AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚಾರ್ಯ’ ಒಟಿಟಿ ರಿಲೀಸ್​ಗೆ ದಿನಾಂಕ ಫಿಕ್ಸ್​; ರಾಮ್​ ಚರಣ್​ ನಟನೆಯ ಎರಡು ಸಿನಿಮಾ ಒಂದೇ ದಿನ ರಿಲೀಸ್

ಮೇ 20ರಂದು ‘ಆಚಾರ್ಯ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುತ್ತಿದೆ. ಈಗ ಮನೆಯಲ್ಲೇ ಕುರಿತು ಸಿನಿಮಾವನ್ನು ಒಟಿಟಿಯಲ್ಲಿ ಆನಂದಿಸಬಹುದು.

‘ಆಚಾರ್ಯ’ ಒಟಿಟಿ ರಿಲೀಸ್​ಗೆ ದಿನಾಂಕ ಫಿಕ್ಸ್​; ರಾಮ್​ ಚರಣ್​ ನಟನೆಯ ಎರಡು ಸಿನಿಮಾ ಒಂದೇ ದಿನ ರಿಲೀಸ್
ಮೆಗಾಸ್ಟಾರ್​ ಚಿರಂಜೀವಿ, ರಾಮ್​ ಚರಣ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 13, 2022 | 10:02 PM

Share

ಚಿರಂಜೀವಿ (Chiranjeevi) ಹಾಗೂ ರಾಮ್​ ಚರಣ್​ ಒಟ್ಟಾಗಿ ನಟಿಸಿದ ‘ಆಚಾರ್ಯ’ ಸಿನಿಮಾ (Acharya Movie) ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡಿತು. ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳಲಿಲ್ಲ. ರಾಮ್​ ಚರಣ್ ಹಾಗೂ ಚಿರಂಜೀವಿ ಒಟ್ಟಾಗಿ ಕಾಣಿಸಿಕೊಂಡ ಈ ಸಿನಿಮಾವನ್ನು ವಿಮರ್ಶಕರು ತೀವ್ರ ಟೀಕೆ ಮಾಡಿದರು. ಹಿಟ್​ ಚಿತ್ರಗಳನ್ನು ನೀಡಿ ಭೇಷ್ ಎನಿಸಿಕೊಂಡಿರುವ ಕೊರಟಾಲ ಶಿವ ಅವರು ಈ ಸಿನಿಮಾದಿಂದ ಸೋಲು ಕಂಡಿದ್ದಾರೆ. ಈಗ ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.

ಚಿರಂಜೀವಿ ಹಾಗೂ ರಾಮ್​ ಚರಣ್ ಅವರನ್ನು ಒಟ್ಟಾಗಿ ತೆರೆಮೇಲೆ ನೋಡಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಇದು ‘ಆಚಾರ್ಯ’ ಸಿನಿಮಾ ಮೂಲಕ ನನಸಾಗಿತ್ತು. ಆದರೆ, ಅಭಿಮಾನಿಗಳು ನಿರಾಸೆಗೊಂಡಿದ್ದರು. ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಮೂಡಿ ಬಂದಿರಲಿಲ್ಲ. ಹೀಗಾಗಿ, ಫ್ಯಾನ್ಸ್ ಸಿನಿಮಾ ಬಗ್ಗೆ ನಿರಾಸೆಗೊಂಡರು. ಹಂಚಿಕೆದಾರರು ದೊಡ್ಡ ನಷ್ಟ ಅನುಭವಿಸಿದರು. ಹೀಗಾಗಿ ಸಿನಿಮಾ ರಿಲೀಸ್ ಆದ ಒಂದು ತಿಂಗಳ ಒಳಗೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ
Image
ಜೀ5ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಜತೆ ಪ್ರಸಾರಕ್ಕೆ ಸಜ್ಜಾದ ಕನ್ನಡದ ‘ತಲೆದಂಡ’, ‘ಮುಗಿಲ್​ ಪೇಟೆ’ ಸಿನಿಮಾಗಳು
Image
ಒಟಿಟಿಗೆ ಕಾಲಿಟ್ಟ ‘ಮಗಳು ಜಾನಕಿ’ ಖ್ಯಾತಿಯ ಗಾನವಿ ಲಕ್ಷ್ಮಣ್ ನಟನೆಯ ‘ಭಾವಚಿತ್ರ’ ಸಿನಿಮಾ 
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

ಮೇ 20ರಂದು ‘ಆಚಾರ್ಯ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುತ್ತಿದೆ. ಸಾಕಷ್ಟು ಮಂದಿ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಮಿಸ್ ಮಾಡಿಕೊಂಡಿದ್ದಾರೆ. ಅಂತಹವರು ಈಗ ಮನೆಯಲ್ಲೇ ಕುರಿತು ಸಿನಿಮಾವನ್ನು ಒಟಿಟಿಯಲ್ಲಿ ಆನಂದಿಸಬಹುದು.

ಮೇ 20ಕ್ಕೆ ‘ಆರ್​ಆರ್​ಆರ್​’ ರಿಲೀಸ್

ಖ್ಯಾತ ನಿರ್ದೇಶಕ ರಾಜಮೌಳಿ ಅವರ ಬತ್ತಳಿಕೆಯಿಂದ ಬಂದ ‘ಆರ್​ಆರ್​ಆರ್​’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿರುವುದು ‘ಆರ್​ಆರ್​ಆರ್’ ಸಿನಿಮಾದ ಹೆಚ್ಚುಗಾರಿಕೆ. ಈಗ ಈ ಚಿತ್ರ ಒಟಿಟಿ ಪ್ಲಾಟ್​ಫಾರ್ಮ್​ಗೆ ಕಾಲಿಡುತ್ತಿದೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ಬಳಿಕ ಈಗ ಮನೆಮನೆಗಳಲ್ಲೂ ಮನರಂಜನೆ ನೀಡಲು ಈ ಸಿನಿಮಾ ಬರುತ್ತಿದೆ. ಮೇ 20ರಂದು ಈ ಚಿತ್ರ ಜೀ5 ಮೂಲಕ ಪ್ರಸಾರ ಆಗಲಿದೆ. ಮೂಲ ತೆಲುಗಿನ ಈ ಸಿನಿಮಾ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಿಗೆ ಡಬ್​ ಆಗಿದೆ. ಈ ಎಲ್ಲ ವರ್ಷನ್​ಗಳು ಕೂಡ ಮೇ 20ರಿಂದ ವೀಕ್ಷಣೆಗೆ ಲಭ್ಯವಾಗಲಿವೆ. ಈ ಮೂಲಕ ಒಂದೇ ದಿನ ರಾಮ್ ಚರಣ್​ ನಟನೆಯ ಎರಡು ಸಿನಿಮಾಗಳು ರಿಲೀಸ್ ಆದಂತೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್