AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧದ ವಾತಾವರಣ, ಚಿತ್ರಮಂದಿರದ ಬದಲಿಗೆ ಒಟಿಟಿಗೆ ಬರಲಿದೆ ಸಿನಿಮಾ

Bhool Chuk Maaf: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧಭೀತಿ ಶುರುವಾಗಿದೆ. ಯಾವುದೇ ಕ್ಷಣದಲ್ಲೂ ಯುದ್ಧ ಘೋಷಣೆ ಆಗಬಹುದು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ಬಾಲಿವುಡ್ ಸಿನಿಮಾ ಒಂದು ಚಿತ್ರಮಂದಿರದಲ್ಲಿ ಬಿಡುಗಡೆ ಅನ್ನು ರದ್ದು ಮಾಡಿ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡುತ್ತಿದೆ.

ಯುದ್ಧದ ವಾತಾವರಣ, ಚಿತ್ರಮಂದಿರದ ಬದಲಿಗೆ ಒಟಿಟಿಗೆ ಬರಲಿದೆ ಸಿನಿಮಾ
Bhool Chuk Maaf
ಮಂಜುನಾಥ ಸಿ.
|

Updated on:May 08, 2025 | 1:08 PM

Share

ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಮೊದಲಿಗಿಂತಲೂ ಹೆಚ್ಚು ಹದಗೆಟ್ಟಿದೆ. ಗಡಿಯಲ್ಲಿ ಬಿಗುವಿನ ವಾತಾವರಣವಿದೆ. ಭಾರತವು ಕೆಲ ದಿನಗಳ ಹಿಂದಷ್ಟೆ ಪಾಕ್​ನ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ ಹಲವು ಉಗ್ರರ ಕೊಂದಿದೆ. ಈ ದಾಳಿಯನ್ನು ಸಹಜವಾಗಿಯೇ ಪಾಕಿಸ್ತಾನ ಖಂಡಿಸಿದ್ದು, ಗಡಿಯಲ್ಲಿ ಅಪ್ರಚೋದಿತ ದಾಳಿ ಆರಂಭಿಸಿದೆ. ಇದೀಗ ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಭಾರತದಲ್ಲಿ ಈಗಾಗಲೇ ಕೆಲವೆಡೆ ಯುದ್ಧ ಸನ್ನಿವೇಶದ ಅಣಕು ಪ್ರದರ್ಶನ ಆರಂಭಿಸಲಾಗಿದೆ. ಇದೇ ಕಾರಣಕ್ಕೆ ಇದೀಗ ಬಾಲಿವುಡ್ (Bollywood) ಸಿನಿಮಾ ಒಂದು ಚಿತ್ರಮಂದಿರದ ಬದಲಿಗೆ ಒಟಿಟಿಗೆ ನೇರವಾಗಿ ಬಿಡುಗಡೆ ಆಗುವುದಾಗಿ ಘೋಷಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಿನಿಮಾಗಳು ಇದೇ ಹಾದಿ ಹಿಡಿಯಬಹುದಾಗಿದೆ.

ರಾಜ್​ಕುಮಾರ್ ರಾವ್, ವಾಮಿಕಾ ಗಬ್ಬಿ, ಸಂಜಯ್ ಮಿಶ್ರಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಭೂಲ್ ಚುಕ್ ಮಾಫ್’ ಸಿನಿಮಾ ಇದೇ ಶುಕ್ರವಾರ (ಮೇ 9) ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಬೇಕಿತ್ತು. ಸಿನಿಮಾದ ಪ್ರಚಾರವನ್ನೂ ಸಹ ಬಲು ಜೋರಾಗಿ ಮಾಡಲಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಇದೀಗ ಸಿನಿಮಾದ ಬಿಡುಗಡೆಯನ್ನು ರದ್ದು ಮಾಡಿ, ಸಿನಿಮಾ ಅನ್ನು ಚಿತ್ರಮಂದಿರಗಳ ಬದಲಾಗಿ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡಲಾಗುತ್ತಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಚಿತ್ರತಂಡ, ‘ಇತ್ತೀಚೆಗಿನ ದೇಶದಾದ್ಯಂತ ನಡೆದ ಯುದ್ಧ ಪರಿಸ್ಥಿತಿ ಅಣಕು ಪ್ರದರ್ಶನ (ಮಾಕ್ ಡ್ರಿಲ್) ಇನ್ನಿತರೆ ಬೆಳವಣಿಗೆಗಳನ್ನು ಗಮನಿಸಿ ಮ್ಯಾಡ್​ಲಾಕ್ ಸಿನಿಮಾ ಮತ್ತು ಅಮೆಜಾನ್ ಎಂಜಿಎಂ ಜಂಟಿಯಾಗಿ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರಮಂದಿರಗಳ ಬದಲಾಗಿ ನೇರವಾಗಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡುವ ನಿರ್ಧಾರ ಮಾಡಿದ್ದೇವೆ. ಮೇ 16 ರಿಂದ ಅಮೆಜಾನ್ ಪ್ರೈಂನಲ್ಲಿ ‘ಭೂಲ್ ಚುಕ್ ಮಾಫ್’ ಸಿನಿಮಾ ಬಿಡುಗಡೆ ಆಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ನಟ ರಾಜ್​ಕುಮಾರ್ ರಾವ್ ತೋಳಿನಲ್ಲಿ ಯಜುವೇಂದರ್ ಚಾಹಲ್ ಮಾಜಿ ಪತ್ನಿ

‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರಮಂದಿರಗಳಿಗಾಗಿ ನಿರ್ಮಾಣ ಮಾಡಲಾಗಿತ್ತು, ಪ್ರೇಕ್ಷಕರೊಂದಿಗೆ ಚಿತ್ರಮಂದಿರದಲ್ಲಿ ಈ ಸಿನಿಮಾದ ಬಿಡುಗಡೆಯನ್ನು ಸಂಭ್ರಮಿಸಲು ನಾವು ಉತ್ಸುಕರಾಗಿದ್ದೆವು. ಆದರೆ ನಮಗೆ ದೇಶದ ಹಿತ, ನಾಗರೀಕರ ಸುರಕ್ಷೆಯೆ ಮೊದಲ ಪ್ರಾಧಾನ್ಯತೆ ಹೀಗಾಗಿ ನಾವು ಈ ಸಿನಿಮಾವನ್ನು ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’ ಎಂದಿದೆ ನಿರ್ಮಾಣ ಸಂಸ್ಥೆ.

‘ಭೂಲ್ ಚುಕ್ ಮಾಫ್’ ಕಾಮಿಡಿ ಥ್ರಿಲ್ಲರ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ನಾಯಕ ಒಂದೇ ದಿನದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಪ್ರತಿ ರಾತ್ರಿ ಮಲಗಿದ ಬಳಿಕ ಮತ್ತೆ ಅದೇ ದಿನದಕ್ಕೆ ಏಳುತ್ತಿದ್ದಾನೆ ಆತನ ಪಾಲಿಗೆ ದಿನಾಂಕವೇ ಬದಲಾಗುತ್ತಿಲ್ಲ. ಅದು ಹಾಗೇಕೆ ಆಗಿದೆ ಎಂಬುದೇ ಸಿನಿಮಾದ ಕತೆ. ಸಿನಿಮಾದಲ್ಲಿ ಯಜುವೇಂಧರ್ ಚಾಹಲ್ ಮಾಜಿ ಪತ್ನಿ ಧನಶ್ರೀ ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Thu, 8 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ