AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’: ಇದು ‘ಮ್ಯಾನ್​ ಆಫ್​ ದಿ ಮ್ಯಾಚ್’​ ಪ್ರಶ್ನೆ

Man of The Match: ‘ಮ್ಯಾನ್​ ಆಫ್​ ದಿ ಮ್ಯಾಚ್​’ ಸಿನಿಮಾದ ಕಥೆ ಡಿಫರೆಂಟ್​ ಆಗಿದೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಒಂದು ಆಡಿಷನ್​ ಸಂಗತಿಯನ್ನೇ ಇಟ್ಟುಕೊಂಡು ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಸಿನಿಮಾ ಮಾಡಿದ್ದಾರೆ.

‘ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’: ಇದು ‘ಮ್ಯಾನ್​ ಆಫ್​ ದಿ ಮ್ಯಾಚ್’​ ಪ್ರಶ್ನೆ
ನಟರಾಜ್
TV9 Web
| Edited By: |

Updated on: May 02, 2022 | 1:52 PM

Share

ಕನ್ನಡ ಸಿನಿಮಾಗಳು ಒಟಿಟಿ ಪ್ಲಾಟ್​ಫಾರ್ಮ್​ನಲ್ಲೂ ಶೈನ್​ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಪ್ರೊಡಕ್ಷನ್ಸ್​’ (PRK Productions) ಮೂಲಕ ಹೊರಬಂದ ಹಲವು ಚಿತ್ರಗಳು ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ ಆಗಿವೆ. ಆ ಸಾಲಿಗೆ ಈಗ ಇನ್ನೊಂದು ಚಿತ್ರ ಸೇರ್ಪಡೆ ಆಗುತ್ತಿದೆ. ಡಿ. ಸತ್ಯ ಪ್ರಕಾಶ್​ ಅವರು ನಿರ್ದೇಶನ ಮಾಡಿರುವ ‘ಮ್ಯಾನ್​ ಆಫ್ ದಿ ಮ್ಯಾಚ್​’ (Man of The Match) ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇದೆ. ಟೈಟಲ್​ ಮೂಲಕವೇ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಶೂಟಿಂಗ್​ ನಡೆಯುವಾಗ ಪುನೀತ್​ ರಾಜ್​ಕುಮಾರ್​ ಅವರು ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡವನ್ನು ಹುರಿದುಂಬಿಸಿದ್ದರು. ‘ಮ್ಯಾನ್​ ಆಫ್​ ದಿ ಮ್ಯಾನ್​’ ಚಿತ್ರಕ್ಕೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ನಿರ್ಮಾಪಕಿ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 5ರಂದು ‘ಅಮೇಜಾನ್​ ಪ್ರೈಂ ವಿಡಿಯೋ’ (Amazon Prime Video) ಮೂಲಕ ‘ಮ್ಯಾನ್​ ಆಫ್​ ದಿ ಮ್ಯಾನ್​’ ಪ್ರಸಾರ ಆಗಲಿದೆ. ಇಂದು (ಮೇ 2) ಟ್ರೇಲರ್​ ಬಿಡುಗಡೆ ಆಗಿದ್ದು, ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಚಿತ್ರತಂಡ ಯಶಸ್ವಿ ಆಗಿದೆ.

ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಕನ್ನಡ ಚಿತ್ರರಂಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದ ‘ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’ ಸಿನಿಮಾಗಳು ಜನಮನ ಗೆದ್ದಿವೆ. ಈಗ ಅವರ ತಂಡದಿಂದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾ ಹೇಗಿದೆ ಎಂಬುದರ ಝಲಕ್​ ತೋರಿಸಲು ಟ್ರೇಲರ್​ ಬಿಡುಗಡೆ ಆಗಿದೆ.

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ನಟರಾಜ್​, ಧರ್ಮಣ್ಣ ಮುಂತಾದ ಕಲಾವಿದರು ಖ್ಯಾತಿ ಪಡೆದರು. ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲೂ ಅವರು ಗಮನಾರ್ಹ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಸಿನಿಮಾದ ಕಥೆಯೇ ಸಖತ್​ ಡಿಫರೆಂಟ್​ ಆಗಿದೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಒಂದು ಆಡಿಷನ್​ ಸಂಗತಿಯನ್ನೇ ಇಟ್ಟುಕೊಂಡು ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಸಿನಿಮಾ ಮಾಡಿದಂತಿದೆ. ಈ ಟ್ರೇಲರ್​ನಲ್ಲಿ ಬರುವ ಒಂದು ಡೈಲಾಗ್​ ಹೆಚ್ಚು ಗಮನ ಸೆಳೆಯುತ್ತಿದೆ. ‘ಸಿನಿಮಾ ಮಾಡಿ ಪ್ರೊಡ್ಯೂಸರ್​ ಲಾಸ್​ ಆದ ಅಂದ್ರೆ ಓಕೆ ಗುರು. ಆದ್ರೆ ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’ ಎಂದು ಧರ್ಮಣ್ಣ ಹೊಡೆಯುವ ಡೈಲಾಗ್​ ಪ್ರೇಕ್ಷಕರನ್ನು ನಕ್ಕು ನಲಿಸುತ್ತಿದೆ. ವಾಸುಕಿ ವೈಭವ್​, ವೀಣಾ ಸುಂದರ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅನೇಕ ಹೊಸ ಕಲಾವಿದರು ಇದರಲ್ಲಿ ಬಣ್ಣ ಹಚ್ಚಿದ್ದಾರೆ.

(‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದ ಟ್ರೇಲರ್​)

‘ಮ್ಯಾನ್​ ಆಫ್ ದಿ ಮ್ಯಾಚ್​’ ಚಿತ್ರದ ಟ್ರೇಲರ್​ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಇದು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ‘ರಾಮಾ ರಾಮಾ ರೇ’ ಸಿನಿಮಾಗೆ ರಾಜ್ಯ ಪ್ರಶಸ್ತಿ ಹಾಗೂ ‘ಒಂದಲ್ಲಾ ಎರಡಲ್ಲಾ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದು ನಿರ್ದೇಶಕ ಸತ್ಯ ಪ್ರಕಾಶ್​ ಅವರ ಹೆಗ್ಗಳಿಕೆ. ಹಾಗಾಗಿ ಅವರು ಮಾಡುವ ಎಲ್ಲ ಸಿನಿಮಾಗಳ ಮೇಲೆ ಸಹಜವಾಗಿಯೇ ನಿರೀಕ್ಷೆ ಇರುತ್ತದೆ. ಮೇ 5ರಂದು ‘ಮ್ಯಾನ್​ ಆಫ್​ ದಿ ಮ್ಯಾಚ್​’ ನೋಡಲು ಪ್ರೇಕ್ಷಕರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

1ನೇ ಸೀಸನ್​ಗೆ 40 ಲಕ್ಷ ರೂ, 2ನೇ ಸೀಸನ್​ಗೆ 20 ಕೋಟಿ ರೂ. ಸಂಬಳ ಪಡೆದ ‘ಪಾತಾಳ್​ ಲೋಕ್​’ ನಟ

ಅಮೇಜಾನ್​ ಪ್ರೈಮ್​ನಿಂದ ಬಂಪರ್​ ಆಫರ್​; ಈ ಸಿನಿಮಾಗಳು ಉಚಿತ ವೀಕ್ಷಣೆಗೆ ಲಭ್ಯ

Follow Us
TV9 Web
TV9 Web

TV9 Kannada

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?