AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಲಗ್ಗೆ ಇಟ್ಟ ರಿತೇಶ್ ದೇಶ್‌ಮುಖ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ರಾಜಾ ಶಿವಾಜಿ’

ಅಂದಾಜು 75 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾದ ‘ರಾಜಾ ಶಿವಾಜಿ’ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 117 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈಗ ಒಟಿಟಿ ಅಂಗಳಕ್ಕೆ ಕಾಲಿಡಲು ಸಜ್ಜಾಗಿದೆ. ರಿತೇಶ್ ದೇಶ್‌ಮುಖ್ ಅವರು ಈ ಸಿನಿಮಾದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ.

ಒಟಿಟಿಗೆ ಲಗ್ಗೆ ಇಟ್ಟ ರಿತೇಶ್ ದೇಶ್‌ಮುಖ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ರಾಜಾ ಶಿವಾಜಿ’
Riteish Deshmukh
ಮದನ್​ ಕುಮಾರ್​
|

Updated on: Jun 26, 2026 | 5:54 PM

Share

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡ ನಂತರ, ರಿತೇಶ್ ದೇಶ್‌ಮುಖ್ (Riteish Deshmukh) ನಟನೆಯ ಐತಿಹಾಸಿಕ ಕಥಾಹಂದರ ಆ್ಯಕ್ಷನ್ ಡ್ರಾಮಾ ಚಿತ್ರ ‘ರಾಜಾ ಶಿವಾಜಿ’ (Raja Shivaji) ಕೊನೆಗೂ ಡಿಜಿಟಲ್ ಜಗತ್ತಿಗೆ ಪಾದಾರ್ಪಣೆ ಮಾಡಿದೆ. ಛತ್ರಪತಿ ಶಿವಾಜಿ ಮಹಾರಾಜರ ಜೀವನ ಮತ್ತು ಅವರ ಭವ್ಯ ಇತಿಹಾಸವನ್ನು ಬಿಂಬಿಸುವ ಈ ಚಿತ್ರವನ್ನು ಈಗ ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಈ ಚಿತ್ರವನ್ನು ಯಾವ ಒಟಿಟಿಯಲ್ಲಿ (OTT) ನೋಡಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಶುಕ್ರವಾರ (ಜೂನ್ 26) ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ಬಿಡುಗಡೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ನೆಟ್‌ಫ್ಲಿಕ್ಸ್, ‘ಬಂಡಾಯ ಏಳಲು ಬರುತ್ತಿದ್ದಾರೆ ರಾಜೇ… ರಾಜಾ ಶಿವಾಜಿ ಚಿತ್ರವನ್ನು ಈಗ ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ವೀಕ್ಷಿಸಿ’ ಎಂದು ಬರೆದುಕೊಂಡಿದೆ. ಪ್ರಸ್ತುತ ಈ ಸಿನಿಮಾ ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ಮಾತ್ರ ವೀಕ್ಷಣೆಗೆ ಲಭ್ಯವಿದೆ.

ಸ್ವತಃ ರಿತೇಶ್ ದೇಶ್‌ಮುಖ್ ಅವರೇ ನಿರ್ದೇಶಿಸಿರುವ ಈ ಚಿತ್ರವನ್ನು ‘ಮುಂಬೈ ಫಿಲ್ಮ್ ಕಂಪನಿ’ ಮತ್ತು ‘ಜಿಯೋ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಜೆನಿಲಿಯಾ ದೇಶ್‌ಮುಖ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರಿತೇಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಇವರೊಂದಿಗೆ ಸಂಜಯ್ ದತ್, ಅಭಿಷೇಕ್ ಬಚ್ಚನ್, ಮಹೇಶ್ ಮಂಜ್ರೇಕರ್, ಸಚಿನ್ ಖೇಡೇಕರ್, ಭಾಗ್ಯಶ್ರೀ, ಫರ್ದೀನ್ ಖಾನ್, ಜಿತೇಂದ್ರ ಜೋಶಿ, ಅಮೋಲ್ ಗುಪ್ತೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸುಮಾರು 75 ಕೋಟಿ ರೂ. ಬಜೆಟ್‌ನಲ್ಲಿ ಸಿದ್ಧವಾದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 117 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಭರ್ಜರಿ ಗಳಿಕೆಯೊಂದಿಗೆ ‘ರಾಜಾ ಶಿವಾಜಿ’ ಚಿತ್ರವು ‘ಸೈರಾಟ್’ ಸಿನಿಮಾದ ಲೈಫ್​ ಟೈಮ್ ಕಲೆಕ್ಷನ್ (110 ಕೋಟಿ ರೂಪಾಯಿ) ದಾಖಲೆಯನ್ನು ಮುರಿದು, ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಮರಾಠಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿದೇಶಗಳಲ್ಲಿ ಬಿಡುಗಡೆಯಾಗದಿದ್ದರೂ ಈ ಮಟ್ಟದ ಯಶಸ್ಸು ಗಳಿಸಿರುವುದು ಚಿತ್ರರಂಗವನ್ನು ಬೆರಗುಗೊಳಿಸಿದೆ.

ಇದನ್ನೂ ಓದಿ: ಶಿವಾಜಿ ಚಿತ್ರವಿರುವ ಟಿ-ಶರ್ಟ್ ಧರಿಸಿ ರಿತೇಶ್ ದೇಶ್‌ಮುಖ್ ಪಾರ್ಟಿ; ಕ್ಷಮೆ ಕೇಳಿದ ನಟ

ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ರಿತೇಶ್ ದೇಶ್‌ಮುಖ್, ‘ಚಿತ್ರವು ಪ್ರೇಕ್ಷಕರೊಂದಿಗೆ ಭಾವನಾತ್ಮಕವಾಗಿ ಕನೆಕ್ಟ್ ಆಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಜನರು ತಮ್ಮ ಇಡೀ ಕುಟುಂಬ, ಅಜ್ಜ-ಅಜ್ಜಿಯಂದಿರನ್ನು ಚಿತ್ರಮಂದಿರಕ್ಕೆ ಕರೆತರುತ್ತಿದ್ದಾರೆ. ಅನೇಕರು ತಮ್ಮ ಪುಟ್ಟ ಮಕ್ಕಳ ಮೊದಲ ಸಿನಿಮಾ ‘ರಾಜಾ ಶಿವಾಜಿ’ ಆಗಿರಬೇಕು ಎಂದು ಬಯಸುತ್ತಿದ್ದಾರೆ. ಚಿತ್ರಮಂದಿರದಿಂದ ಹೊರಬಂದ ನಂತರ ಪ್ರತಿಯೊಬ್ಬರೂ ಭಾವುಕರಾಗಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ