AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ ಆಗಿವೆ ಎಂದು ಹೇಳಲಾಗುತ್ತಿದೆ.

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?
Rajinikanth
ಮದನ್​ ಕುಮಾರ್​
|

Updated on: Apr 19, 2026 | 2:14 PM

Share

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ.

ವರದಿಗಳ ಪ್ರಕಾರ, ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆಯು ‘ಜೈಲರ್ 2’ ಚಿತ್ರದ ಒಟಿಟಿ ಹಕ್ಕುಗಳನ್ನು ಬರೋಬ್ಬರಿ 160 ಕೋಟಿ ರೂಪಾಯಿ ಮೊತ್ತಕ್ಕೆ ಖರೀದಿಸಿದೆ ಎನ್ನಲಾಗಿದೆ. ಇದು ತಮಿಳು ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಒಟಿಟಿ ಡೀಲ್ ಆಗಿದೆ. ಈಗಲೂ ರಜನಿಕಾಂತ್ ಅವರ ಸಿನಿಮಾಗಳಿಗೆ ಎಷ್ಟು ಬೇಡಿಕೆ ಇದೆ ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ ಆಗಿವೆ.

ಈ ಹಿಂದೆ ಕಮಲ್ ಹಾಸನ್ ಮತ್ತು ಮಣಿರತ್ನಂ ಅವರ ‘ಥಗ್ ಲೈಫ್’ ಸಿನಿಮಾ 150 ಕೋಟಿ ರೂಪಾಯಿಗೆ ಮಾರಾಟವಾಗಿ ದಾಖಲೆ ಬರೆದಿತ್ತು. ಈಗ ರಜನಿ ಆ ದಾಖಲೆಯನ್ನು ಅಳಿಸಿಹಾಕಿದ್ದಾರೆ. 160 ಕೋಟಿ ರೂಪಾಯಿ ಒಟಿಟಿ ಡೀಲ್ ಬಗ್ಗೆ ಚಿತ್ರತಂಡ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

‘ಜೈಲರ್’ ಮೊದಲ ಭಾಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಎಂಟ್ರಿ ಥಿಯೇಟರ್‌ಗಳಲ್ಲಿ ಸಂಚಲನ ಮೂಡಿಸಿತ್ತು. ಸೀಕ್ವೆಲ್‌ನಲ್ಲಿಯೂ ಶಿವಣ್ಣ ಅವರ ಪಾತ್ರ ಇರಲಿದ್ದು, ಅಭಿಮಾನಿಗಳಿಗೆ ಇದು ದೊಡ್ಡ ಸಮಾಚಾರ. ಚಿತ್ರದ ತಾರಾಗಣದಲ್ಲಿ ದಕ್ಷಿಣ ಭಾರತದ ಘಟಾನುಘಟಿ ಕಲಾವಿದರಿದ್ದಾರೆ. ಮೋಹನ್ ಲಾಲ್, ವಿಜಯ್ ಸೇತುಪತಿ, ರಮ್ಯಾ ಕೃಷ್ಣನ್, ಯೋಗಿ ಬಾಬು ಮುಂತಾದವರು ಇದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್

ಮೊದಲ ಭಾಗದ ಯಶಸ್ಸಿನಲ್ಲಿ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತ ಮತ್ತು ಹಾಡುಗಳ ಪಾತ್ರ ಬಹಳ ದೊಡ್ಡದಿತ್ತು. ‘ಜೈಲರ್ 2’ ಚಿತ್ರಕ್ಕೂ ಅವರೇ ಸಂಗೀತ ನೀಡುತ್ತಿದ್ದು, ಮತ್ತೊಮ್ಮೆ ಮಾಸ್ ಮ್ಯಾಜಿಕ್ ನಿರೀಕ್ಷಿಸಲಾಗಿದೆ. ಈ ಬಾರಿ ಸಿನಿಮಾದಲ್ಲಿ ಏನೆಲ್ಲ ವಿಶೇಷತೆ ಇರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ