Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ರೌಪದಿ ಮುರ್ಮು

Updated on: Jul 19, 2023 | 12:36 PM

ನೆಟ್​ಫ್ಲಿಕ್ಸ್ (Netflix) ಮೂಲಕ ರಿಲೀಸ್ ಆದ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಎಲ್ಲರ ಗಮನ ಸೆಳೆದಿದೆ. ಈ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿತ್ತು. ಇದರಲ್ಲಿ ಮುಖ್ಯವಾಗಿ ಕಾಣಿಸಿಕೊಂಡವರು ಬೊಮ್ಮನ್ ಹಾಗೂ ಬೆಳ್ಳಿ. ಈಗ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸನ್ಮಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಈ ಸನ್ಮಾನ ನಡೆದಿದೆ. ಈ ಫೋಟೋಗಳನ್ನು ಸ್ವತಃ ದ್ರೌಪದಿ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಈ ವರ್ಷ ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್​ನಲ್ಲಿ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

‘ಆಸ್ಕರ್ ಪ್ರಶಸ್ತಿ ಪಡೆದ ದಿ ಎಲಿಫೆಮಂಟ್ ವಿಸ್ಪರರ್ಸ್​​ನಲ್ಲಿ ಮುಖ್ಯವಾಗಿ ಕಾಣಿಸಿಕೊಂಡ ಬೊಮ್ಮನ್ ಹಾಗೂ ಬೆಳ್ಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸನ್ಮಾನಿಸಿದರು. ಆನೆ ಮರಿಗಳನ್ನು ನೋಡಿಕೊಳ್ಳಲು ಜೀವನ ಮುಡಿಪಿಟ್ಟ ಅವರನ್ನು ಶ್ಲಾಘಿಸಲಾಯಿತು’ ಎಂದು ರಾಷ್ಟ್ರಪತಿ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ.

ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮನ್ ಹಾಗೂ ಬೆಳ್ಳಿ ಇದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್​ 9ರಂದು ಭೇಟಿ ನೀಡಿದ್ದರು. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್​ ದಂಪತಿ ಜೊತೆ ಮಾತುಕತೆ ನಡೆಸಿದ್ದರು. ಈ ಫೋಟೋ ವೈರಲ್ ಆಗಿತ್ತು. ಇದಲ್ಲದೆ, ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿದ್ದರು.

ಇದನ್ನೂ ಓದಿ: IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

ಬೊಮ್ಮನ್ ಹಾಗೂ ಬೆಳ್ಳಿ ಅವರ ಜೀವನ ಅನೇಕರಿಗೆ ಮಾದರಿ. ಅವರನ್ನು ಅನೇಕರು ಶ್ಲಾಘಿಸಿದ್ದಾರೆ. ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 12:13 pm, Wed, 19 July 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us