ಜೀ5 ಒಟಿಟಿಗೆ ‘ಗರುಡ ಗಮನ ವೃಷಭ ವಾಹನ’; ಕನ್ನಡ ಚಿತ್ರಗಳಿಗೆ ಹೆಚ್ಚುತ್ತಿದೆ ಆನ್​ಲೈನ್​ ಮನ್ನಣೆ

Garuda Gamana Vrishabha Vahana on ZEE5: ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಶೀಘ್ರದಲ್ಲೇ ಈ ಸಿನಿಮಾ ಜೀ5 ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಲಿದೆ.

ಜೀ5 ಒಟಿಟಿಗೆ ‘ಗರುಡ ಗಮನ ವೃಷಭ ವಾಹನ’; ಕನ್ನಡ ಚಿತ್ರಗಳಿಗೆ ಹೆಚ್ಚುತ್ತಿದೆ ಆನ್​ಲೈನ್​ ಮನ್ನಣೆ
ಗರುಡ ಗಮನ ವೃಷಭ ವಾಹನ
Follow us
TV9 Web
| Updated By: ಮದನ್​ ಕುಮಾರ್​

Updated on: Dec 26, 2021 | 3:55 PM

ದಿನದಿಂದ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ (OTT platform) ಪ್ರಾಬಲ್ಯ ಹೆಚ್ಚುತ್ತಿದೆ. ಇಂಥ ಕಾಲಘಟ್ಟದಲ್ಲಿ ಕನ್ನಡ ಸಿನಿಮಾಗಳು ಕೂಡ ಒಟಿಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಿವೆ. ಜೀ5 ಆ್ಯಪ್​ನಲ್ಲಿ (ZEE5) ಕನ್ನಡ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ಕೆಲವೇ ದಿನಗಳ ಹಿಂದೆ ರವಿಚಂದ್ರನ್​ ನಟನೆಯ ‘ಕನ್ನಡಿಗ’ ಸಿನಿಮಾ ನೇರವಾಗಿ ಜೀ5ನಲ್ಲಿ ಬಿಡುಗಡೆ ಆಯಿತು. ಈಗಾಗಲೇ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಜನಮೆಚ್ಚುಗೆ ಗಳಿಸಿದ ಸಿನಿಮಾಗಳು ಕೂಡ ಒಟಿಟಿಯಲ್ಲಿ ಲಭ್ಯವಾಗುತ್ತಿವೆ. ಕೆಲವೇ ದಿನಗಳ ಹಿಂದೆ ಜೀ5ನಲ್ಲಿ ‘ಭಜರಂಗಿ 2’ ಸಿನಿಮಾ ಪ್ರಸಾರ ಆರಂಭಿಸಿತ್ತು. ಈಗ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಕೂಡ ಜೀ5 ಪಾಲಾಗಿದೆ. ಶೀಘ್ರವೇ ಈ ಚಿತ್ರ ಆನ್​ಲೈನ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ ಬಣ್ಣ ಹಚ್ಚಿದ್ದಾರೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ವಿಮರ್ಶೆ ದೃಷ್ಟಿಯಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಕೂಡ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ. ಇಷ್ಟೆಲ್ಲ ಸೌಂಡು ಮಾಡಿದ ಈ ಸಿನಿಮಾ ಈಗ ಜೀ5ನಲ್ಲಿ ಲಭ್ಯವಾಗಲಿರುವುದು ಒಟಿಟಿ ಪ್ರೇಕ್ಷಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ:

ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; ‘ಗರುಡ ಗಮನ..’ ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ

GGVV Review: ಹೀಗೂ ಇರಬಹುದಾ ಕ್ರೈಮ್​ ಲೋಕ? ಇದು ರಾಜ್​ ಬಿ. ಶೆಟ್ಟಿ ಇನ್ನೊಂದು ಮುಖ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ