ಅಜಯ್ ದೇವಗನ್ ನಟನೆಯ ‘ರೇಡ್ 2’ ಒಟಿಟಿಗೆ ಯಾವಾಗ? ಮೊದಲ ದಿನದ ಕಲೆಕ್ಷನ್ ಎಷ್ಟು?
ಮೇ 1 ರಂದು ಬಿಡುಗಡೆಯಾದ ಅಜಯ್ ದೇವಗನ್ ನಟನೆಯ ರೇಡ್ 2 ಚಿತ್ರವು ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಮೊದಲ ದಿನ 18 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಚಿತ್ರದ ಒಟಿಟಿ ಬಿಡುಗಡೆ ಜೂನ್ ಅಂತ್ಯ ಅಥವಾ ಜುಲೈ ಆರಂಭದಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ನಿರೀಕ್ಷಿಸಲಾಗಿದೆ. ಚಿತ್ರದಲ್ಲಿ ಅಜಯ್ ದೇವಗನ್, ರಿತೇಶ್ ದೇಶ್ಮುಖ್ ಮತ್ತು ವಾಣಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅಜಯ್ ದೇವಗನ್ (Ajay Devgn), ರಿತೇಶ್ ದೇಶ್ಮುಖ್ ಮತ್ತು ವಾಣಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ರೇಡ್ 2′ (Raid 2 Movie) ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಇದು 2018 ರಲ್ಲಿ ಬಿಡುಗಡೆಯಾದ ‘ರೇಡ್’ ಚಿತ್ರದ ಮುಂದುವರಿದ ಭಾಗವಾಗಿದೆ. ಈ ಚಿತ್ರದ OTT ಬಿಡುಗಡೆಯ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ಅಜಯ್ ದೇವಗನ್ ಅವರು ಐಟಿ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಭ್ರಷ್ಟ ಅಧಿಕಾರಿಗಳು ಯಾವ ರೀತಿಯಲ್ಲಿ ಆಸ್ತಿ ಸಂಪಾದನೆ ಮಾಡುತ್ತಾನೆ ಎಂಬುದು ಚಿತ್ರದ ಕಥೆ.
‘ಇ ಟೈಮ್ಸ್’ ವರದಿಯ ಪ್ರಕಾರ, ‘ರೈಡ್ 2′ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ಜೊತೆಗೆ ಡಿಜಿಟಲ್ ಬಿಡುಗಡೆ ಒಪ್ಪಂದಕ್ಕೆ ಸಹಿ ಹಾಕಿದೆ. ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಪ್ರದರ್ಶನದ ನಂತರ, ಚಿತ್ರವು ವೀಕ್ಷಕರಿಗೆ ಆನ್‌ಲೈನ್‌ನಲ್ಲಿ ವೀಕ್ಷಿಸಲು ಲಭ್ಯವಿರುತ್ತದೆ. ಆದ್ದರಿಂದ, ಈ ಚಿತ್ರ ಜೂನ್ ಅಂತ್ಯ ಅಥವಾ ಜುಲೈ ಆರಂಭದಲ್ಲಿ OTT ನಲ್ಲಿ ಬಿಡುಗಡೆಯಾಗಬಹುದು. ಸಾಮಾನ್ಯವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ನಂತರ ಚಿತ್ರಕ್ಕೆ 60 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ನಂತರ ಚಿತ್ರ OTT ಯಲ್ಲಿ ಬಿಡುಗಡೆಯಾಗುತ್ತದೆ.
‘ರೇಡ್ 2’ ಚಿತ್ರದಲ್ಲಿ ಅಜಯ್ ದೇವಗನ್ ಆದಾಯ ತೆರಿಗೆ ಇಲಾಖೆ ಅಧಿಕಾರಿ ಅಮಯ್ ಪಟ್ನಾಯಕ್ ಪಾತ್ರದಲ್ಲಿ ನಟಿಸಿದ್ದಾರೆ. ರಿತೇಶ್ ದೇಶಮುಖ್ ಭ್ರಷ್ಟ ರಾಜಕಾರಣಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅಜಯ್ ಪತ್ನಿಯ ಪಾತ್ರವನ್ನು ವಾಣಿ ಕಪೂರ್ ನಿರ್ವಹಿಸಿದ್ದಾರೆ. ಈ ಚಿತ್ರವನ್ನು ರಾಜ್ ಕುಮಾರ್ ಗುಪ್ತಾ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: ತಮನ್ನಾ ಹಾಟ್ ಅವತಾರಕ್ಕೆ ಬದಲಾಯ್ತು ‘ರೇಡ್ 2’ ಸೆನ್ಸಾರ್ ಪ್ರಮಾಣಪತ್ರ?
‘ರೇಡ್ 2′ ಚಿತ್ರದ ಮುಂಗಡ ಬುಕಿಂಗ್ ಚೆನ್ನಾಗಿದೆ. ಚಿತ್ರ ನೋಡಿದವರು ಸಾಮಾಜಿಕ ಜಾಲತಾಣಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಆದ್ದರಿಂದ, ಚಿತ್ರಮಂದಿರಗಳಲ್ಲಿ ಚಿತ್ರವು ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಈ ಸಿನಿಮಾ ಮೊದಲ ದಿನ (ಮೇ 1) 18 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಚಿತ್ರಕ್ಕೆ ಒಳ್ಳೆಯ ಟಾಕ್ ಸಿಕ್ಕರೆ ಮತ್ತಷ್ಟು ಗಳಿಕೆ ಆಗುವ ಸಾಧ್ಯತೆ ಇದೆ. ಈ ಸಿನಿಮಾ ಬುಕ್ ಮೈ ಶೋನಲ್ಲಿ 8.5 ರೇಟಿಂಗ್ ಪಡೆದುಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.