
ಚಿರಂಜೀವಿ (Chiranjeevi) ಹಾಗೂ ರಾಮ್ ಚರಣ್ ಒಟ್ಟಾಗಿ ನಟಿಸಿದ ‘ಆಚಾರ್ಯ’ ಸಿನಿಮಾ (Acharya Movie) ಬಾಕ್ಸ್ ಆಫೀಸ್ನಲ್ಲಿ ಸೋಲು ಕಂಡಿತು. ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳಲಿಲ್ಲ. ರಾಮ್ ಚರಣ್ ಹಾಗೂ ಚಿರಂಜೀವಿ ಒಟ್ಟಾಗಿ ಕಾಣಿಸಿಕೊಂಡ ಈ ಸಿನಿಮಾವನ್ನು ವಿಮರ್ಶಕರು ತೀವ್ರ ಟೀಕೆ ಮಾಡಿದರು. ಹಿಟ್ ಚಿತ್ರಗಳನ್ನು ನೀಡಿ ಭೇಷ್ ಎನಿಸಿಕೊಂಡಿರುವ ಕೊರಟಾಲ ಶಿವ ಅವರು ಈ ಸಿನಿಮಾದಿಂದ ಸೋಲು ಕಂಡಿದ್ದಾರೆ. ಈಗ ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.
ಚಿರಂಜೀವಿ ಹಾಗೂ ರಾಮ್ ಚರಣ್ ಅವರನ್ನು ಒಟ್ಟಾಗಿ ತೆರೆಮೇಲೆ ನೋಡಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಇದು ‘ಆಚಾರ್ಯ’ ಸಿನಿಮಾ ಮೂಲಕ ನನಸಾಗಿತ್ತು. ಆದರೆ, ಅಭಿಮಾನಿಗಳು ನಿರಾಸೆಗೊಂಡಿದ್ದರು. ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಮೂಡಿ ಬಂದಿರಲಿಲ್ಲ. ಹೀಗಾಗಿ, ಫ್ಯಾನ್ಸ್ ಸಿನಿಮಾ ಬಗ್ಗೆ ನಿರಾಸೆಗೊಂಡರು. ಹಂಚಿಕೆದಾರರು ದೊಡ್ಡ ನಷ್ಟ ಅನುಭವಿಸಿದರು. ಹೀಗಾಗಿ ಸಿನಿಮಾ ರಿಲೀಸ್ ಆದ ಒಂದು ತಿಂಗಳ ಒಳಗೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.
ಮೇ 20ರಂದು ‘ಆಚಾರ್ಯ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುತ್ತಿದೆ. ಸಾಕಷ್ಟು ಮಂದಿ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಮಿಸ್ ಮಾಡಿಕೊಂಡಿದ್ದಾರೆ. ಅಂತಹವರು ಈಗ ಮನೆಯಲ್ಲೇ ಕುರಿತು ಸಿನಿಮಾವನ್ನು ಒಟಿಟಿಯಲ್ಲಿ ಆನಂದಿಸಬಹುದು.
ಮೇ 20ಕ್ಕೆ ‘ಆರ್ಆರ್ಆರ್’ ರಿಲೀಸ್
ಖ್ಯಾತ ನಿರ್ದೇಶಕ ರಾಜಮೌಳಿ ಅವರ ಬತ್ತಳಿಕೆಯಿಂದ ಬಂದ ‘ಆರ್ಆರ್ಆರ್’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿರುವುದು ‘ಆರ್ಆರ್ಆರ್’ ಸಿನಿಮಾದ ಹೆಚ್ಚುಗಾರಿಕೆ. ಈಗ ಈ ಚಿತ್ರ ಒಟಿಟಿ ಪ್ಲಾಟ್ಫಾರ್ಮ್ಗೆ ಕಾಲಿಡುತ್ತಿದೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ಬಳಿಕ ಈಗ ಮನೆಮನೆಗಳಲ್ಲೂ ಮನರಂಜನೆ ನೀಡಲು ಈ ಸಿನಿಮಾ ಬರುತ್ತಿದೆ. ಮೇ 20ರಂದು ಈ ಚಿತ್ರ ಜೀ5 ಮೂಲಕ ಪ್ರಸಾರ ಆಗಲಿದೆ. ಮೂಲ ತೆಲುಗಿನ ಈ ಸಿನಿಮಾ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಿಗೆ ಡಬ್ ಆಗಿದೆ. ಈ ಎಲ್ಲ ವರ್ಷನ್ಗಳು ಕೂಡ ಮೇ 20ರಿಂದ ವೀಕ್ಷಣೆಗೆ ಲಭ್ಯವಾಗಲಿವೆ. ಈ ಮೂಲಕ ಒಂದೇ ದಿನ ರಾಮ್ ಚರಣ್ ನಟನೆಯ ಎರಡು ಸಿನಿಮಾಗಳು ರಿಲೀಸ್ ಆದಂತೆ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.