Pushpa 2: ‘ಪುಷ್ಪ 2’ ಒಟಿಟಿ ರಿಲೀಸ್ ದಿನಾಂಕ ರಿವೀಲ್? ಇಲ್ಲಿದೆ ಮಾಹಿತಿ
Pushpa 2: ಪುಷ್ಪ 2: ದಿ ರೂಲ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸು ಕಾಣುತ್ತಿದೆ. 1300 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರದ ಒಟಿಟಿ ಬಿಡುಗಡೆ ಜನವರಿ 9, 2024 ರಂದು ನೆಟ್‌ಫ್ಲಿಕ್ಸ್‌ನಲ್ಲಿ ವಿವಿಧ ಭಾಷೆಗಳಲ್ಲಿ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಇದುವರೆಗೆ ಅಧಿಕೃತ ಘೋಷಣೆ ಆಗಿಲ್ಲ. ಪುಷ್ಪ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿದ್ದರೆ, ಪುಷ್ಪ 2 ನೆಟ್‌ಫ್ಲಿಕ್ಸ್‌ಗೆ ಮಾರಾಟವಾಗಿದೆ ಎಂಬುದು ವಿಶೇಷ.
‘ಪುಷ್ಪ 2: ದಿ ರೂಲ್’ ಥಿಯೇಟರ್ನಲ್ಲಿ ಅಬ್ಬರಿಸುತ್ತಿದೆ. ನಟ ಅಲ್ಲು ಅರ್ಜುನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2′ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಇದುವರೆಗೆ ವಿಶ್ವದಾದ್ಯಂತ 1,300 ಕೋಟಿ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 10 ದಿನ ಕಳೆದರೂ ಥಿಯೇಟರ್‌ಗಳಲ್ಲಿ ಅಭಿಮಾನಿಗಳ ದಂಡು ದಂಡಾಗಿ ಬರುತ್ತಿದ್ದಾರೆ. ಈ ಚಿತ್ರ ತೆಲುಗಿಗಿಂತ ಹಿಂದಿಯಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ.
ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡ ನಂತರ ‘ಪುಷ್ಪ 2’ ಚಿತ್ರ OTT ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ. ಈ ನಿಟ್ಟಿನಲ್ಲಿ ಪ್ರಮುಖ ಅಪ್ಡೇಟ್ ಕೂಡ ಹೊರಬಿದ್ದಿದೆ. ‘ಪುಷ್ಪ 2′ ಚಿತ್ರ ಮುಂದಿನ ವರ್ಷ ಅಂದರೆ ಜನವರಿ 9ರಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಹೊರಬೀಳುತ್ತಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರವು ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂಬ ವರದಿಗಳಿವೆ. ಆದರೆ ನಿರ್ಮಾಪಕರಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಒಂದು ಸಿನಿಮಾ ದೊಡ್ಡ ಪರದೆಯಲ್ಲಿ ಬಿಡುಗಡೆಯ ನಂತರ ಸುಮಾರು 40 ರಿಂದ 50 ದಿನಗಳಲ್ಲಿ OTT ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗುತ್ತದೆ. ಕೆಲವೊಮ್ಮೆ ಒಂದೇ ತಿಂಗಳಿಗೆ ಒಟಿಟಿಯಲ್ಲಿ ಬಿಡುಗಡೆ ಆದ ಉದಾಹರಣೆಯೂ ಇದೆ. ಈಗ ‘ಪುಷ್ಪ 2’ ಚಿತ್ರ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇದರಿಂದ ಅಭಿಮಾನಿಗಳು ಮನೆಯಲ್ಲೇ ಕುಳಿತು ಸಿನಿಮಾ ನೋಡಿ ಆನಂದಿಸಬಹುದು.
ಇದನ್ನೂ ಓದಿ:ಅಭಿಮಾನಿಗಳ ಈ ಒಂದು ಮನವಿಗೆ ನೋ ಹೇಳುವುದೇ ಇಲ್ಲ ರಶ್ಮಿಕಾ ಮಂದಣ್ಣ
‘ಪುಷ್ಪ 2: ದಿ ರೂಲ್’ ಚಿತ್ರದ ಬಗ್ಗೆ, ಕಲಾವಿದರ ಬಗ್ಗೆ, ಚಿತ್ರದ ಕಥೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಪುಷ್ಪ 2′ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಸುನೀಲ್, ರಾವ್ ರಮೇಶ್, ಜಗಪತಿ ಬಾಬು, ಡಾಲಿ ಧನಂಜಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇಲ್ಲೊಂದು ಅಚ್ಚರಿಯ ಸಂಗತಿ ಇದೆ. ಈ ಮೊದಲು ‘ಪುಷ್ಪ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿತ್ತು. ಆದರೆ, ‘ಪುಷ್ಪ 2’ ಚಿತ್ರವನ್ನು ನೆಟ್ಫ್ಲಿಕ್ಸ್ನವರು ದೊಡ್ಡ ಮೊತ್ತ ನೀಡಿ ಖರೀದಿ ಮಾಡಿದ್ದಾರೆ. ಈ ಕಾರಣದಿಂದಲೇ ಬೇರೆಯದೇ ಒಟಿಟಿ ಪ್ಲಾಟ್ಫಾರ್ಮ್ಗೆ ಈ ಸಿನಿಮಾ ಮಾರಾಟ ಆಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ನೆಟ್ಫ್ಲಿಕ್ಸ್ ಈ ಬಗ್ಗೆ ಸಂಭ್ರಮಿಸುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:52 pm, Tue, 17 December 24