂ ಪ್ರೇಮಕಥೆ ಒಳಗೊಂಡಿದ್ದ ಈ ಸಿನಿಮಾ ಜಾಗತಿಕ ಮಟ್ಟದಲ್ಲಿ ಅಪಾರ ಜನಪ್ರಿಯತೆ ಗಳಿಸಿತ್ತು. ಈ ಚಿತ್ರವು ಪ್ರೇಕ್ಷಕರಿಂದ ಭಾರಿ ಮೆಚ್ಚುಗೆಯನ್ನು ಪಡೆದುಕೊಂಡಿತ್ತು. ಆದರೆ ಈಗ ಜಿಯೋಹಾಟ್‌ಸ್ಟಾರ್ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ ‘ಪ್ರೇಮಲು’ ಚಿತ್ರದ ಹಿಂದಿ ಆವೃತ್ತಿಯನ್ನು ತೆಗೆದುಹಾಕಲಾಗಿದೆ. ಈ ಪ್ರಮುಖ ನಿರ್ಧಾರದ ಹಿಂದೆ ಒಂದು ಆಸಕ್ತಿಕರ ಹಾಗೂ ವಿಶೇಷವಾದ ಕಾರಣ ಅಡಗಿದೆ.

‘ಪ್ರೇಮಲು’ ಸಿನಿಮಾ ಹಿಂದಿಗೆ ರಿಮೇಕ್ ಆಗಿದೆ. ಈ ಚಿತ್ರ ರಿಲೀಸ್​ಗೆ ರೆಡಿ ಆಗುತ್ತಿದೆ. ಈ ಹೊಸ ಚಿತ್ರಕ್ಕೆ ‘ಪ್ರೇಮ್ ಕೀಟಾಣು’ ಎಂದು ಹೆಸರಿಡಲಾಗಿದೆ. ಈ ಸಿನಿಮಾದಲ್ಲಿ ವೀರ್ ಪಹಾರಿಯಾ ಹಾಗೂ ಆಫಿಯಾ ಸಯ್ಯದ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಅಪೂರ್ವ ಸಿಂಗ್ ಕರ್ಕಿ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾ 2026 ರ ಅಕ್ಟೋಬರ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಹಿಂದಿ ರಿಮೇಕ್ ಚಿತ್ರವು ಬಿಡುಗಡೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒರಿಜಿನಲ್ ‘ಪ್ರೇಮಲು’ ಚಿತ್ರದ ಹಿಂದಿ ಡಬ್ ಆವೃತ್ತಿಯು ಒಟಿಟಿಯಲ್ಲಿ ಲಭ್ಯವಿದ್ದರೆ ರಿಮೇಕ್ ಸಿನಿಮಾದ ಗಳಿಕೆಯ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ನಿರ್ಮಾಪಕರು ಮೂಲ ಚಿತ್ರದ ಹಿಂದಿ ಆವೃತ್ತಿಯನ್ನು ಜಿಯೋಹಾಟ್‌ಸ್ಟಾರ್‌ನಿಂದ ತೆಗೆದುಹಾಕಿದ್ದಾರೆ.

‘ಪ್ರೇಮ್ ಕೀಟಾಣು’ ಸಿನಿಮಾದ ಪ್ರಚಾರ ಕಾರ್ಯಗಳು ಇಂದು ಅಧಿಕೃತವಾಗಿ ಆರಂಭವಾಗಲಿವೆ. ಈ ಚಿತ್ರವನ್ನು ಆವನಿಕಾ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರವ್ ವರ್ಮಾ ನಿರ್ಮಿಸುತ್ತಿದ್ದಾರೆ. ಫಾರ್ಸ್ ಫಿಲ್ಮ್ಸ್ ಹಾಗೂ ಭಾವನಾ ಸ್ಟುಡಿಯೋಸ್ ಸಂಸ್ಥೆಗಳು ಈ ಚಿತ್ರದ ನಿರ್ಮಾಣ ಮತ್ತು ಹಕ್ಕುಗಳ ಜವಾಬ್ದಾರಿಯನ್ನು ಹೊತ್ತುಕೊಂಡಿವೆ.

ಇದನ್ನೂ ಓದಿ: ‘ಪ್ರೇಮಲು’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಮಾಹಿತಿ ಕೊಟ್ಟ ನಿರ್ಮಾಪಕ ಫಹಾದ್ ಫಾಸಿಲ್

ದಕ್ಷಿಣ ಭಾರತದ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಹಿಂದಿಗೆ ರಿಮೇಕ್ ಮಾಡಲಾಗುತ್ತಿದೆ. ಇದರ ಪೈಕಿ ಬಹುತೇಕವು ಹಿಟ್ ಆಗಿದೆ. ಈಗ ‘ಪ್ರೇಮಲು’ ಸಿನಿಮಾ ಗೆಲುವು ಕಾಣುತ್ತದೆಯೇ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ